![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Mar 4, 2020, 3:03 AM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ರಾಜ್ಯದಲ್ಲಿ ಅವಕಾಶ ನೀಡಬಾರದು ಎಂದು ವಿಧಾನ ಪರಿಷತ್‌ನಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯರು ಸಭಾಪತಿ ಅವರಿಗೆ ಪ್ರಸ್ತಾವನೆ ರೂಪದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಸ್ತಾಪಕ್ಕೆ ಕಾಂಗ್ರೆಸ್‌ನ ಐವರು ಸದಸ್ಯರು ಸಹಿ ಮಾಡಿದ್ದು, ಬುಧವಾರ ಕಲಾಪದಲ್ಲಿ ಈ ವಿಚಾರ ಪ್ರಸ್ತಾಪವಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಮಾಹಿತಿ ನೀಡಿದರು. ಸಿಎಎ ಕಾಯಿದೆ ಧರ್ಮದ ಆಧಾರದಲ್ಲಿ ಜಾರಿ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿವೆ. ಹೀಗಾಗಿ ಕರ್ನಾಟಕದಲ್ಲೂ ಅವಕಾಶ ನೀಡಬಾರದು ಎಂದು ಕೋರಿದ್ದೇವೆ. ಪ್ರತಿಪಕ್ಷದ ಎಲ್ಲಾ ಸದಸ್ಯರು ಇದಕ್ಕೆ ಬೆಂಬಲ ನೀಡುವ ವಿಶ್ವಾಸವಿದೆ. ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆಯೂ ಇದೇ ವಿಚಾರವಾಗಿ ನಡೆಯುವ ಸಾಧ್ಯತೆ ಇರಬಹುದು. ಪರಿಷತ್‌ನಲ್ಲಿ ಈ ವಿಷಯ ಚರ್ಚೆಗೆ ಬಂದ ವೇಳೆ ಇದನ್ನು ಧರ್ಮದ ಆಧಾರದಲ್ಲಿ ಜಾರಿ ಮಾಡಲು ಕೇಂದ್ರ ಮುಂದಾಗಿದೆ. ಈ ಬೆಳವಣಿಗೆ ಸಂವಿಧಾನ ಬಾಹಿರ ಎಂಬುದನ್ನು ವಿವರಿಸಿ ಕಾಯ್ದೆ ಜಾರಿಗೆ ಅವಕಾಶ ನೀಡದಂತೆ ನಿರ್ಣಯ ಕೈಗೊಳ್ಳಲು ಆಗ್ರಹಿಸಲಿದ್ದೇವೆಂದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.