ಶೇ.33 ಮೀಸಲಾತಿ ಕಲ್ಪಿಸಲು ಮನವಿ
Team Udayavani, Mar 7, 2020, 5:24 PM IST
ಕೋಲಾರ: ಮಹಿಳೆಯರಿಗೆ ಚುನಾಯಿತ ಸಮಿತಿಗಳಲ್ಲಿ ಶೇ.33 ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದ ಉಪ ವಿಭಾಗಾಧಿಕಾರಿ ಕಚೇರಿ ಎದುರು ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಐಟಿಯು ಮತ್ತು ದುಡಿಯುವ ಮಹಿಳೆಯರ ಸಮನ್ವಯ ಸಮತಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಪ್ರವಾಸಿ ಮಂದಿರದ ಬಳಿ ಜೈಲ್ ಭರೋದಲ್ಲಿ ನಡೆಸಿದ ಕಾರ್ಯಕರ್ತರು, ಎಂ.ಜಿ.ರಸ್ತೆ, ಹಳೇ ಬಸ್ ನಿಲ್ದಾಣ, ಮೆಕ್ಕೆ ವೃತ್ತದಲ್ಲಿ ಮೆರವಣಿಗೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಎಸ್.ನಾಗರತ್ನಮ್ಮ ಮಾತನಾಡಿ, ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ ಪ್ರಕರಣಗಳು ಸಂಭವಿ ಸುತ್ತಿದ್ದು, ರಕ್ಷಣೆ ನೀಡುವಲ್ಲಿ ಸರ್ಕಾರಗಳು ವಿಫಲವಾಗಿವೆ. ಸಮಾನ ವೇತನ, ಸಂಬಳವಿಲ್ಲದ ಕೆಲಸವನ್ನು ಜಿಡಿಪಿ ಲೆಕ್ಕಕ್ಕೆ ಸೇರಿಸಬೇಕು, ಹೆರಿಗೆ ರಜೆ 2 ವರ್ಷಕ್ಕೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಎಲ್ಲಾ ಇಲಾಖೆ ಮತ್ತು ರಂಗದಲ್ಲಿ ಮಹಿಳೆಯರಿಗೆ ಸಂಕಟಗಳು ಹೆಚ್ಚುತ್ತಿವೆ. ಇದು ಆರೋಗ್ಯಕರ ಸಮಾಜದ ಲಕ್ಷಣವಲ್ಲ, ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡುವುದನ್ನು ಕೈಬಿಡಬೇಕು ಎಂದು ಹೇಳಿದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷೆ ಈಶ್ವರಮ್ಮ, ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ವಿಜಿಕೃಷ್ಣ, ಸಹ ಕಾರ್ಯ ದರ್ಶಿ ಭೀಮರಾಜ್, ಮುಖಂಡ ರಾದ ಆಶಾ, ಮಂಜುಳಮ್ಮ, ಸರಸ್ವತಿ, ವಿಜಯ ಲಕ್ಷ್ಮೀ ರಾಜಮ್ಮ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.