ಏರ್ ಶೋ ಬೆಂಗಳೂರಲ್ಲಿ ನಡೆಸಲು ರಾಜನಾಥ್ ಸಿಂಗ್ಗೆ ಸಿಎಂ ಮನವಿ
Team Udayavani, Mar 6, 2020, 10:45 PM IST
ದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮಗನ ಮದುವೆಗಾಗಿ ಮುಖ್ಯಮಂತ್ರಿಗಳು ದಿಲ್ಲಿಗೆ ತೆರಳಿದ್ದಾರೆ. ಈ ಸಂದರ್ಭ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, 2021ರ ಏರೋ ಇಂಡಿಯಾ ಶೋ ಅನ್ನು ಬೆಂಗಳೂರಿನಲ್ಲೇ ನಡೆಸುವಂತೆ ಮನವಿ ಮಾಡಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಗನ ವಿವಾಹ ಸಮಾರಂಭವು ನಡ್ಡಾ ನಿವಾಸದಲ್ಲಿ ನಡೆಯುತ್ತಿದೆ.
ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ತೆರಳಿದ ಸಿಎಂ,ವೆಲ್ಲಾರ ಜಂಕ್ಷನ್ನಲ್ಲಿ ಅವಶ್ಯಕತೆ ಇರುವ ರಕ್ಷಣಾ ಇಲಾಖೆಯ ಭೂಮಿಯನ್ನ ನಮ್ಮ ಮೆಟ್ರೋಗೆ ಹಸ್ತಾಂತರ ಮಾಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಮನವಿಗೆ ರಕ್ಷಣಾ ಸಚಿವರು ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಬಹಳ ಹಿಂದಿನಿಂದಲೂ “ಏರೋ ಇಂಡಿಯಾ ಶೋ’ ಹಲವು ವರ್ಷಗಳಿಂದ ಬೆಂಗಳೂರಿನಲ್ಲೇ ನಡೆಯುತ್ತಿದೆ. ಕಳೆದ ವರ್ಷ ಗೋವಾದಲ್ಲಿ ನಡೆಸಲು ಸಕಲ ತಯಾರಿಯೂ ಏರ್ಪಟ್ಟಿತ್ತು. ಆದರೆ ರಾಜ್ಯದ ತೀವ್ರ ಪ್ರತಿಭಟನೆ ಕಾರಣ ಬೆಂಗಳೂರಿನಲ್ಲೇ ಏರ್ ಶೋ ನಡೆಸಲಾಯಿತು.
ಕಳೆದ ವರ್ಷ ಪಾರ್ಕಿಂಗ್ ಜಾಗದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ನೂರಾರು ವಾಹನಗಳು ಸುಟ್ಟು ಹೋಗಿದ್ದವು. ಈ ಕಾರಣಕ್ಕಾಗಿ ಮುಂಬರುವ ಶೋಗಳನ್ನು ಅನ್ನು ಬೇರೆಡೆ ನಡೆಸಲು ಚಿಂತನೆ ನಡೆದಿದೆ ಎಂಬ ಮಾತುಗಳೂ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ರಕ್ಷಣಾ ಸಚಿವರನ್ನು ಭೇಟಿಯಾಗಿ ಬೆಂಗಳೂರಿನಲ್ಲೇ ನಡೆಸುವಂತೆ ಮನವಿ ಮಾಡಿದ್ದಾರೆ. ಅದಕ್ಕೆ ಬೇಕಾದ ಸಕಲ ತಯಾರಿಗೆ ರಾಜ್ಯವೂ ಸಹಾಯ ಮಾಡಲಿದೆ ಎಂದಿದ್ದಾರೆ. ಸಿಎಂ ಜತೆ ಡಿಸಿಎಂ ಗೋವಿಂದ ಕಾರಜೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.