ರಾಜ್ಯ ಬಜೆಟ್‌ನಲ್ಲಿ ಹಾಸನ ಜಿಲ್ಲೆಗೆ ಭಾರೀ ನಿರಾಸೆ


Team Udayavani, Mar 6, 2020, 3:00 AM IST

rajya-badge

ಹಾಸನ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದ 2020 -21ನೇ ಸಾಲಿನ ಬಜೆಟ್‌ನಲ್ಲಿ ಹಾಸನ ಜಿಲ್ಲೆಗೆ ನಿರೀಕ್ಷಿದ ಯಾವೊಂದು ಅಭಿವೃದ್ಧಿ ಯೋಜನೆಯನ್ನೂ ಘೋಷಣೆ ಮಾಡದೇ ಜಿಲ್ಲೆಯ ಜನರಿಗೆ ಭಾರೀ ನಿರಾಸೆ ಮೂಡಿಸಿದ್ದಾರೆ.

ಹಿಂದಿನ ಎರಡು ವರ್ಷಗಳಲ್ಲಿ ಅಂದರೆ 2018-19 ಮತ್ತು 2019 -20 ನೇ ಸಾಲಿನಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರ ಸರ್ಕಾರ ಜಿಲ್ಲೆಯ ಜನರ ನಿರೀಕ್ಷೆ ಮೀರಿದ ಭರಪೂರ ಅಭಿವೃದ್ಧಿ ಯೋಜನೆಗಳನ್ನು ಹಾಸನ ಜಿಲ್ಲೆಗೆ ಘೋಷಣೆ ಮಾಡಿತ್ತು. ಆ ಎರಡು ವರ್ಷಗಳ ಬಜೆಟ್‌ನಿಂದ ಹರ್ಷದ ಕಡಲಲ್ಲಿ ತೇಲಿದ್ದ ಜಿಲ್ಲೆಯ ಜನರಿಗೆ ಈ ಬಾರಿಯ ಬಜೆಟ್‌ ನೋಡಿ ನಿರೀಕ್ಷೆಯಂತೆಯೇ ನಿರಾಸೆ ಆವರಿಸಿದೆ.

ಹಳೇ ಯೋಜನೆಗಳ ಕಡೆಗಣನೆ: ಖ್ಯಾತ ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರ ಹುಟ್ಟೂರು ಚನ್ನರಾಯಪಟ್ಟಣ ತಾಲೂಕು ಸಂತೆಶಿವರ ಗ್ರಾಮದ ಅಭಿವೃದ್ಧಿಗೆ 5 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದು ಬಿಟ್ಟರೆ ಜಿಲ್ಲೆಯನ್ನು ಸಂಪೂರ್ಣವಾಗಿ ಮುಖ್ಯಮಂತ್ರಿಯವರು ಕಡೆಗಣಿಸಿದ್ದಾರೆ. ಹಿಂದಿನ ವರ್ಷಗಳಲ್ಲಿ ಜಿಲ್ಲೆಗೆ ಮಂಜೂರಾಗಿದ್ದ ಯೋಜನೆಗಳಿಗೆ ಮರುಜೀವ ಕೊಟ್ಟು ಮುಂದುವರಿಸುವ ಸಮಾಧಾನಕರ ಘೋಷಣೆಯನ್ನೂ ಬಜೆಟ್‌ನಲ್ಲಿ ಪ್ರಸ್ತಾಪಿಸಿಲ್ಲ.

ಎಚ್‌.ಡಿ.ಕುಮಾರಸ್ವಾಮಿ ಅವರ ಎರಡು ಬಜೆಟ್‌ಗಳಲ್ಲಿ ಹಾಸನ ಜಿಲ್ಲೆಗೆ ಘೋಷಣೆಯಾಗುತ್ತಿದ್ದ ಅಭಿವೃದ್ಧಿ ಯೋಜನೆಗಳಿರಲಿ, ಪ್ರತಿ ಸಚಿವ ಸಂಪುಟ ಸಭೆಯಲ್ಲಿಯೂ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಕೊಟ್ಯಂತರ ರೂ. ಯೋಜನೆಗಳು ಅನುಮೋದನೆಯಾಗುತ್ತಿದ್ದವು. ಅಂತಹ ಯಾವುದಾದರೊಂದು ಹಾಸನ ಜಿಲ್ಲೆಯ ಯೋಜನೆಯೂ ಯಡಿಯೂರಪ್ಪ ಅವರು ಮಂಡಿಸಿದ್ದ ಬಜೆಟ್‌ನಲ್ಲಿ ಇಲ್ಲ ಎಂಬುದು ವಿಷಾದದ ಸಂಗತಿ.

