ಕೊರೊನಾ ಶಂಕಿತ ಪ್ರಕರಣ ಪತ್ತೆಯಾಗಿಲ್ಲ : ಡಾ| ಗಿರೀಶ್
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಸಿ ಪದಾರ್ಥ ಸೇವಿಸಿ
Team Udayavani, Mar 7, 2020, 6:12 PM IST
ಚಿತ್ರದುರ್ಗ: ರಾಜ್ಯದಲ್ಲಿ ಕೊರೊನಾ ವೈರಸ್‌ನ ಯಾವುದೇ ಶಂಕಿತ ಪ್ರಕರಣ ಪತ್ತೆಯಾಗಿಲ್ಲ, ಆದರೂ, ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಇಲಾಖೆಯಿಂದ ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಪಂ ಅಧ್ಯಕ್ಷ ಡಿ.ಎಂ. ಲಿಂಗರಾಜು ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಐದು ಬೆಡ್‌ಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಎರಡು ಬೆಡ್ಗಳ ಪ್ರತ್ಯೇಕ ಐಸೋಲೇಷನ್ ವಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.
ಎಚ್1ಎನ್1 ಉಲ್ಬಣಿಸಿದಾಗಲೂ ಆರೋಗ್ಯ ಇಲಾಖೆಯಿಂದ ಸಮರ್ಥವಾಗಿ ನಿಭಾಯಿಸಿದ್ದೇವೆ. ಅದೇ ರೀತಿ ಕೊರೊನಾ ವೈರಸ್ ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಈಗಲೇ ಮಾಸ್ಕ್ ತೆಗೆದುಕೊಂಡು ಉಪಯೋಗಿಸುವ ಅಗತ್ಯ ಇಲ್ಲ, ವಿನಾಕಾರಣ ಈ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ ಅಲ್ಲ ಎಂದರು.
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹೊರಗಡೆಯಿಂದ ಮನೆಗೆ ಹೋದ ಬಳಿಕ ಸೋಪ್ ನಿಂದ ಕೈ ತೊಳೆಯಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಸಿ ಪದಾರ್ಥಗಳನ್ನು ಸೇವಿಸಬೇಕು ಎಂದು ಹೇಳಿದರು.
ತೆಲಂಗಾಣದಿಂದ ಬೆಂಗಳೂರಿಗೆ ಭೇಟಿ ನೀಡಿದ್ದ ಕೊರೊನಾ ಶಂಕಿತ ವ್ಯಕ್ತಿ ಒಂದು ದಿನ ಮಾತ್ರ ಗಳೂರಿನಲ್ಲಿ ಇದ್ದು ಹೋಗಿದ್ದಾರೆ. ಆತ ಭೇಟಿ ಮಾಡಿ ಮಾತನಾಡಿಸಿದ ಎಲ್ಲರನ್ನೂ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ ಎಂದು ತಿಳಿಸಿದರು.
ಸದ್ಯ ವಿಶೇಷಗಳಿಗೆ ಹೋಗುವುದನ್ನು ನಿಲ್ಲಿಸಿ, ಮುಖ್ಯವಾಗಿ ಚೀನಾ, ಇರಾನ್, ಕೋರಿಯಾ, ಇಟಲಿ, ಜಪಾನ್ ದೇಶಗಳಿಗೆ ಹೋಗಲೇಬೇಡಿ. ರಾಜ್ಯದ ಮಂಗಳೂರು, ಬೆಳಗಾವಿ ಸೇರಿದಂತೆ ಗಡಿ ಪ್ರದೇಶಗಳ ಊರುಗಳಲ್ಲಿ ಹೊರ ರಾಜ್ಯಗಳಿಂದ ಬಂದ ಎಲ್ಲರ ಸ್ಕ್ರೀನಿಂಗ್ ನಡೆಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತಾಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.
ಸಿಸಿ ಕ್ಯಾಮರಾ ಇಲ್ಲದ ಕೇಂದ್ರಗಳಲ್ಲಿ ಕಾರಿಡಾರ್‌ಗಳಲ್ಲಿ ಅಳವಡಿಸುವ ವ್ಯವಸ್ಥೆ ಮಾಡಲಾಗಿದೆ. ಮುಖ್ಯ ಅಧೀಕ್ಷಕರ ಕೊಠಡಿಯಿಂದ ಪ್ರಶ್ನೆಪತ್ರಿಕೆ ಬಂಡಲ್ ಓಪನ್ ಮಾಡಲಾಗುತ್ತದೆ. ತಾಲೂಕಿನಲ್ಲಿ 6495 ಮಕ್ಕಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸುಧಾಕರ್ ಮಾತನಾಡಿ, ನರೇಗಾ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ 42 ಸಾವಿರ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಹೇಳಿದರು.
ತಾಪಂ ಇಒ ಕೃಷ್ಣನಾಯ್ಕ ಮಾತನಾಡಿ, ಎಲ್ಲಾ ಇಲಾಖೆಯವರು ಈ ತಿಂಗಳ ಅಂತ್ಯದೊಳಗೆ ಅನುದಾನ ಖರ್ಚು ಮಾಡಬೇಕು. ಯಾವುದಾದರು ಅಲಾಟ್‌ಮೆಂಟ್ ಬಿಡುಗಡೆ ಮಾಡುವುದಿದ್ದರೆ ತಿಳಿಸಿ ಮಾಡಿಕೊಡಲಾಗುವುದು ಎಂದರು. ತಾಪಂ ಉಪಾಧ್ಯಕ್ಷೆ ಸಿ.ಶಾಂತಮ್ಮ ರೇವಣಸಿದ್ದಪ್ಪ, ತಿಪ್ಪಮ್ಮ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.