ಗೃಹಲಕ್ಷ್ಮಿಯರ ದುಡಿಮೆಗೇಕೆ ಬೆಲೆ ಇಲ್ಲ ?


Team Udayavani, Mar 8, 2020, 6:01 AM IST

grhalakshmi

ಹೆಣ್ಣುಗಳಿಗೆ ಮನೆವಾರ್ತೆಯ ದುಡಿಮೆ ಎಂದರೆ ಕೊನೆ-ಮೊದಲಿರದ, ಬಿಡುವಿರದ ಸ್ವಾತಂತ್ರ್ಯ ಹರಣ. ಅದು ರಜೆಯಿರದ, ವೇತನವಿರದ, ವಿರಾಮವೂ ಇರದ ಹೇರಲ್ಪಟ್ಟ ದುಡಿಮೆ. ಆ ದುಡಿಮೆ ಅವರಿಗೆ ಗೌರವ ತರುತ್ತಿಲ್ಲ, ಅಧಿಕಾರ ನೀಡುತ್ತಿಲ್ಲ, ಸ್ವಾತಂತ್ರ್ಯ ನೀಡುತ್ತಿಲ್ಲ. ಬದಲಾಗಿ ಗೌರವ, ಅಧಿಕಾರ, ಸ್ವಾತಂತ್ರ್ಯ ಎಲ್ಲಕ್ಕೂ ಎರವಾಗಿದೆ.

ನಾವೆಲ್ಲ ಕಲಿತ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ. ಎಷ್ಟೋ ವರುಷದ ನಂತರ ಶಾಲೆಯಲ್ಲಿ ಕಲಿತವರೆಲ್ಲ ಒಟ್ಟು ಸೇರಿದ್ದೆವು. ಒಂದೇ ಮಣೆ ಮೇಲೆ ಕೂತು ಮಗ್ಗಿ ಬಾಯಿಪಾಠ ಮಾಡಿದ, ಅಕ್ಷರ ತಿದ್ದಿದ ನಿರ್ಮಲಾ, ಶರಾವತಿ, ಲಕ್ಷ್ಮಿ, ಅಮೀನಾ ಎಲ್ಲ ಸಿಕ್ಕಿಬಿಟ್ಟರು. ಹಲವರು ಅದೇ ಹಳ್ಳಿಯ ಆಸುಪಾಸಿನಲ್ಲಿ ಸಂಸಾರವಂದಿಗರಾಗಿದ್ದರೆ, ನಾವು ಕೆಲವರಷ್ಟೇ ದೂರದೂರುಗಳ ಸೇರಿದ್ದೆವು. ಎಲ್ಲರಿಗೂ ಖುಷಿಯೋ ಖುಷಿ. ಹೇಳಲಾಗದ ಆನಂದದಲ್ಲಿ ನಮ್ಮ ಮಾತಿನ ಕೊಟ್ಟೆ ಬಿಚ್ಚತೊಡಗಿತು…

“”ನೀ ಈಗ ಏನ್‌ ಕೆಲಸದಲ್ಲಿದೀ ಅಮೀನಾ?” ಚಟಪಟನೆ ಮಾತನಾಡುತ್ತಿದ್ದ, ಬಲು ಆಸ್ಥೆಯಿಂದ ಅಲಂಕರಿಸಿಕೊಂಡು ಬಂದಿದ್ದ ಗೆಳತಿಯನ್ನು ಕೇಳಿದೆ.
“”ಕೆಲ್ಸ ಏನೂ ಇಲ್ಲ ಮಾರಾಯ್ತಿ, ಹಿಂಗೇ ಮನೇಲಿದ್ದೆ…”
“”ಹಿಂಗೇ ಎಲ್ಲಿರ್ತದೆ ಅದು? ಬೀಡಿ ಕಟ್ಟುವುದು, ಮಲ್ಗೆ ಮಾಲೆ ಮಾಡಿ ಮಾರುವುದು, ಸುರಗಿ ಮಕ್ಕೆ, ಕಾಡರಶ¡ ತಂದು ಕಮಿ¤àರಿಗೆ ಹಾಕುವುದು ಏನಾದ್ರು ಮಾಡ್ತನೇ ಇರ್ತದೆ…” ಲಕ್ಷ್ಮಿಯ ಮಾತು.
“”ನೀಯೆಂತ ಕೆಲ್ಸ ಮಾಡ್ತಿದ್ಯೆ ಲಕ್ಷ್ಮಿ?” ದುಬೈಯಿಂದ ಬಂದಿದ್ದ ರೀಟಾ ಕೇಳಿದಳು.