ವಿಮಾನ ನಿಲ್ದಾಣ ಮರೀಚಿಕೆ: ಬಹುಮುಖ್ಯವಾಗಿ ಹಾಸನದ ವಿಮಾನ ನಿಲ್ದಾಣ ನಿರ್ಮಾಣ, ಅರಸೀಕೆರೆಗೆ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು, ಹಾಸನ ನಗರದ ಮೂಲ ಸೌಕರ್ಯಗಳ ಯೋಜನೆ, ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯವಾಗಿರುವ ಕಾಡಾನೆಗಳ ಉಪಟಳ ತಡೆ, ಚನ್ನರಾಯಪಟ್ಟಣ, ಬೇಲೂರು ತಾಲೂಕಿನಲ್ಲಿ ಏತ ನೀರಾವರಿ ಯೋಜನೆಗಳ ನಿರ್ಮಾಣದ ಯೋಜನೆಗಳು ಬಜೆಟ್‌ನಲ್ಲಿ ಪ್ರಸ್ತಾಪವಾಗಬಹುದೆಂಬ ನಿರೀಕ್ಷೆಯಿತ್ತು.

ಆದರೆ ಯಾವೊಂದು ಏತ ನೀರಾವರಿ ಯೋಜನೆಯ ಬಗ್ಗೆಯೂ ಪ್ರಸ್ತಾಪವಾಗಿಲ್ಲ. ಆದರೆ ಬಜೆಟ್‌ನಲ್ಲಿ ರಾಜ್ಯದ ಏತನೀರಾವರಿ ಯೋಜನೆಗಳಿಗಾಗಿಯೇ 5ಸಾವಿರ ಕೋಟಿ ರೂ.ಗಳನ್ನು ಮುಂದಿನ ವರ್ಷ ಖರ್ಚು ಮಾಡುವುದಾಗಿ ಮುಖ್ಯಮಂತ್ರಿ ಪ್ರಸ್ತಾಪ ಮಾಡಿದ್ದಾರೆ. ಆಯಾ ಕ್ಷೇತ್ರದ ಶಾಸಕರು ಪ್ರಭಾವ ಬೀರಿ ಯೋಜನೆಗಳನ್ನು ಮಂಜೂರು ಮಾಡಿಸಿಕೊಳ್ಳಬಹುದೆನೋ ಎಂಬ ಸಣ್ಣ ಆಸೆಯೊಂದನ್ನು ಇಟ್ಟುಕೊಳ್ಳಬಹದು ಅಷ್ಟೇ.

ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲೆಯಲ್ಲಿ ವಿಫ‌ುಲ ಅವಕಾಶಗಳಿವೆ. ಆದರೆ ಆ ಬಗ್ಗೆಯೂ ಬಜೆಟ್‌ನಲ್ಲಿ$ ಪ್ರಸ್ತಾಪವಾಗಿಲ್ಲ. ಪ್ರವಾಸೋದ್ಯಮದಲ್ಲಿ ಮುಖ್ಯವಾಗಿ ಗೊರೂರು ಹೇಮಾವತಿ ಜಲಾಶಯದ ಮುಂಭಾಗ ಕೆಆರ್‌ಎಸ್‌ ಮಾದರಿಯ ಉದ್ಯಾನವನ ನಿರ್ಮಾಣದ ಯೋಜನೆ ಸಿದ್ಧವಾಗಿತ್ತು. ಜೈಪುರದ ಸಂಸ್ಥೆಯೊಂದು ಯೋಜನೆಯ ನೀಲ ನಕ್ಷೆಯನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸಿತ್ತು. ಜೆಡಿಎಸ್‌ – ಕಾಂಗ್ರೆಸ್‌ ಸರ್ಕಾರದಲ್ಲಿ ಹಾಸನ ಜಿಲ್ಲೆಯ ಮಹತ್ವಾಕಾಂಕ್ಷೆಯ ಯೋಜನೆಯೂ ಅದಾಗಿತ್ತು. ಆದರೆ ಆ ಯೋಜನೆಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪದ ನಿರೀಕ್ಷೆಯಿತ್ತು. ಆದರೆ ಆ ನಿರೀಕ್ಷೆಯೂ ಹುಸಿಯಾಗಿದೆ.

