ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ
Team Udayavani, Mar 4, 2020, 3:06 AM IST
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ (2019- 20) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬುಧವಾರ ಇತಿಹಾಸ, ಭೌತಶಾಸ್ತ್ರ ಹಾಗೂ ಮೂಲಗಣಿತ ವಿಷಯಗಳೊಂದಿಗೆ ಆರಂಭವಾಗಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವ ರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಿದ್ಧತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮುನ್ನೆಚ್ಚರಿಕೆ ಮತ್ತು ಭದ್ರತಾ ಕ್ರಮ ತೆಗೆದುಕೊಂಡಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರ, ನೀಲಿ ಅಥವಾ ಕಪ್ಪು ಬಣ್ಣದ ಪೆನ್, ಸ್ಕೇಲ್, ಪೆನ್ಸಿಲ್, ಸಿಂಪಲ್ ಕ್ಯಾಲ್ಕುಲೇಟರ್, ಮುಳ್ಳು ಮಾತ್ರ ಹೊಂದಿರುವ ಸಾಮಾನ್ಯ ಕೈಗಡಿಯಾರ, ಟ್ರಾನ್ಸ್‌ಪರೆಂಟ್ ವಾಟರ್ ಬಾಟಲ್, ಔಷಧ, ಕನ್ನಡ ಮತ್ತು ಬಸ್ ಪಾಸ್ ಮರೆಯದೆ ತೆಗೆದುಕೊಂಡು ಹೋಗ ಬೇಕು. ಇದನ್ನು ಹೊರತುಪಡಿಸಿ, ಅಗತ್ಯವಿಲ್ಲದ ಯಾವುದೇ ವಸ್ತು ಕೊಂಡೊ ಯ್ಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗುವ ವಿದ್ಯಾರ್ಥಿ ಗಳು, ಕೆಎಸ್‌ಆರ್‌ಟಿಸಿ-ಬಿಎಂಟಿಸಿ ಬಸ್‌ಗಳಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ. ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದಿಂದ ಮನೆಗೆ ಮತ್ತು ಮನೆ ಯಿಂದ ಪರೀಕ್ಷಾ ಕೇಂದ್ರಕ್ಕೆ ಶುಲ್ಕ ರಹಿತ ಪ್ರಯಾಣಕ್ಕೆ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡ ಲಾಗಿದೆ ಎಂದು ಈ ಹಿಂದೆಯೇ ಕೆಎಸ್‌ಆರ್‌ಟಿಸಿ ಮತ್ತು ಬಿಎಂಸಿಟಿ ಆದೇಶ ಹೊರಡಿಸಿದೆ.
ಸಚಿವರ ಅಭಯ
ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್‌ಬುಕ್ ಖಾತೆ ಮೂಲಕ ಅಭಯ ಹಾಗೂ ನೈತಿಕ ಬಲ ತುಂಬಿದ್ದಾರೆ. ಈ ಮೂಲಕ ಪರೀಕ್ಷಾ ಭದ್ರತಾ ಕ್ರಮ ಮತ್ತು ಸರ್ಕಾರದಿಂದ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮದ ಕುರಿತು ಮಕ್ಕಳ, ಪಾಲಕ ಪೋಷಕರ ಗಮನಕ್ಕೆ ತಂದಿದ್ದಾರೆ.
“ಪಿಯುಸಿ ಪರೀಕ್ಷೆ ಬುಧವಾರ ಆರಂಭಗೊಳ್ಳಲಿದ್ದು, ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸದ್ಯದಲ್ಲೇ ಆರಂಭಗೊಳ್ಳಲಿವೆ. ಈ ಎರಡೂ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ಅತಿ ಪ್ರಮುಖ ಘಟ್ಟ. ಹೀಗಾಗಿ ಉತ್ತಮ ಅಂಕಗಳಿಂದ ಉತ್ತೀರ್ಣರಾಗಬೇಕೆಂಬ ಮಹದಾಸೆ ಹೊಂದಿದ್ದೀರಿ. ಸರ್ಕಾರವೂ ನಿಮ್ಮೆಲ್ಲರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳು ಸುಲಲಿತವಾಗಿ ನಡೆಯಲು ಕ್ರಮ ಕೈಗೊಂಡಿದೆ’ ಎಂದು ವಿದ್ಯಾರ್ಥಿಗಳಿಗೆ ಅಭಯ ನೀಡಿದ್ದಾರೆ.
ವಿದ್ಯಾರ್ಥಿಗಳೇ ಗಮನಿಸಿ..: ಬೆಳಗ್ಗೆ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೊರಡುವ ಮುನ್ನ ಪ್ರವೇಶ ಪತ್ರ, ಪೆನ್, ಸ್ಕೇಲ್, ಸಾಮಾನ್ಯ ಕ್ಯಾಲ್ಕುಲೇಟರ್, ಸಾಮಾನ್ಯ ಕೈಗಡಿಯಾರ, ಔಷಧ, ಕನ್ನಡ ಇತ್ಯಾದಿ ಮರೆಯದೇ ಕೊಂಡೊಯ್ಯಬೇಕು. ಪ್ರವೇಶ ಪತ್ರ ಇಲ್ಲದೇ ಪರೀಕ್ಷಾ ಕೇಂದ್ರ ಒಳಗೆ ಪ್ರವೇಶವಿಲ್ಲ. ಗೊಂದಲ ಮಾಡಿಕೊಳ್ಳದೇ ಪ್ರವೇಶ ಪತ್ರ ಮತ್ತು ಇತರೆ ಅಗತ್ಯ ವಸ್ತು ತಮ್ಮ ಬಳಿಯೇ ಇರುವುದನ್ನು ಖಚಿತಪಡಿಸಿಕೊಂಡೇ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೊರಡಬೇಕು. ಅಲ್ಲದೆ, ಪಾಲಕ, ಪೋಷಕರೂ ಮಕ್ಕಳು ಮನೆಯಿಂದ ಪರೀಕ್ಷೆಗೆ ಹೊರಡುವಾಗ ಅಂತಿಮ ಹಂತದ ಪರಿಶೀಲನೆ ನಡೆಸುವುದು ಉತ್ತಮ ಎಂದು ತಿಳಿಸಲಾಗಿದೆ.
ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಅಗಣಿತ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ. ಭವಿಷ್ಯ ಉಜ್ವಲವಾಗಲಿ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ನಾಡಿನ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ. ಪರೀಕ್ಷಾ ಯಶಸ್ಸು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೆಟ್ಟಿಲಾಗಲಿದೆ.
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.