ಪಡಿತರ-ಆಧಾರ್ ಜೋಡಣೆ: ದಕ್ಷಿಣ ಕನ್ನಡ, ಉಡುಪಿ ಶೇ. 100 ಗುರಿ ಸಾಧನೆ
ಇನ್ನೂ ಇದೆ ಎರಡು ತಿಂಗಳ ಕಾಲಾವಕಾಶ
Team Udayavani, Mar 3, 2020, 6:36 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಪಡಿತರ ಚೀಟಿಗೆ ಆಧಾರ್ ಜೋಡಣೆ ಪ್ರಕ್ರಿಯೆ ಶೇ. 100ರಷ್ಟು ಪೂರ್ಣಗೊಂಡಿದೆ. ದ.ಕ. ಜಿಲ್ಲೆಯಲ್ಲಿ 2,71,547 ಮತ್ತು ಉಡುಪಿ ಜಿಲ್ಲೆಯಲ್ಲಿ 1,89,942 ಪಡಿತರ ಚೀಟಿಗಳಿಗೆ ಆಧಾರ್ ಜೋಡಣೆಯಾಗುವ ಮೂಲಕ ಜಿಲ್ಲೆ ಗುರಿ ಸಾಧನೆ ಮಾಡಿದೆ.
ಪಡಿತರ ಚೀಟಿಗೆ ಆಧಾರ್ ಜೋಡಣೆ ಪ್ರಕ್ರಿಯೆ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ರಾಜ್ಯದ ಹಲವೆಡೆ ಇನ್ನೂ ಬಾಕಿ ಇದೆ. ಬಾಕಿ ಇರುವ ಜಿಲ್ಲೆಗಳಲ್ಲಿ ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ. ಗೋಪಾಲಯ್ಯ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ನಡುವೆ ದ.ಕ., ಉಡುಪಿ ಜಿಲ್ಲೆಯಲ್ಲಿ ಈ ಪ್ರಕ್ರಿಯೆ ಕಳೆದ ತಿಂಗಳಲ್ಲೇ ಶೇ. 100ರಷ್ಟು ಪೂರ್ಣಗೊಂಡಿದೆ.
11,03,444 ಮಂದಿಯಿಂದ ಆಧಾರ್ ಸೀಡಿಂಗ್
ದ.ಕ. ಜಿಲ್ಲೆಯಲ್ಲಿ ಒಟ್ಟು 11,03,444 ಮತ್ತು ಉಡುಪಿ ಜಿಲ್ಲೆಯಲ್ಲಿ 7,98,880 ಮಂದಿ ಪಡಿತರ ಚೀಟಿಗೆ ಆಧಾರ್ ಜೋಡಣೆ ಮಾಡಿಸಿಕೊಂಡಿದ್ದಾರೆ. ಈ ಪೈಕಿ ಮಂಗಳೂರಿನಲ್ಲಿ 3,90,524, ಬಂಟ್ವಾಳದಲ್ಲಿ 2,61,814, ಪುತ್ತೂರಿನಲ್ಲಿ 1,77,211, ಬೆಳ್ತಂಗಡಿಯಲ್ಲಿ 1,92,741, ಸುಳ್ಯದಲ್ಲಿ 81,154 ಮಂದಿ ಪಡಿತರಕ್ಕೆ ಆಧಾರ್ ಜೋಡಣೆ ಮಾಡಿಕೊಂಡವರು. ಹಳೆಯ ಪಡಿತರ ಚೀಟಿಗಳಿಗೆ ಪ್ರತ್ಯೇಕವಾಗಿ ಆಧಾರ್ ಜೋಡಿಸಿಕೊಳ್ಳಬೇಕಿತ್ತು. ಆದರೆ, ಹೊಸದಾಗಿ ಮಾಡಿಸಿಕೊಂಡವರಿಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ವೇಳೆಯೇ ಆಧಾರ್ ಜೋಡಣೆ ಮಾಡಿಸಲು ಅವಕಾಶ ಕಲ್ಪಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಚೀಟಿಯೊಂದಿಗೆ ಆಧಾರ್ ಜೋಡಣೆಯಲ್ಲಿ ಶೇ. 100 ಗುರಿ ಸಾಧನೆಯಾಗಿದೆ. ಹೊಸದಾಗಿ ಚೀಟಿ ಮಾಡಿಸುವವರಿಗೆ ಅರ್ಜಿ ಸಲ್ಲಿಕೆ ವೇಳೆಯೇ ಆಧಾರ್ ಸಂಖ್ಯೆಯನ್ನೂ ನೀಡುವ ಅವಕಾಶವಿರುತ್ತದೆ. ರಾಜ್ಯದಲ್ಲಿ ಗುರಿ ಸಾಧನೆ ಎಷ್ಟಾಗಿದೆ ಎಂಬ ಬಗ್ಗೆ ತಿಳಿದಿಲ್ಲ.
-ಡಾ| ಮಂಜುನಾಥನ್, ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ದ.ಕ., ಉಡುಪಿ ಜಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.