ಸೇನೆಗೆ ಸೇರಲು ಜಿಲ್ಲಾಧಿಕಾರಿ ಕರೆ

ಸೇನಾ ನೇಮಕಾತಿಗೆ ದ.ಕ. ಜಿಲ್ಲೆಯಿಂದ ಕಡಿಮೆ ನೋಂದಣಿ!

Team Udayavani, Mar 4, 2020, 12:27 AM IST

dkdc

ಮಂಗಳೂರು: ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಎ. 4ರಿಂದ 14ರ ವರೆಗೆ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಗೆ ಈವರೆಗೆ ಒಟ್ಟು 18,000 ಮಂದಿ ನೋಂದಣಿ ಮಾಡಿಕೊಂಡಿದ್ದು, ದಕ್ಷಿಣ ಕನ್ನಡದಿಂದ ಕೇವಲ 300 ಮಂದಿ ಮಾತ್ರ ನೋಂದಾಯಿಸಿದ್ದಾರೆ. ಹೀಗಾಗಿ ಸೇನೆಗೆ ಸೇರಲು ಆಸಕ್ತಿ ಇರುವವರು ನೋಂದಣಿ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಮಂಗಳವಾರ ತಮ್ಮ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇನಾ ನೇಮಕಾತಿ ರ್ಯಾಲಿಗೆ ಫೆ. 16ರಿಂದ ನೋಂದಣಿ ನಡೆಯುತ್ತಿದೆ. ದ.ಕ. ಜಿಲ್ಲೆ ಸೇರಿದಂತೆ 11 ಜಿಲ್ಲೆಗಳ ಯುವಕರನ್ನು ಈ ರ್ಯಾಲಿಯಲ್ಲಿ ಸೇನೆಗೆ ಸೇರ್ಪಡೆಗೊಳಿಸಲಾಗುತ್ತದೆ. ಆದರೆ ದ.ಕ., ಉಡುಪಿ, ಶಿವಮೊಗ್ಗ ಜಿಲ್ಲೆಗಳಿಂದ ಅತಿ ಕಡಿಮೆ ನೋಂದಣಿಯಾಗಿದ್ದು, ಹೆಚ್ಚಿನ ಸಂಖ್ಯೆಯ ಯುವಕರು ಸೇನೆ ಸೇರಲು ಮುಂದಾಗಬೇಕು ಎಂದರು. ದ.ಕ. ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇನೆ ಸೇರುವಂತಾಗಲು ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸುವ ನಿಟ್ಟಿನಲ್ಲಿ ಸೇನೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ವಿವಿಧ ಹುದ್ದೆಗಳು
ಉಡುಪಿಯ ಸೇನಾ ನೇಮಕಾತಿ ರ್ಯಾಲಿಗೆ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಮಾ. 20ರ ವರೆಗೆ ಅವಕಾಶವಿದೆ. 17-21 ವರ್ಷದೊಳಗಿನ ಅವಿವಾಹಿತ ಯುವಕರಿಗೆ ಸೋಲ್ಜರ್‌ ಜನರಲ್‌ ಡ್ನೂಟಿ (ಆಲ್‌ ಆಮ್ಸ್‌ì), ಸೋಲ್ಜರ್‌ ಟೆಕ್ನಿಕಲ್, ಸೋಲ್ಜರ್‌ ಟೆಕ್‌ ನರ್ಸಿಂಗ್‌ ಅಸಿಸ್ಟೆಂಟ್‌/ ನರ್ಸಿಂಗ್‌ ಸಹಾಯಕ ಪಶುವೈದ್ಯ, ಸೋಲ್ಜರ್‌ ಕ್ಲರ್ಕ್‌/ ಸ್ಟೋರ್‌ ಕೀಪರ್‌ ಟೆಕ್ನಿಕಲ್‌ (ಆಲ್‌ ಆಮ್ಸ್‌ì), 10ನೇ ತರಗತಿ ಪಾಸ್‌ ಆದವರಿಗೆ ಸೋಲ್ಜರ್‌ ಟ್ರೇಡ್ಸನ್‌ (ಆಲ್‌ ಆರ್ಮ್ಸ್), ಮತ್ತು 8ನೇ ತರಗತಿ ಪಾಸ್‌ ಆದವರಿಗೆ ಸೋಲ್ಜರ್‌ ಟ್ರೇಡ್ಸನ್‌ (ಆಲ್‌ ಆಮ್ಸ್‌) ಹುದ್ದೆಗಳು ಲಭ್ಯ ಇವೆ. www.joinindianarmy.nic.in ನಲ್ಲಿ ಹೆಸರು ನೋಂದಾಯಿಸಬಹುದು.

ಉತ್ತಮ ವೇತನ
ಸೇನೆಯ ಅಸಿಸ್ಟೆಂಟ್‌ ರಿಕ್ರೂಟ್‌ಮೆಂಟ್‌ ಅಧಿಕಾರಿ ಕರ್ನಲ್‌ ಎಫ್.ಪಿ. ದುಬಾಶ್‌ ಮಾತನಾಡಿ, ದ.ಕ. ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿರುವುದರಿಂದ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಯಾಕೆ ಹೋಗಬೇಕು ಎನ್ನುವ ಮನೋಭಾವನೆಯೂ ಸೇನಾ ಸೇರ್ಪಡೆ ನಿರಾಸಕ್ತಿಗೆ ಕಾರಣವಾಗಿರಬಹುದು. ಆದರೆ ಸೇನೆಯಲ್ಲಿ ಈಗ ಆಕರ್ಷಕ ವೇತನ ನೀಡಲಾಗುತ್ತಿದೆ. 10ನೇ ತರಗತಿ ವಿದ್ಯಾರ್ಹತೆ ಹೊಂದಿ ರ್ಯಾಲಿಯಲ್ಲಿ ಆಯ್ಕೆಯಾದವರಿಗೆ ತರಬೇತಿ ಅವಧಿಯಲ್ಲೇ ಮಾಸಿಕ 32,000 ರೂ. ವೇತನ ನೀಡಲಾಗುತ್ತದೆ. ಬಳಿಕ ವೇತನ ಹೆಚ್ಚಲಿದೆ ಎಂದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.