“”ಎಂತದೂ ಇಲ್ವೆ. ಎಂಥ ಮಣ್ಣು ಕೆಲ್ಸವೇನೋ ನಮದು. ಬ್ಯಾಸ್ರ ಯಾಕಂದ್ರೆ ಇಷ್ಟಪ ಕೆಲ್ಸ ಮಾಡ್ತಿದ್ರೂ ಮನೆ ಗಂಡಸ್ರ ಕೇಳಿದ್ರೆ ಈ ಹೆಂಗಸ್ರಿಗೆ ಎಂತ ಕೆಲ್ಸ? ನಾವ್‌ ದುಡ್ಕ ಬಂದಿದ್ನ ಮಾಡ್ಕಂಡ್‌ ತಿಂಬೂದು ಅಷ್ಟೆಯ ಅಂತ ನಗಾಡು . ಪೋಲಕ ಹೊಲುಸ್ಬೇಕು, ಜಾತ್ರೇಲಿ ಬಳೆ ಇಟ್ಕಬೇಕು ಅಂತ ಗಣಸ್ರ ಹತ್ರ ದುಡ್‌ ಕೇಳಿದ್ರೆ ನೂರು ಮಾತು.. ಕೆಲಸ ಅಂತ ಕಣ್ಕೆ ಯಾರ್ಗೂ ಕಾಣದೆ ಇರೋ ಕೆಲ್ಸನ ಒಂದೇಸಮ ಮಾಡ್ತಾನೇ ಇದೀವಿ…”

ಲಕ್ಷ್ಮಿಯ ದನಿಯಲ್ಲಿದ್ದ ಖೇದ ಎಲ್ಲರ ಅನುಭವಕ್ಕೆ ನಿಲುಕಿ ಚಣ ಮೌನ ಆವರಿಸಿತು. ಈ ವಿಷಾದದ ದನಿಗಳು ಗೃಹಬಂಧನಕ್ಕೊಳಗಾಗಿ ಗೃಹಸೇವಕಿಯರಾದ ಗೃಹಪಾಲಕಿಯರದು. ಒಂದಿಡೀ ಸಂಸಾರದ ಹೊಟ್ಟೆ-ನಾಲಗೆಯ ಕಾಳಜಿ, ಹಿರಿಕಿರಿಯರ ಹೊತ್ತುಗೊತ್ತಿನ ಪೂರೈಕೆ, ರಿಪೇರಿ, ಸ್ವತ್ಛತೆ, ಸಾಮಾನು ದಾಸ್ತಾನು, ಹಿತ್ತಲು-ಅಂಗಳ-ದನಕರು-ಗಿಡಗಂಟಿ ಮೇಲ್ವಿಚಾರಣೆಗಳನ್ನೆಲ್ಲ ನೋಡಿಕೊಳ್ಳುವ ಮನೆಯೊಡತಿಯರ ಆಡಲಾಗದ ಮಾತುಗಳಿವು. ಕೆಲವರಿಗೆ ಮನೆಕೆಲಸದ ಜೊತೆ ಕೃಷಿ ಕೆಲಸವಿದ್ದರೆ ಮತ್ತೆ ಕೆಲವರಿಗೆ ಅಂಗಡಿ, ಹಣ್ಣು-ತರಕಾರಿ ಬೆಳೆಯುವುದು, ಹಾಲು ವ್ಯಾಪಾರ ಇತ್ಯಾದಿ ಮೇಲುವಸಿ ಕೆಲಸವಿರುತ್ತದೆ. ಮಕ್ಕಳ ಹೊತ್ತು ಹೆತ್ತು ಸಾಕುವುದು, ಮನೆಯ ಅಶಕ್ತರಿಗೆ, ಅನಾರೋಗ್ಯದವರಿಗೆ ಹೆಗಲಾಗಿ ಸೇವೆ ಮಾಡುವುದು ಹೆಂಗಸರದೇ ಹೊಣೆ. ಎರಡು ಕೈಗಳಿಗೆ ಇಪ್ಪತ್ತು ಕೈಗಳ ಕೆಲಸವಿರುತ್ತದೆ. ಎಷ್ಟು ಮಾಡಿದರೇನಂತೆ? “”ಏನೆ ಕೆಲಸ ಮಾಡ್ತಿದೀರಾ?” ಎಂದು ಯಾರಾದರೂ ಕೇಳಿದರೆ, ಗೃಹಲಕ್ಷ್ಮಿಯರು “”ಏನೂ ಇಲ್ಲ” ಎನ್ನುತ್ತ ಮುರುಟಿಕೊಳ್ಳುತ್ತಾರೆ !

