ಸಿದ್ಧಗಂಗೆ ಜನರೇ ಬೆಳೆಸಿದ ಮಠ: ಸಿದ್ಧಲಿಂಗ ಶ್ರೀ
ಅದ್ಧೂರಿ ಸಮಾರಂಭಡಾ| ಶಿವಕುಮಾರ ಸ್ವಾಮೀಜಿ ಪುತ್ಥಳಿ ಅನಾವರಣಸ್ಕೂಲ್ ಆಫ್ ಆರ್ಕಿಟೆಕ್ಚರ್‌ಗೆ ನಾಮಕರಣ
Team Udayavani, Mar 8, 2020, 10:37 AM IST
ಕಲಬುರಗಿ: ಸಿದ್ಧಗಂಗಾ ಮಠ ಶ್ರೀಮಂತಿಕೆಯಿಂದ ಬೆಳೆದ ಮಠವಲ್ಲ. ಲಿಂ. ಡಾ| ಶಿವಕುಮಾರ ಸ್ವಾಮೀಜಿ ಜೋಳಿಗೆ ಹಿಡಿದು ಹೊರಟಾಗ ಜನರೇ ಕಾಣಿಕೆ ನೀಡಿ ಬೆಳೆಸಿದ ಮಠವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮೀಜಿ ನುಡಿದರು.
ನಗರದ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಪೂಜ್ಯ ಡಾ| ಶಿವಕುಮಾರ ಸ್ವಾಮೀಜಿ ಸ್ಕೂಲ್ ಆಫ್ ಆರ್ಕಿಟೆಕ್ಚರ್‌ನ ಉದ್ಘಾಟನೆ, ಡಾ| ಶಿವಕುಮಾರ ಸ್ವಾಮೀಜಿಗಳ ಪುತ್ಥಳಿ ಅನಾವರಣಗೊಳಿಸಿ ಅವರು ಆಶೀರ್ವಚನ ನೀಡಿದರು.
ಡಾ| ಶಿವಕುಮಾರ ಸ್ವಾಮೀಜಿ ಜಾತಿ ನೋಡಲಿಲ್ಲ. ಯಾವುದೇ ಬೇಧ-ಭಾವ ಮಾಡಲಿಲ್ಲ. ಎಲ್ಲ ಜಾತಿ, ಧರ್ಮದ ಮಕ್ಕಳು ಊಟ ಮಾಡಬೇಕು. ಚೆನ್ನಾಗಿ ಓದಬೇಕು ಎನ್ನುವ ಒಂದೇ ಉದ್ದೇಶದಿಂದ ಮಠ ಬೆಳೆಸಿದರು. ಪಟ್ಟಣದ ಮಕ್ಕಳನ್ನು ಯಾರಾದರೂ ನೋಡಿಕೊಳ್ಳುತ್ತಾರೆ. ಆದರೆ, ಹಳ್ಳಿಗರ ಮಕ್ಕಳನ್ನು ಯಾರು ನೋಡುತ್ತಾರೆ ಎಂದು ತುಡಿತದಿಂದ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಆರಂಭಿಸಿದರು. ಶ್ರೀ ಮಠದ ಶೇ.99ರಷ್ಟು ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಪ್ರದೇಶದಲ್ಲೇ ಇವೆ ಎಂದರು.
ಕಾಯಕ, ದಾಸೋಹ, ಶಿವಯೋಗ ಮತ್ತು ಸೇವೆ ಎನ್ನುವ ನಾಲ್ಕು ತತ್ವಗಳನ್ನೇ ಡಾ| ಶಿವಕುಮಾರ ಸ್ವಾಮೀಜಿ ಜೀವನದುದ್ದಕ್ಕೂ ಅನುಸರಿಸಿಕೊಂಡು ಬಂದರು. ಮಕ್ಕಳಲ್ಲಿಯೇ ದೇವರನ್ನು ಕಂಡ ದೇವತಾ ಮನುಷ್ಯರು ಅವರು. ಈ ಕಾರಣದಿಂದಲೇ ನೂರಾರು ಕಿ.ಮೀ ದೂರದ ಕಲಬುರಗಿಯಲ್ಲೂ ಅವರ ಬಗ್ಗೆ ಅಭಿಮಾನ, ಗೌರವ ಇದೆ. ಇಲ್ಲಿನ ಅನೇಕಾನೇಕ ಮಕ್ಕಳು ಶ್ರೀಮಠದಲ್ಲಿ ಓದಿ ಬೆಳೆದಿದ್ದಾರೆ ಎಂದರು.
ಬಸವಾದಿ ಶರಣರು 12ನೇ ಶತಮಾನದಲ್ಲೇ “ಜೀವನ ಸಂವಿಧಾನ’ ಬರೆದಿದ್ದಾರೆ. ಶರಣರ
ಸಂಪ್ರದಾಯವನ್ನು ಕಲಬುರಗಿಯ ಪೂಜ್ಯ ದೊಡ್ಡಪ್ಪ ಅಪ್ಪ ಮತ್ತು ತುಮಕೂರಿನ ಪೂಜ್ಯ ಶಿವಕುಮಾರ ಸ್ವಾಮೀಜಿ ಮುಂದುವರಿಸಿಕೊಂಡು ಬಂದರು. ಈ ಭಾಗದ ಹೃದಯದಲ್ಲಿ ಪೂಜ್ಯ ದೊಡ್ಡಪ್ಪ ಅಪ್ಪ ಅವರಂತೆ ಶಿವಕುಮಾರ ಸ್ವಾಮೀಜಿ ಇದ್ದಾರೆ. ಇಬ್ಬರನ್ನು ಜನತೆ ಎರಡು ಕಣ್ಣುಗಳೆಂದು ಭಾವಿಸಿದ್ದಾರೆ ಎಂದು ಬಣ್ಣಿಸಿದರು.
ಅಧ್ಯಕ್ಷತೆ ವಹಿಸಿದ್ದ ಎಚ್‌ಕೆಇ ಸಂಸ್ಥೆ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಎಚ್‌ಕೆಇ ಸಂಸ್ಥೆಯ ಉಪಾಧ್ಯಕ್ಷ ಶಿವಾನಂದ ದೇವರಮನಿ, ಕಾರ್ಯದರ್ಶಿ ಡಾ| ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿ ಗಂಗಾಧರ ಡಿ.ಎಲಿ, ಸದಸ್ಯರಾದ ಡಾ| ಬಸವರಾಜ ಪಾಟೀಲ, ಡಾ| ಸಂಪತ್‌ಕುಮಾರ ಲೋಯಾ, ವಿಜಯಕುಮಾರ ದೇಶಮುಖ, ನಿತಿನ್ ಜವಳಿ, ಅರುಣಕುಮಾರ ಪಾಟೀಲ, ಉದಯಕುಮಾರ ಚಿಂಚೋಳಿ, ಅನಿಲಕುಮಾರ ಮರಗೋಳ, ಡಾ| ಶರಣಬಸವಪ್ಪ ಕಾಮರೆಡ್ಡಿ, ಸತೀಶ್ಚಂದ್ರ ಹಡಗಲಿಮಠ, ಡಾ| ವೀರಭದ್ರ ನಂದ್ಯಾಳ, ಸ್ಕೂಲ್ ಆಫ್ ಆರ್ಕಿಟೆಕ್ಚರ್ ಪ್ರಾಂಶುಪಾಲ ವಜ್ರಕುಮಾರ ಮೆಹ್ತಾ, ಎಂಜಿನಿಯರಿಂಗ್ ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಪ್ರೊ| ಶಶಿಧರ ಕಲಶೆಟ್ಟಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.