ಕಾರವಾರ ಬಂದರಲ್ಲಿ ಹೈ ಅಲರ್ಟ್‌

Team Udayavani, Mar 6, 2020, 5:06 PM IST

ಕಾರವಾರ ಬಂದರಲ್ಲಿ ಹೈ ಅಲರ್ಟ್‌

ಕಾರವಾರ: ಜಿಲ್ಲೆಯಲ್ಲೂ ಕೊರೊನಾ ಭೀತಿ ಕಂಡು ಬರುತ್ತಿದ್ದು, ಮುಂಜಾಗೃತ ಕ್ರಮವಾಗಿ ಕಾರವಾರ ಬಂದರು ಸೇರಿದಂತೆ ಜಿಲ್ಲೆಯ ಎಲ್ಲ ಪ್ರವಾಸಿ ಸ್ಥಳಗಳಲ್ಲಿ ಎಲ್ಲ ರೀತಿಯ ಕಟ್ಟೆಚ್ಚರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ| ಹರೀಶ ಕುಮಾರ ಕೆ. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ ಹಾಲ್‌ನಲ್ಲಿ ಕೊರೊನಾ ಸೊಂಕು ತಡೆಗಟ್ಟುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಸ್ಪತ್ರೆ ಮುಖ್ಯಸ್ಥರು, ವೈದ್ಯಕೀಯ ಕಾಲೇಜು ಮುಖ್ಯಸ್ಥರು, ನೌಕಾನೆಲೆ ಮತ್ತು ಬಂದರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯ ಸಾಧಿಸಿ ಕೊರೊನಾ ಸೊಂಕು ಜಿಲ್ಲೆಗೆ ಯಾವುದೇ ಮಾರ್ಗದಲ್ಲಿ ಬರದಂತೆ ಸೂಕ್ತ ಕ್ರಮ ಕೈಗೊಂಡು ಕಟ್ಟೆಚ್ಚರ ವಹಿಸಬೇಕೆಂದು ಅವರು ಹೇಳಿದರು. ಕಾರವಾರ ಬಂದರನಲ್ಲಿ ವಿದೇಶಿ ಹಡಗುಗಳು ಆಗಮಿಸುವುದರಿಂದ ಮುಖ್ಯವಾಗಿ ಅಲ್ಲಿ ತೀವ್ರ ನೀಗಾ ಇರಿಸಬೇಕು ಮತ್ತು ಆಗಮಿಸಿದ ಹಡುಗುಗಳಲ್ಲಿ ವೈದ್ಯಕೀಯ ತಪಾಸಣೆ ಮಾಡುವುದು ಕಡ್ಡಾಯವಾಗಿದ್ದು, ಇದರ ಮಾಹಿತಿಯನ್ನು ಪ್ರತಿದಿನ ಜಿಲ್ಲಾ ಆರೋಗ್ಯ ಅಧಿಕಾರಿಗಳು ಪಡೆದು ರಾಜ್ಯ ಸರಕಾರಕ್ಕೆ ನೀಡಬೇಕು ಎಂದರು.

ಕದಂಬ ನೌಕಾನೆಲೆ ಅಧಿಕಾರಿ ಮಾತನಾಡಿ, ನೌಕಾನೆಲೆಯಲ್ಲಿ ರೋಗಿಗಳ ಆರೈಕೆಗಾಗಿ ಸಾಕಷ್ಟು ಹಾಸಿಗೆಗಳ ವ್ಯವಸ್ಥೆ ಇರುವುದರಿಂದ, ಜಿಲ್ಲಾಸ್ಪತ್ರೆಗೆ 100 ಹಾಸಿಗೆಗಳನ್ನು ನೀಡಲು ಸಿದ್ಧವಿದೆ. ಅಲ್ಲದೇ ಈಗಾಗಲೇ ಸಾಕಷ್ಟು ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ವಿದೇಶದಿಂದ ಬರುವ ಹಡುಗುಗಳಲ್ಲಿರುವ ಪ್ರಯಾಣಿಕರು ಮತ್ತು ನಾವಿಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಮುಂಚಿತವಾಗಯೇ ಎಲ್ಲ ಹಡುಗುಗಳಲ್ಲಿ ವೈದ್ಯಕೀಯ ತಂಡ ಇರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಪಂ ಸಿಇಒ ಮಾತನಾಡಿ ಜಿಲ್ಲೆಯಲ್ಲಿ ಪ್ರಮುಖವಾಗಿ ಗೋಕರ್ಣದಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುವುದರಿಂದ ಅಲ್ಲಿ ವೈದ್ಯರು ತಂಡ ರಚಿಸಿಕೊಂಡು ಮನೆ ಮನೆಗೆ ಭೇಟಿ ಮಾಡಿ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಹೇಳಿದರು. ಎಸ್ಪಿ ಶಿಪ್ರಕಾಶ ದೇವರಾಜು ಮಾತನಾಡಿ, ಪೊಲೀಸ್‌ ಇಲಾಖೆಯಿಂದ ತೆಗೆದುಕೊಳ್ಳಬಹುದಾದ ಎಲ್ಲ ಮುಂಜಾಗೃತ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಗೋವಾ ಮತ್ತು ಮಂಗಳೂರು ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರನ್ನು ವೈದ್ಯರ ಸಹಾಯದೊಂದಿಗೆ ತಪಾಸಣೆ ಮಾಡುವ ಮೂಲಕ ಹೆಚ್ಚಿನ ಜಾಗೃತಿ ವಹಿಸಲಾಗುವುದು ಎಂದರು.

ಜಿಲ್ಲಾಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳು, ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.