ಹಾಸನ ಅಭಿವೃದ್ಧಿಯ ಪ್ರಸ್ತಾಪವಿಲ್ಲ: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಯೋಜನೆಯಂತೆ ಏತನೀರಾವರಿಗಳಿಂದ ಪ್ರಾಯೋಗಿಕವಾಗಿ ನೀರೆತ್ತುವ ಕಾರ್ಯವನ್ನು ಮುಂದಿನ ಮುಂಗಾರು ಮಳೆಯ ಸಂದರ್ಭದಲ್ಲಿ ಅನುಷ್ಠಾನಗೊಳಿಸುವುದು ಹಾಗೂ ಎತ್ತಿನಹೊಳೆ ಯೋಜನೆಗೆ 1500 ಕೋಟಿ ರೂ.ಗಳನ್ನು 2020 -21 ನೇ ಸಾಲಿನಲ್ಲಿ ತೆಗೆದಿರಿಸಿರುವುದು, ಹಾಸನ – ಮಂಗಳೂರು ರೈಲು ಮಾರ್ಗದ ಕಾರ್ಯಕ್ಷಮತೆಯನ್ನು ಹೆಚ್ಚುವ ವಿಷಯದಲ್ಲಿ ಹಾಸನ ಜಿಲ್ಲೆಯ ಹೆಸರು ಬಜೆಟ್‌ನಲ್ಲಿ ಪ್ರಸ್ತಾಪವಾಗಿದ್ದು

ಬಿಟ್ಟರೆ ಮುಖ್ಯಮಂತ್ರಿಯವರ ಬಜೆಟ್‌ ಭಾಷಣದಲ್ಲಿ ಹಾಸನ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಯಾವುದೇ ಪ್ರಸ್ತಾಪವೂ ಆಗದಿರುವುದು ಅನಿರೀಕ್ಷಿತವೇನೂ ಅಲ್ಲ. ಏಕೆಂದರೆ ಬಿಜೆಪಿ ಸರ್ಕಾರ ಅಧಿಕಾರ ಬಂದ ದಿನದಿಂದಲೇ ಹಾಸನ ಜಿಲ್ಲೆಗೆ ಕಳೆದೆರಡು ಬಜೆಟ್‌ನಲ್ಲಿ ಘೋಷಣೆಯಾದ ಹಾಗೂ ಸರ್ಕಾರದ ಅನುಮೋದನೆ ಪಡೆದು ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಅನುಷ್ಠಾನದ ಹಂತದಲ್ಲಿದ್ದ ಯೋಜನೆಗಳನ್ನೂ ಸರ್ಕಾರ ತಡೆ ಹಿಡಿದಿತ್ತು. ಈಗ ಬಜೆಟ್‌ನಲ್ಲಿ ಅದರ ಪ್ರತಿಫ‌ಲನ ಕಾಣಿಸಿದೆ.

ರಾಜಕೀಯ ದ್ವೇಷ ಸಾಧನೆ: ಎತ್ತಿನಹೊಳೆ ಹಾಗೂ ಹಾಸನ – ಮಂಗಳೂರು ರೈಲು ಮಾರ್ಗದ ಕಾರ್ಯಕ್ಷಮತೆ ಹೆಚ್ಚಳದ ಯೋಜನೆಗಳು ಹಾಸನ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲವಾಗುವ ಯೋಜನೆಗಳೇನೂ ಅಲ್ಲ. ಎತ್ತಿನಹೊಳೆ ಯೋಜನೆಗೆ ಹಾಸನ ಜಿಲ್ಲೆಯ ಜನರು ಕಳೆದುಕೊಳ್ಳುವ ಭೂಮಿ, ಪರಿಸರಕ್ಕೆ ಹೋಲಿಸಿದರೆ ಅದರಿಂದ ಜಿಲ್ಲೆಗೆ ಸಿಗುವ ಅನುಕೂಲ ಏನೇನೂ ಇಲ್ಲ.

