ಸರಕಾರದಿಂದ ಕೃಷಿ-ಕೈಗಾರಿಕೆಗೆ ಆದ್ಯತೆ
ರೈತರ ನೆಮ್ಮದಿ ಜೀವನಕ್ಕೆ ಸರ್ಕಾರ ಬದ್ಧ ನೀರಾವರಿ ಯೋಜನೆಗಳಿಗೆ ಹೆಚ್ಚು ಅನುದಾನ
Team Udayavani, Mar 8, 2020, 11:28 AM IST
ದಾವಣಗೆರೆ: ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೃಷಿ ಮತ್ತು ಕೈಗಾರಿಕೆಗೆ ಸಮಾನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹೊನ್ನಾಳಿಯ ಹಿರೇಕಲ್ಮಠದಲ್ಲಿ ಶನಿವಾರ ಚಂದ್ರ ಸ್ಮರಣೆ ರಾಜ್ಯಮಟ್ಟದ ಕೃಷಿ ಮೇಳ-2020 ಉದ್ಘಾಟಿಸಿ ಮಾತನಾಡಿದ ಅವರು, ರೈತರು ನೆಮ್ಮದಿ, ಗೌರವ, ಸ್ವಾಭಿಮಾನದಿಂದ ಬದುಕುವ
ಕಾರ್ಯಕ್ರಮ ಜಾರಿಗೊಳಿಸಲು ನಮ್ಮ ಸರ್ಕಾರ ಸದಾ ಬದ್ಧ. ಕೃಷಿ ಕ್ಷೇತ್ರದ ಅಭಿವೃದ್ಧಿಯ ಜತೆಗೆ ಯುವ ಜನಾಂಗಕ್ಕೆ ಉದ್ಯೋಗ ಅವಕಾಶ ಮಾಡಿಕೊಡುವ ಕೈಗಾರಿಕೆ ಪ್ರಾರಂಭಿಸಲಾಗುವುದು. ಕೃಷಿ ಮತ್ತು ಕೈಗಾರಿಕೆ ಒಂದಾದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂದು ಪ್ರತಿಪಾದಿಸಿದರು.
ರಾಜ್ಯದಲ್ಲಿನ ಬಹುತೇಕರ ಕಸುಬು ಕೃಷಿ ಆಗಿದೆ. ರೈತರು ನೆಮ್ಮದಿ, ಗೌರವ, ಸ್ವಾಭಿಮಾನದಿಂದ ಬದುಕ ಬೇಕು ಎಂಬ ಉದ್ದೇಶದಿಂದ ಆರ್ಥಿಕ ಸಂಕಷ್ಟದ ನಡುವೆಯೂ ಮಾ.5ರಂದು ಮಂಡಿಸಿದ ಬಜೆಟ್‌ನಲ್ಲಿ ಏತ ನೀರಾವರಿ ಯೋಜನೆಗಳಿಗೆ 5 ಸಾವಿರ ಕೋಟಿ ರೂ. ನೀಡಲಾಗಿದೆ. ನೀರಾವರಿ ಯೋಜನೆಗಳಿಗೂ ಹೆಚ್ಚು ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಕ್ಕು ನೆಮ್ಮದಿ, ಗೌರವ, ಸ್ವಾಭಿಮಾನದಿಂದ ಬದುಕುವಂತಾಗಬೇಕು ಎಂಬುದು ನಮ್ಮ ಸರ್ಕಾರದ ಮೊದಲ ಆದ್ಯತೆ. ಮುಂದಿನ ಮೂರು ವರ್ಷದಲ್ಲಿ ರೈತರು ಪ್ರಾಮಾಣಿಕ, ಸ್ವಾಭಿಮಾನ ಮತ್ತು ಗೌರವದಿಂದ ಬದುಕಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.
ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕೊಡಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದ 70 ವರ್ಷಗಳಲ್ಲಿ ಸರ್ಕಾರಗಳ ವೈಫಲ್ಯದಿಂದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗದೆ ಸಾಲದ ಸುಳಿಯಲ್ಲಿ ಸಿಲುಕಿ ಜೀವನ ನಡೆಸುವ ರೈತರನ್ನು ಸಂಪೂರ್ಣವಾಗಿ ಸಂಕಷ್ಟದಿಂದ ಹೊರ ತಂದು ನೆಮ್ಮದಿಯ ಜೀವನ ನಡೆಸಲು ಏನು ಸವಲತ್ತು ಬೇಕೋ ಅವೆ ಲ್ಲವನ್ನೂ ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು.
