ಕರ್ನಾಟಕದ ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಹಂಸರಾಜ್ ಭಾರಧ್ವಜ್ ನಿಧನ
Team Udayavani, Mar 8, 2020, 9:15 PM IST
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಕಾನೂನು ಸಚಿವ ಹಂಸರಾಜ್ ಭಾರಧ್ವಜ್ ಅವರು ಇಂದು ನಿಧನ ಹೊಂದಿದ್ದಾರೆ. ಭಾರಧ್ವಜ್ ಅವರು 2009 ರಿಂದ 2014ರವರೆಗೆ ಕರ್ನಾಟಕದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಭಾರಧ್ವಜ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಕರ್ನಾಟಕ ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಹಂಸರಾಜ್ ಭಾರಧ್ವಜ್ ಅವರು ಹೆಚ್ಚುವರಿಯಾಗಿ ಕೇರಳ ರಾಜ್ಯದ ರಾಜ್ಯಪಾಲ ಜವಾಬ್ದಾರಿಯನ್ನೂ ಸಹ ನಿರ್ವಹಿಸುತ್ತಿದ್ದರು.
1937ರಲ್ಲಿ ಅಂದಿನ ಬ್ರಿಟಿಷ್ ಆಡಳಿತದಲ್ಲಿ ಪಂಜಾಬ್ ನ ಭಾಗವಾಗಿದ್ದ ಮತ್ತು ಇದೀಗ ಹರ್ಯಾಣ ರಾಜ್ಯದಲ್ಲಿರುವ ರೋಹ್ಟಕ್ ನ ಗಹ್ರಿ ಸಂಪ್ಲಾದಲ್ಲಿ ಜನಿಸಿದ್ದರು. ಭಾರಧ್ವಜ್ ಅವರು 1982ರಲ್ಲಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು. 1984ರಿಂದ 1989ರವರೆಗೆ ಅವರು ಕಾನೂನು ಮತ್ತು ನ್ಯಾಯಿಕ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1988ರಲ್ಲಿ ಭಾರಧ್ವಜ್ ಅವರು ರಾಜ್ಯಸಭೆಗೆ ಪುನರಾಯ್ಕೆಗೊಂಡಿದ್ದರು.
2004 ರಿಂದ 2009ರವರೆಗೆ ಮನಮೋಹನ್ ಸಿಂಗ್ ಸಚಿವ ಸಂಪುಟದಲ್ಲಿ ಕಾನೂನು ಮತ್ತು ನ್ಯಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಅವರು ಗ್ರಾಮ ನ್ಯಾಯಾಲಯ ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದ್ದರು.
Hans Raj Bhardwaj, former Governor of Karnataka and former Union Law Minister, passed away today. pic.twitter.com/SW3srPxetO
— ANI (@ANI) March 8, 2020
ನಾನು ಕಾನೂನು ಸಚಿವನಾಗಿ ಕಾರ್ಯ ನಿರ್ವಹಿಸಿದಾಗ ರಾಜ್ಯಪಾಲರಾಗಿದ್ದ ಶ್ರೀ ಭಾರದ್ವಾಜ್ ರವರನ್ನು ಸಾಕಷ್ಟು ಬಾರಿ ಭೇಟಿ ಮಾಡುವ ಅವಕಾಶಗಳು ಸಿಕ್ಕಿದ್ದವು.
ಅವರು ಬಹಳ ಓದಿಕೊಂಡಿದ್ದರು.ಕೇಂದ್ರದಲ್ಲಿ ಕಾನೂನು ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದರು.
ನಮ್ಮ ಸರ್ಕಾರದ ಜೊತೆ ಎಂದೂ ಸಹಮಧುರ ಸಂಬಂಧವಿರಲಿಲ್ಲ.
ಅವರ ಆತ್ಮಕ್ಕೆ ಸದ್ಗತಿ ದೊರಕಲಿ— S.Suresh Kumar, Minister – Govt of Karnataka (@nimmasuresh) March 8, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.