ಯಾಕೆಂದರೆ, ಹೆಣ್ಣುಗಳಿಗೆ ಮನೆವಾರ್ತೆಯ ದುಡಿಮೆ ಎಂದರೆ ಕೊನೆ-ಮೊದಲಿರದ, ವಿರಾಮವಿರದ ಸ್ವಾತಂತ್ರ್ಯಹರಣ. ಅದು ರಜೆಯಿರದ, ವೇತನವಿರದ, ವಿರಾಮವೂ ಇರದ ಹೇರಲ್ಪಟ್ಟ ದುಡಿಮೆ. ಆ ದುಡಿಮೆ ಅವರಿಗೆ ಗೌರವ ತರುತ್ತಿಲ್ಲ, ಅಧಿಕಾರ ನೀಡುತ್ತಿಲ್ಲ, ಸ್ವಾತಂತ್ರ್ಯ ನೀಡುತ್ತಿಲ್ಲ. ಬದಲಾಗಿ ಗೌರವ, ಅಧಿಕಾರ, ಸ್ವಾತಂತ್ರ್ಯ ಎಲ್ಲಕ್ಕೂ ಎರವಾಗಿದೆ. ಹೆಣ್ಣುತನವನ್ನು ಸಾಬೀತುಪಡಿಸುವುದೇ ಮನೆಯೊಳಗಿನ ಉಚಿತ ದುಡಿಮೆ ಎನ್ನಲಾಗುತ್ತದೆ.

ಕಾಣದ ಕೆಲಸ, ಕೇಳದ ಕಥೆ…
ಕಾಯಕವೇ ಶ್ರೇಷ್ಠ, ಕಾಯಕವೇ ಧರ್ಮ ಎಂದ ಶರಣರ ನೆಲ ನಮ್ಮದು. “ಅನ್ನ ಶ್ರಮ’ ಎನ್ನುತ್ತಿದ್ದರು ಗಾಂಧೀಜಿ. “ವಸ್ತುವಿನ ತಯಾರಿಕೆಯ ಹಿಂದೆ ರಕ್ತ, ಬೆವರು, ಕಣ್ಣೀರು ಇರುತ್ತದೆ. ಅದನ್ನು ಅದೃಶ್ಯವಾಗಿಸಿ ಸರಕಿಗೆ ಮೌಲ್ಯ ತುಂಬಲಾಗುತ್ತದೆ’ ಎಂದ ಕಾರ್ಲ್ ಮಾರ್ಕ್ಸ್. ಕೆಲಸದ ಮೇಲುಕೀಳು ವಿಭಜನೆಯಿಂದ ಹುಟ್ಟಿದ ಜಾತಿವ್ಯವಸ್ಥೆಯನ್ನೇ ಅಂಬೇಡ್ಕರರು ನಿರಾಕರಿಸಿದರು. ಶ್ರಮದ ಮಹತ್ವದ ಬಗೆಗೆ ಎಲ್ಲ ಮಹಾನುಭಾವರೂ ತಿಳಿಸಿ ಹೇಳಿದರು. ಆದರೂ ಮನೆವಾರ್ತೆಯ ಶ್ರಮ ಕೀಳೆನಿಸಿಕೊಂಡು ಕೇವಲ ಹೆಣ್ಣುಗಳ ಹೆಗಲ ವಜ್ಜೆಯಾಗಿಸಿತು. ಅವರ ಕೆಲಸವೆಲ್ಲ ವೇತನರಹಿತ, ಉಚಿತ, ಕಡ್ಡಾಯ ಸೇವೆಯೇ ಆಯಿತು.

