ನಟ ದರ್ಶನ್ಗೆ ಅನಾರೋಗ್ಯ
Team Udayavani, Mar 5, 2020, 3:02 AM IST
ಮೈಸೂರು: ನಟ ದರ್ಶನ್ ಅವರು ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ನಗರದ ಹೊರವಲಯದ ತಮ್ಮ ಫಾರ್ಮ್ಹೌಸ್ನಲ್ಲಿ ಕಳೆದ ಎರಡು ದಿನಗಳಿಂದ ನೆಚ್ಚಿನ ಕುದುರೆಗಳ ಆರೈಕೆಯಲ್ಲಿ ತೊಡಗಿದ್ದ ದರ್ಶನ್ಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಬುಧವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತು. ತಕ್ಷಣ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.