ಬೆಟ್ಟಳ್ಳಿ ಮಾರಮ್ಮ ಜಾತ್ರೆಯಲ್ಲಿ ಸೌಲಭ್ಯಕ್ಕೆ ಆದ್ಯತೆ ನೀಡಿ


Team Udayavani, Mar 7, 2020, 3:00 AM IST

bettalli-maramma

ಹನೂರು: ಪಟ್ಟಣದ ಅಧಿದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಯಲ್ಲಿ ಭಕ್ತಾದಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಜನರ ಸಮಸ್ಯೆ ಆಲಿಸಲು ಪಟ್ಟಣ ಪಂಚಾಯ್ತಿಯಿಂದ ನಿಯಂತ್ರಣ ಕೊಠಡಿ ತೆರೆಯಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಎನ್‌.ಮೂರ್ತಿ ತಿಳಿಸಿದರು.

ಪಟ್ಟಣದ ಅಧಿದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಯ ಹಿನ್ನೆಲೆಯಲ್ಲಿ ನಡೆದ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವು ಹನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರಿಗೆ ಬಹುಮುಖ್ಯವಾಗಿದೆ.

ಈ ಜಾತ್ರಾ ಮಹೋತ್ಸವದಲ್ಲಿ ಪಟ್ಟಣದ 13 ವಾರ್ಡ್‌ಗಳ ಸಾರ್ವಜನಿಕರಿಗೆ ಮತ್ತು ಭಕ್ತಾದಿಗಳಿಗೆ ಯಾವುದೇ ಕುಂದು ಕೊರತೆ ಉಂಟಾಗದ ರೀತಿಯಲ್ಲಿ ಕ್ರಮವಹಿಸಲಾಗುತ್ತಿದೆ. ಅಲ್ಲದೆ, ಪಟ್ಟಣ ವಾಸಿಗಳು ಮತ್ತು ಭಕ್ತಾದಿಗಳ ಕುಂದು ಕೊರತೆ ಮತ್ತು ಸಮಸ್ಯೆಗಳನ್ನು ತಿಳಿದು, ಸಮಸ್ಯೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗುತ್ತಿದೆ. ಪಟ್ಟಣ ವಾಸಿಗಳು ಮತ್ತು ಭಕ್ತಾದಿಗಳು ಕುಂದು ಕೊರತೆಗಳು ಇದ್ದಲ್ಲಿ ದೂ.ಸಂ 08224-268111ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ಸ್ವಚ್ಛತೆಗೆ ಆದ್ಯತೆ ನೀಡಿ: ಪ.ಪಂ ಸದಸ್ಯರು ಮಾತನಾಡಿ, ಈ ಜಾತ್ರಾ ಮಹೋತ್ಸವವು 4 ದಿನಗಳ ವಿಜೃಂಭಣೆಯಿಂದ ನಡೆಯಲಿದೆ. ಹೀಗಾಗಿ ಪಟ್ಟಣದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಎಲ್ಲಾ ವಾರ್ಡ್‌ಗಳ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಪಟ್ಟಣದ ಬೀದಿ ದೀಪಗಳ ಸಮಗ್ರ ನಿರ್ವಹಣೆ ಮಾಡಬೇಕು. ಕಿರು ನೀರು ಸರಬರಾಜು ಯೋಜನೆಯ ತೊಂಬೆಗಳನ್ನು ಶುಚಿಗೊಳಿಸಿ, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಹೆಚ್ಚಿನ ಪೌರ ಕಾರ್ಮಿಕರನ್ನು ನಿಯೋಜಿಸಿ: ಜಾತ್ರಾ ಮಹೋತ್ಸವದ ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಸಹಸ್ರಾರು ಜನರು ಭಾಗವಹಿಸುವ ಹಿನ್ನೆಲೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹೆಚ್ಚಿನ ಪೌರ ಕಾರ್ಮಿಕರನ್ನು ನಿಯೋಜಿಸಿ ಶುಚಿತ್ವ ಕಾಪಾಡಬೇಕು. ಆಂಜನೇಯ ಸ್ವಾಮಿ ದೇವಾಲಯದಿಂದ ದೊಡ್ಡ ಬಾಯಿಬೀಗ ಹಾದುಹೋಗುವ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಜಂಗಲ್‌ ಕಟಿಂಗ್‌ ಮಾಡಿ ತಾತ್ಕಾಲಿಕ ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಪಪಂ ಸದಸ್ಯರಾದ ಹರೀಶ್‌ಕುಮಾರ್‌, ಸಂಪತ್‌ ಕುಮಾರ್‌, ಗಿರೀಶ್‌, ನಾಗರಾಜು, ರೂಪ, ಮುಮ್ತಾಜ್‌ ಭಾನು, ಮಹೇಶ್‌ ನಾಯ್ಕ, ಪವಿತ್ರ, ಮಂಜುಳಾ, ಮಹೇಶ್‌, ಆನಂದ್‌ ಕುಮಾರ್‌, ಪ.ಪಂ ಪ್ರಭಾರ ರಾಜಸ್ವ ನಿರೀಕ್ಷಕ ಮನಿಯಾ, ಆರೋಗ್ಯಾಧಿಕಾರಿ ಮಾದೇಶ ಹಾಜರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.