ಸರ್ವರೊಂದಿಗೆ ಸರ್ವರ ವಿಕಾಸದ ಕನಸು

ಬಜೆಟ್‌ ವಿಶ್ಲೇಷಣೆ

Team Udayavani, Mar 6, 2020, 3:04 AM IST

sarvarondige

ಪ‹ಧಾನಿ ನರೇಂದ್ರ ಮೋದಿ ಅವರ “ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌’ ಘೋಷಣೆ ಯಂತೆಯೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಬಜೆಟ್‌ನಲ್ಲಿ “ಸರ್ವರೊಂದಿಗೆ ಸರ್ವರ ವಿಕಾಸ’ದ ಕನಸು ಕಂಡಿದ್ದಾರೆ. ಅನ್ನದಾತರ ಕ್ಷೇತ್ರವಾದ ಕೃಷಿ ಆವಿಷ್ಕಾರಕ್ಕೂ ಪಟತೊಟ್ಟಿದ್ದಾರೆ. ಆರ್ಥಿಕ ಹಿಂಜರಿತ, ಕೇಂದ್ರದ ತೆರಿಗೆ ಅನುದಾನದಲ್ಲಿ ಕಡಿತ, ಉತ್ತರ ಕರ್ನಾಟಕದಲ್ಲಿ ಉಂಟಾದ ಮಳೆ- ಪ್ರವಾಹ ಸೇರಿ ಹಲವು ಸಮಸ್ಯೆಗಳ ನಡು ವೆಯೂ ತಮ್ಮಲ್ಲಿ ಇರುವಂತಹ ಸಂಪ ನ್ಮೂಲವನ್ನೇ ಗಮನದಲ್ಲಿಟ್ಟುಕೊಂಡು ಕೃಷಿಯ ವಲಯದ ಏಳ್ಗೆಗೆ ಪೂರಕ ಯೋಜನೆಗಳನ್ನು ರೂಪಿಸಿದ್ದಾರೆ.

ಬೃಹತ್‌ ಪ್ರಮಾಣದಲ್ಲಿ ಅಭಿವೃದ್ಧಿಗೆ ಪೂರಕ ವಾದಂತಹ ಅಂಶಗಳು ಬಜೆಟ್‌ನಲ್ಲಿ ಗೋಚರಿಸಿದೆ ಇದ್ದರೂ, ಕೃಷಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಂತಹ ಅನುಪಮ ಯೋಜನೆಗಳನ್ನು ಕಾಣಬಹುದಾಗಿದೆ. “ಜೀವ ಸಂಕುಲದ ಉಳಿವಿಗೆ, ಎಲ್ಲರ ಕೃಷಿಗೆ ಕೃಷಿಯೇ ಆಧಾರ. ಅನ್ನದಾತ ಮೊದಲು ಉಳಿದರೆ ಇತರರೂ ಉಳಿದರೂ’ ಎಂಬ ಲೋಕೋಕ್ತಿ ಯನ್ನು ಮನಗಂಡಿರುವ ಯಡಿಯೂರಪ್ಪ ಅವರು ನೀರಿನ ಭದ್ರತೆ, ಭೂ ಸಂಚಯ, ಸಾಮೂಹಿಕ ಕೃಷಿಯನ್ನು ಪ್ರೋತ್ಸಾಹಿಸುವ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರತಿ ವರ್ಷ 10 ಸಾವಿರ ರೂ. ವಾರ್ಷಿಕ ಹಣಕಾಸು ನೆರವು ನೀಡುವ ಭರವಸೆ ನೀಡಿದ್ದಾರೆ.

