ಮೇಲ್ದರ್ಜೆಗೇರದ ಹನುಮಸಾಗರ ಗ್ರಾಮ ಪಂಚಾಯತ್‌


Team Udayavani, Mar 6, 2020, 4:37 PM IST

ಮೇಲ್ದರ್ಜೆಗೇರದ ಹನುಮಸಾಗರ ಗ್ರಾಮ ಪಂಚಾಯತ್‌

ಹನುಮಸಾಗರ: ಜಿಲ್ಲೆಯಲ್ಲೇ ಅತ್ಯಂತ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆ ಹೊಂದಿರುವ ಹನುಮಸಾಗರ ಪಟ್ಟಣವನ್ನು ಈ ಬಾರಿ ಬಜೆಟ್‌ನಲ್ಲಿ ಪ್ರತ್ಯೇಕ ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡುತ್ತಾರೆ ಎಂಬ ಮಹದಾಸೆಗೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತಣ್ಣೀರೆರಚಿದೆ.

ಹನುಮಸಾಗರ ತಾಲೂಕು ಹೋರಾಟ ಸಮಿತಿ 5 ವರ್ಷಗಳಿಂದ ಹನುಮಸಾಗರವನ್ನು ತಾಲೂಕನ್ನಾಗಿ ಮಾಡಬೇಕೆಂದು ಹೋರಾಟ ನಡೆಸುತ್ತಿದೆ. ಈ ಬಾರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬಹುದು ಎನ್ನುವ ಸಾರ್ವಜನಿಕರ ನಿರೀಕ್ಷೆ ಹುಸಿಯಾಗಿದೆ. ಮಾಜಿ ಶಾಸಕರು ಹಾಗೂ ತಾಲೂಕು ಹೋರಾಟ ಸಮಿತಿ ಸದಸ್ಯರು ಹಲವು ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೂ ಬಜೆಟ್‌ನಲ್ಲಿ ಬೇಡಿಕೆ ಈಡೇರದ ಕಾರಣ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

ಮೇಲ್ದರ್ಜೆಗೇರದ ಗ್ರಾಪಂ: ಜಿಲ್ಲೆಯಲ್ಲೇ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆ ಹೊಂದಿದ ಹನುಮಸಾಗರ ಗ್ರಾಪಂ 25 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಗ್ರಾಮದಲ್ಲಿ 14 ವಾರ್ಡ್‌ಗಳಿಂದ 38 ಜನ ಸದಸ್ಯರಿದ್ದಾರೆ. 15 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ನಿಯಮವಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಲ್ಲಿಯವರೆಗೆ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಲ್ಲ.

ಹನುಮಸಾಗರವನ್ನು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸುವುದು ಬಜೆಟ್‌ ಸಂಬಂದವಿಲ್ಲ. ಈಗಲೂ ಸಹ ಮುಖ್ಯಮಂತ್ರಿಯವರು ಮನಸ್ಸು ಮಾಡಿದರೆ ಮೇಲ್ದರ್ಜೆಗೆ ಏರಿಸಲು ಅವಕಾಶವಿದೆ. ನಾವು ಸಹ ಪಪಂ ಆಗಿ ಮೇಲ್ದರ್ಜೆಗೇರಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಆಗ ಆದರೂ ಆಗಬಹುದು, ಆದರೆ ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದಿಲ್ಲ. ತಾಲೂಕು ಹೋರಾಟ ಸಮಿತಿಯವರಿಗೆ ಬರಲು ಹೇಳಿದ್ದೇವೆ.  –ಅಮರೇಗೌಡ ಬಯ್ನಾಪೂರ, ಶಾಸಕ

ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿಸುವ ಕುರಿತಂತೆ ಈಗಾಗಲೇ ಶಾಸಕರ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಬಜೆಟ್‌ನಲ್ಲಿ ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿರುವುದು ಜನಪ್ರತಿನಿಧಿ ಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.  –ಶ್ರೀನಿವಾಸ ಜಹಗೀರದಾರ, ತಾಲೂಕು ಹೋರಾಟ ಸಮಿತಿ ಅಧ್ಯಕ್ಷ

ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದರೆ ಹನುಮಸಾಗರವನ್ನು ತಾಲೂಕನ್ನಾಗಿ ಘೋಷಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ತಾಲೂಕು ಘೋಷಣೆಗೆ ಬೇಕಾದ ಎಲ್ಲ ಅರ್ಹತೆಗಳು ಇದ್ದರೂ ತಾಲೂಕನ್ನಾಗಿ ಘೋಷಣೆ ಮಾಡದಿರುವುದು ನಿಜಕ್ಕೂ ದುರ್ದೈವದ ಸಂಗತಿ ಮತ್ತು ಜನಪ್ರತಿನಿಧಿ ಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.  ಬಸವರಾಜ ಹಳ್ಳೂರ, ಬಿಜೆಪಿ ತಾಲೂಕು ಅಧ್ಯಕ್ಷ

 

-ವಸಂತಕುಮಾರ ವಿ ಸಿನ್ನೂರ

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.