ಶುದ್ಧ ನೀರಿನ ಘಟಕ: ಅಕ್ರಮ ನಡೆದಿರುವುದು ನಿಜ
Team Udayavani, Mar 7, 2020, 3:06 AM IST
ವಿಧಾನ ಪರಿಷತ್: “ರಾಜ್ಯಾದ್ಯಂತ ಶುದ್ಧ ನೀರಿನ ಘಟಕದಲ್ಲಿ ಅವ್ಯವಹಾರ ಆಗಿರುವುದು ನಿಜ. ಈ ಸಂಬಂಧ ತನಿಖೆಗೂ ಆದೇಶ ನೀಡಿದ್ದೇವೆ. ವರದಿ ಬಂದ ತಕ್ಷಣವೇ ಕಠಿಣ ಕ್ರಮ ತೆಗೆದುಕೊಳ್ಳಲಿದ್ದೇವೆ ಅಥವಾ ಇದಕ್ಕಾಗಿ ಸದನ ಸಮಿತಿ ರಚಿಸಲು ಸಿದ್ಧರಿದ್ದೇವೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದರು.
ಯಾವ ಕ್ರಮ?: ಬಿಜೆಪಿ ಸದಸ್ಯ ರಘುನಾಥ್ ಮಲ್ಕಾ ಪುರೆ ಕೇಳಿದ ಚುಕ್ಕಿ ಗುರುತಿನ ಪ್ರಶ್ನೆ ಸಂಬಂಧ, ರಾಜ್ಯದ ಗ್ರಾಮೀಣ ಭಾಗದಲ್ಲಿ ಸಾವಿರಾರು ಕೋಟಿ ರೂ.ಖರ್ಚು ಮಾಡಿ ಆರಂಭಿಸಿರುವ ಶುದ್ಧ ನೀರಿನ ಘಟಕಗಳು ಕಾರ್ಯ ನಿರ್ವಹಿಸದೇ ಹಾಳಾಗಿವೆ. ಇದರ ದುರಸ್ತಿಗಾಗಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು.
ಸಚಿವರು ಉತ್ತರಿಸಿ, ಶುದ್ಧ ನೀರಿನ ಘಟಕದಲ್ಲಿ ಅಕ್ರಮ ಇಂದು ನಿನ್ನೆಯ ಸಮಸ್ಯೆಯಲ್ಲ. ನಾವು ವಿರೋಧ ಪಕ್ಷದಲ್ಲಿದ್ದಾಗಲೂ ಈ ಬಗ್ಗೆ ಆಗ್ರಹಿಸಿದ್ದೆವು. ಯಾವುದೇ ಕ್ರಮ ಆಗಿರಲಿಲ್ಲ ಎಂದರು. ಇದಕ್ಕೆ ಕಾಂಗ್ರೆಸ್, ಜೆಡಿಎಸ್ ಸದಸ್ಯರು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳ ಬೇಕು, ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆ ಗುತ್ತಿಗೆ ಯಾವುದೋ ಕಂಪನಿಗೆ ನೀಡುವ ಬದಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ನೀಡುವಂತೆ ಹಾಗೂ ಘಟಕ ಸ್ಥಾಪನೆಗೆ ಶಾಸಕರ ಅನುದಾನ ಬಳಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು.
ಇದಕ್ಕೆ ಸಚಿವರು ಉತ್ತರಿಸಿ, ಶಾಸಕರ ನಿಧಿಯಿಂದ ಅನುದಾನ ಬಳಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಘಟಕ ನಿರ್ವಹಣೆ ಅವ್ಯವಹಾರ ಆರೋಪ ಕುರಿತ ಘಟಕೆ ಸಂಬಂಧ ವರದಿ ಬರುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯ ಬಿದ್ದರೆ ಸದನ ಸಮಿತಿ ಮಾಡಲೂ ಸಿದ್ಧವಿದ್ದೇವೆ ಎಂದು ಭರವಸೆ ನೀಡಿದರು.
15 ವರ್ಷಕ್ಕೆ ಗುತ್ತಿಗೆ: ನೀರಿನ ಘಟಕಗಳ ನಿರ್ಮಾಣ, ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಖುದ್ದಾಗಿ ಧರ್ಮ ಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವ ರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ. ಶೇ.50ರ ಸಹ ಭಾಗಿತ್ವದಲ್ಲಿ ಘಟಕಗಳ ಸ್ಥಾಪನೆ ಮಾಡಿ 15 ವರ್ಷ ನಿರ್ವಹಣೆ ಗುತ್ತಿಗೆ ಕುರಿತು ಮಾತುಕತೆ ನಡೆಸ್ತುತೇ ನೆಂದರು.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅನುಷ್ಠಾನವಾಗಿರುವ 17,154 ನೀರು ಶುದ್ಧೀ ಕರಣ ಘಟಕಗಳ ಪೈಕಿ 12602 ಘಟಕ ಕಾರ್ಯನಿರ್ವಹಿ ಸುತ್ತಿದ್ದು, 4552 ಶುದ್ದೀಕರಣ ಘಟಕಗಳು ತಾತ್ಕಾ ಲಿಕ ವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಟೆಂಡರ್‌ನಲ್ಲಿ ಘಟಕ ಗಳನ್ನು ಮುಂದಿನ 5 ವರ್ಷಗಳ ನಿರ್ವಹಣೆಗಾಗಿ ಹಸ್ತಾಂತರ ಮಾಡಲು ಕ್ರಮವಹಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.