ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸಿ

ಬಲವಂತದಿಂದ ಬಣ್ಣ ಹಚ್ಚುವುದು ಸರಿಯಲ್ಲ ವಾಹನ ಅಡ್ಡಗಟ್ಟಿ ಹಣ ವಸೂಲಿ ಮಾಡಿದರೆ ಕ್ರಮ

Team Udayavani, Mar 8, 2020, 4:32 PM IST

8-March-26

ಸುರಪುರ: ನಗರದಲ್ಲಿ ಹೋಳಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು ಎಂದು ಸಿಪಿಐ ಸಾಹೇಬಗೌಡ ಪಾಟೀಲ ತಿಳಿಸಿದರು.

ನಗರದ ಪೊಲೀಸ್‌ ಠಾಣೆಯಲ್ಲಿ ಶನಿವಾರ ನಡೆದ ಶಾಂತಿಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಧರ್ಮದ ಹಬ್ಬದ ಹಿಂದೆ ಐತಿಹಾಸಿಕ ಹಿನ್ನೆಲೆ ಇರುತ್ತದೆ. ಅದನ್ನು ಅರ್ಥಪೂರ್ಣವಾಗಿ ಆಚರಿಸಿದಾಗ ಹಬ್ಬ ಹರಿದಿನಗಳಿಗೆ ಅರ್ಥ ಬರುತ್ತದೆ. ಹೀಗಾಗಿ ಹೋಳಿ ಹಬ್ಬವನ್ನು ಎಲ್ಲರೂ ಸೇರಿ ಶಾಂತಿಯಿಂದ ಆಚರಿಸಬೇಕು ಎಂದು ಹೇಳಿದರು.

ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಮತ್ತು ಕೊರೊನಾ ವೈರಸ್‌ ಆತಂಕ ಇರುವುದರಿಂದ ಯುವಕರು ಎಚ್ಚರಿಕೆಯಿಂದ ಬಣ್ಣ ಆಡಬೇಕು. ಒತ್ತಾಯ, ಬಲವಂತದಿಂದ ಬಣ್ಣ ಹಾಕುವುದು ಸರಿಯಲ್ಲ, ಬಣ್ಣ ಎರಚುವ ನೆಪದಲ್ಲಿ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದು ಅಪರಾಧ ಎಂದರು.

ವೆಂಕೋಬ ದೊರೆ, ಉಸ್ತಾದ್‌ ವಜಾಹತ್‌ ಹುಸೇನ್‌, ವೆಂಕಟೇಶ ಬೇಟೆಗಾರ, ವೆಂಕಟೇಶ ನಾಯಕ ಬೈರಿಮರಡಿ, ಶಿವಲಿಂಗ ಚಲುವಾದಿ, ರಾಹುಲ್‌ ಹುಲಿಮನಿ, ಎಂ. ಪಟೇಲ್‌ ಇತರರು ಮಾತನಾಡಿ, ಸುರಪುರದಲ್ಲಿ ಪ್ರತಿಯೊಂದು ಹಬ್ಬಗಳು ಭಾವೈಕ್ಯತೆಯಿಂದ ನಡೆಯುತ್ತಿವೆ. ಇಲ್ಲಿಯವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದ ಉದಾಹರಣೆ ಇಲ್ಲ. ಅದಕ್ಕೆ ಯಾರೊಬ್ಬರು ಸಹ ಅವಕಾಶ ನೀಡುವುದಿಲ್ಲ. ಪರಸ್ಪರ ಶಾಂತಿ-ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತವೆ. ಸಣ್ಣ ಪುಟ್ಟ ಘಟನೆಗಳಿದ್ದಲ್ಲಿ ಆಯಾ ಧರ್ಮಗಳ ಮುಖಂಡರು ತಿಳಿ ಹೇಳಿ ಸಮಸ್ಯೆಯಾಗದಂತೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

ದಾನಪ್ಪ ಕಡಿಮನಿ, ನಿಂಗಣ್ಣ ಗೋನಾಳ, ರಾಮಣ್ಣ ಶೆಳ್ಳಗಿ, ಬಸವಲಿಂಗಪ್ಪ ಐನಾಪುರ, ದೇವಿಂದ್ರಪ್ಪ ಬಳಿಚಕ್ರ, ಎಂ. ಪಾಶಾ, ವೆಂಕಟೇಶ ಅಮ್ಮಾಪುರ, ಮಲ್ಲೇಶಿ ಪೂಜಾರಿ ಸೇರಿದಂತೆ ಇನ್ನಿತರರಿದ್ದರು. ಪಿಎಸ್‌ಐಗಳಾದ ಚೇತನ ಕುಮಾರ, ಚಂದ್ರಶೇಖರ ನಾರಾಯಣಪುರ ವೇದಿಕೆಯಲ್ಲಿದ್ದರು. ಮುಖ್ಯ ಪೇದೆ ಮಂಜುನಾಥ ಸ್ವಾಮಿ ಸ್ವಾಗತಿಸಿದರು. ಮಹಾಂತೇಶ ಬಿರಾದಾರ ನಿರೂಪಿಸಿದರು. ಶರಣುಗೌಡ ವಂದಿಸಿದರು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.