ರೈತರಿಗೆ ಭೂಮಿ ಹಕ್ಕು ಪತ್ರ ನೀಡಿ
Team Udayavani, Mar 3, 2020, 2:26 PM IST
ಹಗರಿಬೊಮ್ಮನಹಳ್ಳಿ: ಗ್ರಾಮೀಣಕೂಲಿ ಕಾರ್ಮಿಕರ ಸಂಘಟನೆ ಪದಾಧಿಕಾರಿಗಳು ಅಕ್ರಮ ಸಕ್ರಮದಡಿ ಸಾಗುವಳಿ ಮಾಡುತ್ತಿರುವ ರೈತರಿಗೆ ಭೂಮಿಯ ಹಕ್ಕುಪತ್ರ ನೀಡಬೇಕು ಎಂದು ಶಾಸಕ ಭೀಮಾನಾಯ್ಕಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದರು.
ಸಂಘಟನೆಯ ಸಂಚಾಲಕಿ ಅಕ್ಕಮಹಾದೇವಿ ಮಾತನಾಡಿ, ಪಾರಂ ನಮೂನೆ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಸರಕಾರ ಭೂಮಿಯ ಹಕ್ಕು ಪತ್ರ ನೀಡಬೇಕು. ತಾಲೂಕಿನಲ್ಲಿ ಕಳೆದ ಹಲವು ವರ್ಷಗಳಿಂದ ಭೂರಹಿತ ರೈತರು ಸರಕಾರಿ ಮತ್ತು ಅರಣ್ಯ ಪ್ರದೇಶವನ್ನು ಸಾಗುವಳಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಮಿ ಹಕ್ಕುಪತ್ರ ಹೊಂದಲು ಅಕ್ರಮಸಕ್ರಮದಡಿ ಸಾಕಷ್ಟು ರೈತರು ಅರ್ಜಿ ಸಲ್ಲಿಸಿ ವರ್ಷಗಳಾಗಿವೆ. ಆದರೆ, ಬಡ ರೈತರಿಗೆ ಜಮೀನಿನ ಹಕ್ಕುಪತ್ರ ನೀಡಲು ಸರಕಾರ ಮೀನಮೇಷ ಎಣಿಸುತ್ತಿದೆ. ತಿಂಗಳೊಳಗೆ ಭೂ ಮಂಜೂರಾತಿ ಸಮಿತಿ ಸಭೆ ನಡೆಸಿ ಹಕ್ಕುಪತ್ರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸರಕಾರ ರೈತರನ್ನು ಒಕ್ಕಲೆಬ್ಬಿಸುವುದನ್ನು ಬಿಟ್ಟು ರೈತಪರ ನಿಲುವುಗಳನ್ನು ಹೊಂದಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಶಾಸಕ ಎಸ್. ಭೀಮಾನಾಯ್ಕ ಮನವಿ ಸ್ವೀಕರಿಸಿ ಮಾತನಾಡಿ, ಅಕ್ರಮ ಸಕ್ರಮದಡಿ 94ಸಿ ನಮೂನೆ ಅರ್ಜಿ ಸಲ್ಲಿಸಿದ ರೈತರಿಗೆ ಜಮೀನಿನ ಹಕ್ಕುಪತ್ರ ನೀಡಲು ಅರಣ್ಯ ಮತ್ತು ಕಂದಾಯ ಇಲಾಖೆ ಸಚಿವರ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು. ಗ್ರಾಕೂಸ್ ಸಂಘಟನೆಯ ತ್ರೀವೇಣಿ, ಹನುಮಂತಪ್ಪ, ಕೊಟ್ರೇಶ, ಮಾಲವಿ ಗಂಗಮ್ಮ, ನಾಗಭೂಷಣ, ಬೆಣಕಲ್ ಕರಿಬಸಪ್ಪ, ಕೊಟ್ರೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.