ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 20 ಕೋಟಿ
Team Udayavani, Mar 6, 2020, 3:03 AM IST
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 20 ಕೋಟಿ ರೂ. ಅನುದಾನ. ಬಾದಾಮಿಯ ಸಮಗ್ರ ಅಭಿವೃದ್ಧಿಗೆ 25 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಚಿತ್ರದುರ್ಗ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಿ, 2020-21ನೇ ಸಾಲಿನಲ್ಲಿ ಸಂಸ್ಕೃತಿಕ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ ಒಟ್ಟಾರೆಯಾಗಿ 4.552 ಕೋಟಿ ರೂ. ಮೀಸಲಿಟ್ಟಿದೆ.
ಕರ್ನಾಟಕ ಪ್ರವಾಸೋದ್ಯಮ ಟಾಸ್ಕ್ ಫೋರ್ಸ್: ಪ್ರವಾಸೋ ದ್ಯಮ ಬೆಳವಣಿಗೆಗೆ ಪದ್ಮಶ್ರೀ ಪುರಸ್ಕೃತ ಸುಧಾ ಮೂರ್ತಿ ನೇತೃತ್ವದಲ್ಲಿ “ಕರ್ನಾಟಕ ಪ್ರವಾಸೋದ್ಯಮ ಟಾಸ್ಕ್ ಫೋರ್ಸ್’ ಸ್ಥಾಪಿಸಲಾಗಿದೆ. ಆ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು, ವಿವಿಧ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲು, ಜತೆಗೆ ಪ್ರವಾಸಿಗರನ್ನು ಆಕರ್ಷಿಸಲು 100 ಕೋಟಿ ರೂ. ನೀಡಲಿದೆ. ರಾಜ್ಯದ ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಯನ್ನು 500 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿದೆ.
ಜೋಗದಲ್ಲಿ ಟೂರಿಸಂ ಸರ್ಕ್ನೂಟ್ ಅಭಿವೃದ್ಧಿ: ವಿಶ್ವಪ್ರಸಿದ್ಧ ಜೋಗ ಜಲಪಾತ ಮತ್ತು ಇತರೆ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪೂರಕವಾದ ಮೂಲ ಸೌಕರ್ಯ ಒದಗಿಸಿ “ಟೂರಿಸಂ ಸರ್ಕ್ನೂಟ್’ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.