ಕಳೆದ 110 ವರ್ಷದಲ್ಲಿ ಕಂಡು ಕೇಳರಿಯದ ಭೀಕರ ಪ್ರವಾಹದಿಂದ ಉತ್ತರ ಕರ್ನಾಟಕ ಒಳಗೊಂಡಂತೆ ಅನೇಕ ಕಡೆ ಸಾವಿರಾರು ಜನರು ಮನೆ ಕಳೆದುಕೊಂಡಿದ್ದಾರೆ. ಲಕ್ಷಾಂತರ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಅವರು ನೆಮ್ಮದಿ ಜೀವನ ನಡೆಸಬೇಕು ಎಂದು ಸರ್ಕಾರ ಹಲವಾರು ಕ್ರಮ ತೆಗೆದುಕೊಂಡಿದೆ. ಮನೆ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ 95 ಸಾವಿರ ನೀಡಿದರೆ ರಾಜ್ಯ ಸರ್ಕಾರ 5 ಲಕ್ಷ ನೀಡಲಿದೆ. ಈಗಾಗಲೇ 1 ಲಕ್ಷ ಬಿಡುಗಡೆ ಮಾಡಿ, ಬುನಾದಿ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಬೆಳೆ ಕಳೆದುಕೊಂಡತಹವರಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಪರಿಹಾರಕ್ಕಿಂತಲೂ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 10 ಸಾವಿರ ರೂ. ನೀಡುತ್ತಿದೆ. ಇನ್ನೂ ಬಹಳಷ್ಟು ಕೆಲಸ ಮಾಡಬೇಕಾಗಿದೆ. ಪ್ರವಾಹ ಸಂತ್ರಸ್ತರ ನೆರವಿಗೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದರು. ರಾಜ್ಯ ಸರ್ಕಾರ ರೈತರು ನೆಮ್ಮದಿಯಿಂದ ಬದುಕುವಂತಹ ಕಾರ್ಯಕ್ರಮಗಳ ಜತೆಗೆ ಮಹಿಳಾ ಸಬಲೀಕರಣ, ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳು ಬಲಿಷ್ಠವಾಗಬೇಕು. ಯುವಕರಿಗೆ ಉದ್ಯೋಗ ದೊರೆಯಲು ಕೈಗಾರಿಕೆ ಬರಬೇಕು. ಕೃಷಿ ಮತ್ತು ಕೈಗಾರಿಕೆ ಒಟ್ಟಿಗೆ ಹೋದಾಗ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ ಆಗುತ್ತದೆ ಎಂದು ಪುನರುಚ್ಚರಿಸಿದರು.
ಹೊನ್ನಾಳಿಯ ಹಿರೇಕಲ್ಮಠ ದೇಶದ ಅತಿ ದೊಡ್ಡ ಶಿಲಾಮಠ ಎಂಬ ಇತಿಹಾಸ ಹೊಂದಿದೆ. 11ನೇ ಶತಮಾನದಲ್ಲಿ ಮಠವನ್ನು ಸ್ಥಾಪಿಸಿದ ಚನ್ನಪ್ಪ ಸ್ವಾಮೀಜಿ ಚಿರಪರಿಚಿತರು. 16ನೇ ಜಗದ್ಗುರುಗಳಾದ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರು ಧರ್ಮ ಜಾಗೃತಿ, ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜ ಸೇವೆ ಮಾಡುತ್ತಿದ್ದಾರೆ. ನಾಡಿನ ರೈತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಸ್ವಾಮೀಜಿಯವರು ಕೃಷಿಗೆ ಹೊಸ ಆಯಾಮ ನೀಡುವ ಉದ್ದೇಶದಿಂದ ಚಂದ್ರ ಸ್ಮರಣೆ, ರಾಜ್ಯ ಮಟ್ಟದ ಕೃಷಿ ಮೇಳ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.