ಬರ ನಿರೋಧಕ ಬೆಳೆಗಳನ್ನು ಪ್ರೋತ್ಸಾಹಿ ಸಲು “ರೈತ ಸಿರಿ’ಯೋಜನೆ. ಕಾಲಕಾಲಕ್ಕೆ ಕೃಷಿ ಬಗ್ಗೆ ಮಾಹಿತಿ ನೀಡಲು “ಸಂಚಾರಿ ಕೃಷಿ ಹೆಲ್ತ್‌ ಕ್ಲಿನಿಕ್‌’, “ಜಲಾನಯನ ನಿರ್ವಹಣಾ’ ಯೋಜನೆ, ನೀರಿನ ಕೊರತೆ ನೀಗಿಸಲು “ಜಲಗ್ರಾಮ ಕ್ಯಾಲೆಂಡರ್‌’, “ಕಿಂಡಿ ಅಣೆಕಟ್ಟು’ ಯೋಜನೆ ಸೇರಿ ರೈತ ಬಾಂಧವರಿಗೆ ಅನುಕೂಲವಾಗುವಂತಹ ಹಲವು ಉತ್ತಮ ಯೋಜನೆಗಳನ್ನು ಘೋಷಿಸಿದ್ದಾರೆ.

ಎತ್ತಿನ ಹೊಳೆ ಯೋಜನೆಗೆ ಆದ್ಯತೆ ನೀಡಲಾಗಿದೆ. ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾಗಳ ಕಾಮ ಗಾರಿಗೆ 500 ಕೋಟಿ ರೂ. ಮೀಸಲಿ ಡಲಾಗಿದೆ. ಜತೆಗೆ ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಕೊರತೆ ನೀಗಿಸುವ ವಾಗ್ಧಾನ ಮಾಡಲಾಗಿದೆ. ಹಿನ್ನೀರು ಜಲ ಕೃಷಿಗೆ ಆದ್ಯತೆ ನೀಡಿದೆ. ಭದ್ರಾ ಮೇಲ್ದಂಡೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಯತ್ತ ಗಮನ ಹರಿಸಿದೆ. “ಕೃಷಿ ಕ್ಲಿನಿಕ್‌’ ಮೂಲಕ ರೈತರ ಮನೆಬಾಗಿಲಿಗೆ ಔಷಧಿಗಳನ್ನು ನೀಡುವ ಯೋಜನೆ ರೂಪಿ ಸಿದೆ. ಈ ಎಲ್ಲಾ ಯೋಜ ನೆಗಳು ಕೃಷಿಯ ಅಭಿ ವೃದ್ಧಿಗೆ ಪೂರಕವಾ ಗುವಂತಹ ಯೋಜನೆಗಳಾಗಿವೆ.

ಇದರ ಜತೆಗೆ ಗ್ರಾಮಗಳ ಅಭಿವೃದ್ಧಿಯನ್ನು ಕೇಂದ್ರೀಕರಿಸಿ “ಗ್ರಾಮ ಒನ್‌’ ಸ್ಥಾಪಿಸಲು ನಿರ್ಧರಿಸಲಾಗಿದೆ. ಆದರೆ ತೋಟಗಾರಿಕೆ ವಿಚಾರಕ್ಕೆ ಬಂದಾಗ ಸರ್ಕಾರ ಕೊಂಚ ಎಡ ವಿದಂತೆ ಕಾಣುತ್ತದೆ. ಬಜೆಟ್‌ನಲ್ಲಿ ಯಡಿ ಯೂ ರಪ್ಪ ಅವರ ತೋಟಗಾರಿಕೆಯನ್ನು ಉದ್ಯಮವನ್ನಾಗಿ ಪರಿಗಣಿಸುವ ಬಗ್ಗೆ ಹೇಳಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು. ಕೃಷಿಯನ್ನು ಕೈಗಾರಿಕೆಯನ್ನಾಗಿ ಪರಿಗಣಿಸಿದರೆ ನೂರಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆ ಹಿನ್ನೆಲೆಯಲ್ಲಿ ಇದನ್ನು ಸರ್ಕಾರ ಕೈಬಿಡಬೇಕು.

* ಪ್ರೊ.ನರಸಿಂಹಪ್ಪ, ಕೃಷಿ ತಜ್ಞ

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.