ಕಡ್ತಲ: ಅಗೆದು ಹಾಕಿದ ಮೂರ್ಸಾಲು ಸಂಪರ್ಕ ರಸ್ತೆ, ಸ್ಥಳೀಯರಿಗೆ ಸಂಕಷ್ಟ


Team Udayavani, Mar 9, 2020, 5:23 AM IST

ಕಡ್ತಲ: ಅಗೆದು ಹಾಕಿದ ಮೂರ್ಸಾಲು ಸಂಪರ್ಕ ರಸ್ತೆ, ಸ್ಥಳೀಯರಿಗೆ ಸಂಕಷ್ಟ

ಅಜೆಕಾರು: ಕಡ್ತಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೂರ್ಸಾಲು ಮುನಿಯಾಲು ಸಂಪರ್ಕ ರಸ್ತೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗೆಯಲಾಗಿದ್ದು ಅನಂತರ ಕಾಮಗಾರಿ ಸ್ಥಗಿತಗೊಂಡು ಸ್ಥಳೀಯರಿಗೆ ಸಂಚಾರಕ್ಕೆ ಸಂಕಷ್ಟ ಉಂಟಾಗಿದೆ.

ಕಡ್ತಲ ಮೂರ್ಸಾಲು ಮುನಿಯಾಲು ಸಂಪರ್ಕ ರಸ್ತೆಯು ಸುಮಾರು 2 ಕಿ.ಮೀ. ದೂರವಿದ್ದು ರಸ್ತೆ ದುರಸ್ತಿಪಡಿಸುವಂತೆ ಸ್ಥಳಿಯರ ಹಲವು ವರ್ಷ ಗಳಿಂದ ಮನವಿ ಮಾಡುತ್ತಾ ಬಂದಿದ್ದರು.

ಸ್ಥಳೀಯರ ಮನವಿಗೆ ಸ್ಪಂದಿಸಿದ ಸ್ಥಳೀಯಾಡಳಿತ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಸುಮಾರು 1 ಕಿ.ಮೀ ಭಾಗಕ್ಕೆ ಕಾಂಕ್ರೀಟ್‌ ಅಳವಡಿಸುವ ಬಗ್ಗೆ ಶಾಸಕರ ಮೂಲಕ ಅನುದಾನ ಒದಗಿಸಿತ್ತು.

2019ರ ಡಿಸೆಂಬರ್‌ ತಿಂಗಳಿನಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಸುನಿಲ್‌ ಕುಮಾರ್‌ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿ ಆರಂಭಗೊಂಡಿತ್ತು.

ಆದರೆ ಹಳೆಯ ರಸ್ತೆಯನ್ನು ಅಗೆದು ತೆರವು ಗೊಳಿಸಿದ ಗುತ್ತಿಗೆದಾರರು ಮತ್ತೆ ಕಾಮಗಾರಿ ಆರಂಭಿಸಿಲ್ಲ.

ಜಲ್ಲಿಕಲ್ಲು ರಾಶಿ
ರಸ್ತೆಯ ವಿವಿಧೆಡೆ ಜಲ್ಲಿಕಲ್ಲುಗಳನ್ನು ರಾಶಿ ಹಾಕಿರುವುದರಿಂದ ಸ್ಥಳೀಯರು ವಾಹನದಲ್ಲಿ ಸಂಚಾರ ನಡೆಸುವುದು ಅಸಾಧ್ಯವಾಗಿದೆ.

ಹಳೆಯ ರಸ್ತೆ ತೆಗೆದು ಹೊಸ ಕಾಂಕ್ರೀಟ್‌ ರಸ್ತೆ ಮಾಡಬೇಕಾದ ಗುತ್ತಿಗೆದಾರ ಕಳೆದ ಒಂದು ತಿಂಗಳಿನಿಂದ ಯಾವುದೇ ಕಾಮಗಾರಿ ನಡೆಸಿಲ್ಲ.

ಕಾಮಗಾರಿ ನಡೆಸದಿದ್ದರೆ ಹಳೆಯ ರಸ್ತೆ ತೆರವುಗೊಳಿಸಿರುವುದೇಕೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಅಪೂರ್ಣ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸ್ಥಳೀಯರ ಸಂಚಾ ರಕ್ಕೆ ಅನುಕೂಲ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತ್ವರಿತ ಕಾಮಗಾರಿಗೆ ಸೂಚನೆ
ಸ್ಥಳೀಯರು ಸಂಚಾರಕ್ಕೆ ಸಂಕಷ್ಟ ಪಡುತ್ತಿರುವ ಬಗ್ಗೆ ತಿಳಿದು ಈಗಾಗಲೇ ಗುತ್ತಿಗೆದಾರರ ಗಮನಕ್ಕೆ ತರಲಾಗಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗುವುದು.
-ಸುಂದರ್‌, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ,ಕಾರ್ಕಳ

ಇಲಾಖೆಗೆ ಮುತ್ತಿಗೆ
ತ್ವರಿತವಾಗಿ ಕಾಮಗಾರಿ ನಡೆಸದಿದ್ದಲ್ಲಿ ಸ್ಥಳೀಯರು ಲೋಕೋಪಯೋಗಿ ಇಲಾಖೆಗೆ ಮುತ್ತಿಗೆ ಹಾಕಿ ತೀವ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು.
-ಗೋವಿಂದರಾಜ್‌ ಭಟ್‌, ಸ್ಥಳೀಯರು

ದೂರು ನೀಡಲಾಗಿದೆ
ಕಾಮಗಾರಿ ಪ್ರಾರಂಭಿಸಿ ಸ್ಥಗಿತಗೊಳಿಸಿರುವುದರಿಂದ ಸ್ಥಳೀಯರಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವ, ಲೋಕೋಪಯೋಗಿ ಸಚಿವ, ಶಾಸಕರಿಗೆ ದೂರು ನೀಡಲಾಗಿದೆ.
-ಅರುಣ್‌ ಕುಮಾರ್‌ ಹೆಗ್ಡೆ,
ಅಧ್ಯಕ್ಷರು,ಕಡ್ತಲ ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.