ಒಂದು ಅಧ್ಯಯನದಂತೆ ಪ್ರತಿಹೆಣ್ಣೂ ಪ್ರತಿದಿನ ವೇತನವಿರದ 297 ನಿಮಿಷ ಸೇವೆಯ ಕೆಲಸ ಮಾಡಿದರೆ, ಪ್ರತಿ ಗಂಡೂ 31 ನಿಮಿಷ ಅಂತಹ ಕೆಲಸ ಮಾಡುತ್ತಾನೆ. ಎಂದರೆ ಪ್ರತಿ ಮನೆಯೂ ಮನೆಯಾಗಿರುವುದರ ಹಿಂದೆ ಕನಿಷ್ಠ ಒಬ್ಬಳ “ರಕ್ತ, ಬೆವರು, ಕಣ್ಣೀರು’ ಇದೆ. ಹತ್ತುಹಲವು ನಿರೀಕ್ಷೆಗಳಿಗೆ ತಕ್ಕವಳಾಗಿ ಬದುಕಲು ಹಲವಾರು ಕೆಲಸಗಳನ್ನು ಒಮ್ಮೆಗೇ ಮಾಡಬೇಕಾದ ಬಲವಂತ ಮತ್ತು ಅನಿವಾರ್ಯತೆ ಹೆಣ್ಣುಗಳ ಮೇಲಿದ್ದರೂ, ಅದು “ಮಲ್ಟಿಟಾಸ್ಕಿಂಗ್‌’ ಎಂಬ ಬಿರುದಿಗೆ ಪಾತ್ರವಾಗಿದೆ. ಆದರೆ, ಹೆಣ್ಣು ಬದುಕಿನ ಗುಣಾತ್ಮಕತೆಯನ್ನು ಅದೇ ಕಡಿಮೆ ಮಾಡಿದೆ. ಕೆಲಸದ ಸ್ಥಳದಲ್ಲೂ ಮಹಿಳೆಗೆ ಎರಡನೆಯ ದರ್ಜೆ ಸ್ಥಾನ, ಅಪಾಯಗಳೇ ಹೆಜ್ಜೆಹೆಜ್ಜೆಗೂ ಎದುರಾಗುತ್ತವೆ. ಮನೆಯಾಚೆಗೂ ದುಡಿದು ಗಳಿಸುತ್ತಿದ್ದರೂ ಮನೆಗೆ ಬಂದನಂತರ ವಿರಾಮ ಮರೀಚಿಕೆ. ಅತಿಶ್ರಮದ ಅನುಭವಗಳು ಹೆಣ್ಣುಜನ್ಮ ಕೀಳು, ಹೆಣ್ಣು ಜನ್ಮ ಬೇಡ ಎಂದು ಹೆಣ್ಣುಗಳೇ ಹೇಳುವಂತೆ ಮಾಡಿವೆ.

ಎಚ್‌. ಎಸ್‌. ಅನುಪಮಾ

ಫೊಟೊ : ಶಮಂತ್‌ ಪಾಟೀಲ್‌

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

9

Cooker Story: ಹತ್ತು ಸಲ ಕೂಗಿದ್ರೂ  ಅವರಿಗೆ ಗೊತ್ತಾಗಲಿಲ್ಲ..!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.