ಸಾಮಾಜಿಕ ಪಿಡುಗು ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಿ


Team Udayavani, Mar 6, 2020, 3:00 AM IST

samajika

ಬಾಗೇಪಲ್ಲಿ: ಬಾಲ್ಯ ವಿವಾಹಗಳಿಗೆ ಯಾರೊಬ್ಬರೂ ಪ್ರೋತ್ಸಾಹ ನೀಡಬಾರದು. ಒಂದು ವೇಳೆ ಪ್ರೋತ್ಸಾಹಿಸಿದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತೀರಾ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫೌಝೀಯಾ ತರುನ್ನಮ್‌ ತಿಳಿಸಿದರು.

ತಾಲೂಕಿನ ಗೂಳೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಕೋಟೆ ಫೌಂಡೇಶನ್‌, ಯಂಗ್‌ ಲೈವ್‌ ಫೌಂಡೇಶನ್‌, ಬೆಂಗಳೂರು ಸಪ್ತಗಿರಿ ಆಸ್ಪತ್ರೆ ಇವರ ಆಶ್ರಯಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ ತರಗತಿಗಳ ಉದ್ಘಾಟನೆ ಮತ್ತು ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಹಕಾರ ಮುಖ್ಯ: ಜಿಲ್ಲೆಯಲ್ಲಿ ಬಾಗೇಪಲ್ಲಿ ತಾಲೂಕಿನಲ್ಲೇ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿವೆ. ಅವುಗಳಿಗೆ ಕಡಿವಾಣ ಹಾಕಬೇಕಾದ ಅಗತ್ಯತೆ ಇದೆ. ಕಡಿವಾಣ ಹಾಕಬೇಕಾದರೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು. ಅನಕ್ಷರಸ್ಥರ ಸಂಖ್ಯೆ ಎಲ್ಲಿ ಹೆಚ್ಚಾಗಿರುತ್ತದೆಯೋ ಅಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತವೆ ಎಂದರು.

ಎನ್‌ಜಿಒ ಸಹಭಾಗಿ: ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯಂಗ್‌ ಲೈವ್ಸ್‌ ಫೌಂಡೇಶನ್‌ ಸಂಸ್ಥೆಯವರು ಸ್ಮಾರ್ಟ್‌ ತರಗತಿಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಜೊತೆಗೆ ಎನ್‌ಜಿಒ ದಂತಹ ಖಾಸಗಿ ಸಂಸ್ಥೆಯು ಜೋಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯು 10ನೇ ತರಗತಿಯ ಫಲಿತಾಂಶ ಮೇಲ್ದಜೇಗೆ ಏರಲು ಶಿಕ್ಷಕರು ಮಕ್ಕಳಿಗೆ ಅರ್ಥವಾಗುವ ಹಾಗೆ ಪಾಠ ಮಾಡಬೇಕು ಎಂದರು.

ಸ್ಮಾರ್ಟ್‌ ತರಗತಿ: ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಆರ್‌.ವೆಂಕಟರಾಮಪ್ಪ ಮಾತನಾಡಿ, ಬಾಗೇಪಲ್ಲಿಯಲ್ಲಿ ಡಾ.ಹೆಚ್‌.ಎನ್‌.ರವರು ನ್ಯಾಷನಲ್‌ ಪದವಿ ಕಾಲೇಜು ಸ್ಥಾಪನೆ ಮಾಡದಿದ್ದರೆ ನಮ್ಮ ಭಾಗದಲ್ಲಿ ಶಿಕ್ಷಣ ಪಡೆಯುವುದು ಅಸಾಧ್ಯವೇ ಆಗುತ್ತಿತ್ತು. ವೈಜ್ಞಾನಿಕ ಮನೋಭಾವನೆ ಬೆಳೆದಂತೆಲ್ಲಾ ನಾವು ಸಹಾ ಬದಲಾಗಬೇಕಾಗಿದೆ. ಮೊದಲು ಶ್ರೀಮಂತ ಮಕ್ಕಳು ಮಾತ್ರ ಸ್ಮಾರ್ಟ್‌ ತರಗತಿಗಳಲ್ಲಿ ಭಾಗವಹಿಸುತ್ತಿದ್ದರು.

ಆದರೆ ಖಾಸಗಿ ಸಂಸ್ಥೆಯವರ ಸಹಕಾರದಿಂದ ಸರ್ಕಾರಿ ಶಾಲೆಯ ಬಡ ಮಕ್ಕಳು ಸಹ ಸ್ಮಾರ್ಟ್‌ ತರಗತಿಗಳಲ್ಲಿ ಭಾಗವಹಿಸಬಹುದು ಎಂದರು. ಜಿಪಂ ಸಿಇಒ ಫೌಝೀಯಾ ತರುನ್ನುಮ್‌ 10ನೇ ತರಗತಿಗೆ ಭೇಟಿ ಮಕ್ಕಳಿಗೆ ಪ್ರಶ್ನೆ ಕೇಳಿದರು. ಬೆಂಗಳೂರು ಕೋಟೆ ಫೌಂಡೇಷನ್‌ ನಿರ್ದೇಶಕ ಟಿ.ವಿ.ಶ್ರೀಧರ್‌, ಗ್ರಾಪಂ ಅಧ್ಯಕ್ಷ ಮುನ್ನಾಖಾನ್‌, ಶಿಕ್ಷಣ ಇಲಾಖೆಯ ಇಸಿಒ ಕೆ.ಬಿ.ಆಂಜನೇಯರೆಡ್ಡಿ, ಪಿಎಸ್‌ಐ ಪಿ.ಎಂ.ನವೀನ್‌,

ತಾಲೂಕು ವೈದ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ, ಗೂಳೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಂಗನಾಥ್‌, ಉಪನ್ಯಾಸಕ ವೆಂಕಟಶಿವಾರೆಡ್ಡಿ, ಪಿಡಿಒ ಭಾಗ್ಯಲಕ್ಷ್ಮಿ, ಶಿಕ್ಷಕರಾದ ಟಿ.ಎಸ್‌.ವೇಣುಗೋಪಾಲ್‌ರಾವ್‌, ಅಶ್ವತ್ಥಪ್ಪ, ಎಲ್‌.ಸುಬ್ರಹ್ಮಣ್ಯಂ, ಸತ್ಯನಾರಾಯಣ, ರಂಗನಾಥ್‌, ವಕೀಲ ರಮೇಶ್‌, ನಿವೃತ್ತ ಮುಖ್ಯ ಶಿಕ್ಷಕ ರಾಮಪ್ಪ, ಸರೋಜಮ್ಮ, ಯಂಗ್‌ ಲೈವ್‌ ಫೌಂಡೇಷನ್‌ ಅಧಿಕಾರಿಗಳಾದ ನರಸಿಂಹಮೂರ್ತಿ, ಹರೀಶ್‌ ಡಾ.ಮನೋಜ್‌ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.