ಹಾಗೆಯೇ ಹಾಸನ – ಮಂಗಳೂರು ರೈಲು ಮಾರ್ಗದ ಕಾರ್ಯ ಕ್ಷಮತೆ ಹೆಚ್ಚಳದಿಂದ ಹಾಸನ ಜಿಲ್ಲೆಗಿಂತ ಕರಾವಳಿಯ ಜಿಲ್ಲೆಗಳಿಗಷ್ಟೇ ಅನುಕೂಲ. ಹಾಗಾಗಿ ಹಾಸನ ಜಿಲ್ಲೆಯ ಜನರಿಗೆ ಅಭಿವೃದ್ಧಿಯ ಗಾಳಿಯೂ ಸೋಕದಷ್ಟರ ಮಟ್ಟಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಾಸನ ಜಿಲ್ಲೆಯ ಮೇಲೆ ರಾಜಕೀಯ ದ್ವೇಷ ಸಾಧನೆ ಮಾಡಿದ್ದಾರೆ ಎಂಬುದು ಜಿಲ್ಲೆಯ ಬಹುಪಾಲು ಜನರ ಅಭಿಪ್ರಾಯ.

ಜೆಡಿಎಸ್‌ ಪ್ರಾಬಲ್ಯದ ಹಾಸನ ಜಿಲ್ಲೆಯ ಮೇಲೆ ಯಡಿಯೂರಪ್ಪ ಅವರ ಸರ್ಕಾರ ರಾಜಕೀಯ ಮತ್ಸರ ಸಾಮಾನ್ಯ. ಆದರೆ ಹಾಸನ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರು ಪ್ರತಿನಿಧಿಸುತ್ತಿದ್ದಾರೆ. ಅವರ ಪ್ರಯತ್ನದ ಫ‌ಲವಾಗಿಯಾದರೂ ಹಾಸನ ನಗರದ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ಬಜೆಟ್‌ನಲ್ಲಿ ಪ್ರಸ್ತಾಪವಾಗಬಹುದೆಂಬ ನಿರೀಕ್ಷೆಯಿತ್ತು. ಆದರೆ ಆ ನಿರೀಕ್ಷೆಯೂ ಹುಸಿಯಾಗಿದೆ.

ಬಜೆಟ್‌ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಜಿಲ್ಲಾ ಯೋಜನಾ ಸಮಿತಿಯ ಸಭೆ ನಡೆಸಿ ಬಜೆಟ್‌ನಲ್ಲಿ ಇಲಾಖಾವಾರು ಅನುದಾನ ಕೋರಿಕೆಯ ಬಗ್ಗೆ, ಜಿಲ್ಲೆಯ ಅಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ಪಡೆದಿದ್ದರು. ಆ ಸಂದರ್ಭದಲ್ಲಿ ಜಿಲ್ಲೆಯ ಅಧಿಕಾರಿಗಳು ಲಿಖೀತವಾಗಿಯೇ ಕೆಲವು ಯೋಜನೆಗಳ ಪ್ರಸ್ತಾವನೆಯನ್ನು ಸಚಿವರಿಗೆ ನೀಡಿದ್ದರು. ಆದರೆ ಪ್ರಸ್ತಾವನೆಗಳಲ್ಲಿ ಯಾವುದಾದರೊಂದರ ಬಗ್ಗೆಯೂ ಬಜೆಟ್‌ನಲ್ಲಿ ಪ್ರಸ್ತಾಪವಿಲ್ಲ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲೆಲ್ಲಾ ಹಾಸನ ಜಿಲ್ಲೆಯನ್ನು ಕಡೆಗಣಿಸುತ್ತಿವುದು ಸಾಮಾನ್ಯವಾಗಿದೆ. ಈ ಕಾರಣಕ್ಕಾಗಿ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಜೆಡಿಎಸ್‌ ಶಾಸಕರು, ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿಯವರ ಬೆಂಗಳೂರು ನಿವಾಸದ ಬಳಿ ಧರಣಿ ನಡೆಸಿದ್ದೂ ಉಂಟು. ಇನ್ನು ಮುಂದಿನ ದಿನಳಲ್ಲಿ ಅಂತಹುದೇ ಪರಿಸ್ಥಿತಿ ಎದುರಾಗಬಹುದೇನೋ.

ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್‌ ರೈತರ ಪರವೂ ಇಲ್ಲ, ಕಾರ್ಮಿಕರ ಪರವೂ ಇಲ್ಲ. ಪೆಟ್ರೋಲ್‌, ಡೀಸೆಲ್‌ ದರ ಏರಿಸಿ ಜನಸಾಮಾನ್ಯರ ಜೀವನದ ಮೇಲೆ ಬರೆ ಎಳೆದಿದ್ದಾರೆ. ಕೇಂದ್ರದಿಂದ ಅನುದಾನ ತರಲಾಗದ ಮುಖ್ಯಮಂತ್ರಿಯವರು ಬಜೆಟ್‌ ಮಂಡಿಸುವ ಶಾಸ್ತ್ರ ಮಾಡಿದ್ದಾರೆ ಅಷ್ಟೇ. ನಿರೀಕ್ಷೆಯಂತೆ ಹಾಸನ ಜಿಲ್ಲೆಗೆ ಮಲತಾಯಿ ಧೋರಣೆ ಮಾಡಿರುವುದು ಜಗಜ್ಜಾಹೀರಾಗಿದೆ.
-ಜಾವಗಲ್‌ ಮಂಜುನಾಥ್‌, ಹಾಸನ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ

ಆರ್ಥಿಕ ಹಿಂಜರಿತ, ಕೇಂದ್ರದಿಂದ ಅನುದಾನ ಕಡಿತದ ನಡುವೆಯೂ ಯಾವುದೇ ಕ್ಷೇತ್ರವನ್ನೂ ಕಡೆಗಣಿಸದೇ ಮುಖ್ಯಮಂತ್ರಿ ಬಿಎಸ್‌ವೈ ಸಮತೋಲನದ ಬಜೆಟ್‌ ಮಂಡಿಸಿದ್ದಾರೆ. ನೀರಾವರಿ ಮತ್ತು ಕೃಷಿಗೆ ಆದ್ಯತೆ ನೀಡಿದ್ದಾರೆ. ಹಾಸನ ಜಿಲ್ಲೆಗೆ ಬಜೆಟ್‌ನಲ್ಲಿ ಹೆಚ್ಚು ಯೋಜನೆ ಘೋಷಣೆ ಮಾಡದಿದ್ದರೂ ಎತ್ತಿನಹೊಳೆ ಯೋಜನೆಯನ್ನು ಈ ವರ್ಷವೇ ಕಾರ್ಯಾರಂಭ ಮಾಡುವುದರಿಂದ ಜಿಲ್ಲೆಗೆ ಅನುಕೂಲವಾಗುತ್ತದೆ.
-ಎಚ್‌.ಕೆ.ಸುರೇಶ್‌, ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ

ಹಾಸನ ಜಿಲ್ಲೆಯ ಸುವರ್ಣಯುಗ ಎಚ್‌.ಡಿ.ಕುಮಾರಸ್ವಾಮಿ ಅವರ ಕಾಲಕ್ಕೇ ಮುಗಿದು ಹೋಯಿತು. ನಿರೀಕ್ಷೆಯಂತೆಯೇ ಸಿಎಂ ಯಡಿಯೂರಪ್ಪ ಹಾಸನ ಜಿಲ್ಲೆಯ ಬಗ್ಗೆ ರಾಜಕೀಯ ಹಗೆತನ ಸಾಧಿಸುತ್ತಿದ್ದಾರೆ ಎಂಬುದಕ್ಕೆ ಬಜೆಟ್‌ ಸಾಕ್ಷಿಯಾಗಿದೆ. ಹಾಸನ ಜಿಲ್ಲೆಯೂ ರಾಜ್ಯದ ಭೂಪಟದಲ್ಲಿದೆ ಎಂಬುದನ್ನು ಬಿಜೆಪಿ ಸರ್ಕಾರಕ್ಕೆ ಹೋರಾಟದ ಮೂಲಕವೇ ಇನ್ನು ಮುಂದೆ ತೋರಿಸಬೇಕಾದ ಕಾಲ ಸನ್ನಿಹಿತ ವಾಗುತ್ತಿದೆ.
-ಎಚ್‌.ಎಸ್‌. ರಘು, ಹಾಸನ ಜಿಲ್ಲಾ ಜೆಡಿಎಸ್‌ ವಕ್ತಾರ

ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ತಡೆಗೆ ಶಾಶ್ವತ ಪರಿಹಾರ ನೀಡಿಲ್ಲ. ಈ ಬಾರಿಯೂ ಆನೆ ಕಾರಿಡಾರ್‌ ನಿರೀಕ್ಷೆ ಹುಸಿಯಾಗಿದೆ. ಹಾಸನ ಜಿಲ್ಲೆಗೆ ಹೊಸ ಯೋಜನೆಗಳನ್ನು ಘೋಷಣೆ ನೀಡಿಲ್ಲ. ಇದು ನಿರಾಶದಾಯಕ ಬಜೆಟ್‌ ಆಗಿದೆ. ಅಂತರ್ಜಲ ಹೆಚ್ಚಿಸುವ ಕಾರ್ಯಕ್ರಮಕ್ಕೆ ಆದ್ಯತೆ ನೀಡಿಲ್ಲ. ಪರಿಸರ ಉಳಿಸಲು ಅರಣ್ಯೀಕರಣಕ್ಕೆ ಒತ್ತು ನೀಡಿಲ್ಲ.
-ಎಚ್‌.ಎ. ಕಿಶೋರ್‌ ಕುಮಾರ್‌, ಪರಿಸರವಾದಿ

ಜನರು ಬಜೆಟ್‌ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ಎತ್ತಿನಹೊಳೆಗೆ 1,500 ಕೋಟಿ ಹಣ ಮೀಸಲಿಟ್ಟಿರುವುದು ಹಾಸನ ಜಿಲ್ಲೆಗೆ ಯಾವುದೇ ಪ್ರಯೋಜನವಿಲ್ಲ. ಹಾಸನ ವಿಮಾನ ನಿಲ್ದಾಣ ಸೇರಿದಂತೆ, ಈ ಹಿಂದೆ ಹಾಸನ ಜಿಲ್ಲೆಗೆ ಘೋಷಣೆಯಾಗಿದ್ದ ಯೋಜನೆಗಳಿಗೆ ಅನುದಾನದ ನಿರೀಕ್ಷೆ ಹುಸಿಯಾಗಿದೆ. ರಾಜ್ಯದ ದೃಷ್ಟಿಕೋನದಿಂದಲೂ ಬಜೆಟ್‌ ಆಶಾದಾಯಕವಾಗಿಲ್ಲ.
-ಚಂದ್ರಶೇಖರ್‌, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳದ ಮಾಜಿ ಅಧ್ಯಕ್ಷ

ಬಜೆಟ್‌ ಮಂಡಿಸಬೇಕು ಎಂಬ ಕಾರಣಕ್ಕೆ ಬಜೆಟ್‌ ಮಂಡಿಸಿದಂತಿದೆ. ರೈತರಿಗೆ ಯಾವುದೇ ಉಪಯೋಗವಿಲ್ಲ. ಮುಖ್ಯಮಂತ್ರಿಯಾದವರು ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳಲ್ಲಿ ಯಾವುದೇ ಪರಿಪೂರ್ಣತೆಯಿಲ್ಲ. ಕೃಷಿ ಆಯೋಗ ರಚನೆಯ ಪ್ರಸ್ತಾಪ ಮಾಡಿದ್ದಾರೆ. ಅದೊಂದು ಆಶಾದಾಯಕ. ಅದನ್ನು ಬಿಟ್ಟರೆ ಇದೊಂದು ಕಾಟಾಚಾರದ ಬಜೆಟ್‌.
-ಕೊಟ್ಟೂರು ಶ್ರೀನಿವಾಸ್‌, ರಾಜ್ಯ ರೈತ ಸಂಘದ ಹಾಸನ ಜಿಲ್ಲಾ ಅಧ್ಯಕ್ಷ

ಟಾಪ್ ನ್ಯೂಸ್

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.