ನೀರಿನ ವ್ಯವಸ್ಥೆಗೆ ಆದ್ಯತೆ ನೀಡಿ

ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಎಲ್ಲ ಕೆರೆಗಳಿಗೆ ನೀರು ತುಂಬಿಸಿ

Team Udayavani, Mar 5, 2020, 12:40 PM IST

5-March-08

ಯಾದಗಿರಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಹೇಳಿದರು. ನಗರದ ಜಿಲ್ಲಾಧಿ ಕಾರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುಬಹುದು. ಹೀಗಾಗಿ ಜಿಲ್ಲೆಯ ನಗರ, ಗ್ರಾಮ, ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ನೀರಿನ ಕೂರತೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ನೆರೆ ರಾಜ್ಯ ತೆಲಂಗಾಣದಲ್ಲಿ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ರಣ ಬಿಸಿಲು ಉಂಟಾಗಬಹುದು. ಹೀಗಾಗಿ ನಾಲ್ಕು ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಬಿಸಿಲಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಯಾವುದೇ ರೀತಿ ರೋಗ ರುಜನಿಗಳು ಹರಡದಂತೆ ಡಂಗೂರ ಮೂಲಕ ಜನರಿಗೆ ತಿಳಿಸಬೇಕು ಎಂದರು.

ಇನ್ನು ನಗರಸಭೆ ಕಸ ತುಂಬುವ ವಾಹನಗಳ ಮೈಕ್‌ ಮುಖಾಂತರ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಅಲ್ಲದೇ ಜಿಲ್ಲೆಯ ಅಂಗನವಾಡಿಗಳಲ್ಲಿ, ಪ್ರತಿಯೊಂದು ಬಸ್‌ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಬೇಸಿಗೆ ಹೆಚ್ಚಿದಂತೆ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಜಾನುವಾರುಗಳಿಗೆ ನೀರು ಕುಡಿಯಲು ತೊಂದರೆಯಾಗಲಿದ್ದು, ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು. ಜೊತೆಗೆ ಜಾನುವಾರುಗಳ ಆರೋಗ್ಯ ದೃಷ್ಟಿಯಿಂದ ಔಷಧಗಳ ವ್ಯವಸ್ಥೆ ಸರಿಯಾಗಿ ಮಾಡಬೇಕು ಎಂದರು.

ಬೇಸಿಗೆಗೆ ಸಂಬಂಧಪಟ್ಟಂತೆ ವಿವಿಧ ಸಮಸ್ಯೆಗಳ ಬಗ್ಗೆ ನಿಮ್ಮ ಕೆಳ ಹಂತದ ಅಧಿಕಾರಿಗಳ ಜೊತೆಗೆ ಟಾಸ್ಕ್ ಪೋರ್ಸ್‌ ಸಭೆ ಮಾಡಬೇಕು. ಅಲ್ಲದೇ ಹೊಸ ವಾಟ್ಸ್‌ ಆಪ್‌ ಗ್ರೂಪ್‌ ಕ್ರಿಯೆಟ್‌ ಮಾಡಿ ಅದರಲ್ಲಿ ದಿನನಿತ್ಯ ನಡೆಯುವ ಕಾರ್ಯಕ್ರಮಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ್‌ ಸೋನಾವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ತಾಲೂಕು ತಹಶೀಲ್ದಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.