ಪ್ರತಿ ಜಿಲ್ಲೆಯಲ್ಲೂ ಜಾನಪದ ಲೋಕ
ಕರ್ನಾಟಕ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಟಿ.ತಿಮ್ಮೇಗೌಡ ಇಂಗಿತ
Team Udayavani, Mar 4, 2020, 3:17 PM IST
ಚಿಕ್ಕಮಗಳೂರು: ಅಳಿವಿನಂಚಿನಲ್ಲಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಜಾನಪದ ಲೋಕವನ್ನು ನಿರ್ಮಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಟಿ.ತಿಮ್ಮೇಗೌಡ ಹೇಳಿದರು.
ನಗರದ ಸುವರ್ಣ ಕನ್ನಡ ಭವನದಲ್ಲಿ ನಡೆದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕಗಳು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಡಳಿತದಿಂದ ಜಾಗವನ್ನು ಪಡೆದು ಜಾನಪದ ಲೋಕವನ್ನು ನಿರ್ಮಿಸಿ, ಅದರಲ್ಲಿ ನಮ್ಮ ಪೂರ್ವಿಕರು ಬಳಸುತ್ತಿದ್ದ ಜಾನಪದ ಪರಿಕರಗಳನ್ನು ಪ್ರದರ್ಶಿಸಬೇಕು. ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಕಾರ್ಯಕ್ರಮಗಳನ್ನು ನಡೆಸಬೇಕು. ಆ ಮೂಲಕ ಸಾರ್ವಜನಿಕರಲ್ಲಿ ಜಾನಪದದ ಬಗ್ಗೆ ಆಸಕ್ತಿ ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.
ಜಾನಪದ ಕಾರ್ಯಕ್ರಮಗಳನ್ನು ನಡೆಸುವಾಗ ಸ್ಥಳೀಯ ಜನಪ್ರತಿನಿ ಧಿಗಳು, ದಾನಿಗಳು ಮತ್ತು ಸಂಘ-ಸಂಸ್ಥೆಗಳನ್ನು ಜೊತೆಗೆ ಸೇರಿಸಿಕೊಳ್ಳಬೇಕು. ವೇದಿಕೆ ಕಾರ್ಯಕ್ರಮಗಳನ್ನು ಕಡಿಮೆ ಮಾಡಿ ಜಾನಪದ ಕಲೆಗಳ ಪ್ರದರ್ಶನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಹಳ್ಳಿ ಹಳ್ಳಿಗಳಲ್ಲಿ ಎಲೆಮರೆ ಕಾಯಿಯಂತೆ ಬದುಕುತ್ತಿರುವ ಜಾನಪದ ಕಲಾವಿದರನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ಮೂಲಕ ಅವರನ್ನು ಬೆಳಕಿಗೆ ತರಬೇಕು. ಕೇಂದ್ರ ಸಮಿತಿ ರಾಜ್ಯದಲ್ಲಿರುವ ಜಾನಪದ ಕಲಾವಿದರ ಕೈಪಿಡಿಯನ್ನು ಹೊರತರಲಿದ್ದು, ಅದಕ್ಕೆ ಆಯಾ ಜಿಲ್ಲೆಗಳ ಕಲಾವಿದರ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
ನಿವೃತ್ತ ಡಿಜಿಪಿ ಕೆ.ವಿ.ಠಾಕೂರ್ ಮಾತನಾಡಿ, ಜಾನಪದವನ್ನು ಮುಂದಿನ ಪೀಳಿಗೆಗೆ ಉಳಿಸದಿದ್ದಲ್ಲಿ ನಮ್ಮ ಸಂಸ್ಕೃತಿ ನಾಶವಾಗುತ್ತದೆ ಎಂದು ಎಚ್ಚರಿಸಿದರು. ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಮಾನಸದಿಂದ ದೂರಾಗುತ್ತಿರುವ ಜಾನಪದವನ್ನು ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಜಾನಪದ ಕಲಾವಿದರ ಬದುಕು ಮತ್ತು ಸಾಧನೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ಅಳವಡಿಸುವಂತೆ ಸಧ್ಯದಲ್ಲೇ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ, ವಿಜಯಾ ಬ್ಯಾಂಕ್ ನಿವೃತ್ತ ಅಧಿಕಾರಿ ಕೃಷ್ಣೇಗೌಡ, ಹಿರಿಯ ವೀರಗಾಸೆ ಕಲಾವಿದ ಮಾಳೇನಹಳ್ಳಿ ಬಸಪ್ಪ ಉಪಸ್ಥಿತರಿದ್ದರು. ಕರ್ನಾಟಕ ಜಾನಪದ ಪರಿಷತ್ತಿನ ವಿವಿಧ ತಾಲೂಕು ಪದಾಧಿಕಾರಿಗಳು ಮತ್ತು ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕೆ.ಸುಜಾತಾ ಕಾರ್ಯಕ್ರಮವನ್ನು ನಿರೂಪಿಸಿ, ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಬಿ.ವಿರೂಪಾಕ್ಷ ಸ್ವಾಗತಿಸಿ, ತಾಲೂಕು ಉಪಾಧ್ಯಕ್ಷ ಸಂದೀಪ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.