ಅಲಹಾಬಾದ್: ಗಲಭೆಕೋರರ ವಿವರ ಪ್ರಕಟಕ್ಕೆ ಹೈಕೋರ್ಟ್ ಅಸಮಾಧಾನ
Team Udayavani, Mar 8, 2020, 10:07 PM IST
ಅಲಹಾಬಾದ್: ಪೌರತ್ವ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿದ ಆರೋಪಿಗಳ ಹೆಸರು, ವಿಳಾಸ ಹಾಗೂ ಫೋಟೋಗಳನ್ನು ಬೃಹತ್ ಬ್ಯಾನರ್‌ನಲ್ಲಿ ಪ್ರಕಟಿಸಿರುವ ಉತ್ತರಪ್ರದೇಶ ಸರ್ಕಾರದ ಕ್ರಮಕ್ಕೆ ಅಲಹಾಬಾದ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಇದು ಸರಿಯಾದ ಕ್ರಮವಲ್ಲ ಹಾಗೂ ಇದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಹರಣ ಎಂಬುದು ಸ್ಪಷ್ಟ ಎಂದು ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥೂರ್ ಮತ್ತು ನ್ಯಾ.ರಮೇಶ್ ಸಿನ್ಹಾ ಅವರನ್ನೊಳಗೊಂಡ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು. ನಂತರ ಕೋರ್ಟ್ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡುವಂಥ ಪ್ರಕರಣಗಳು ಮುಂದೆ ನಡೆಯಬಾರದು ಎಂಬ ಕಾರಣಕ್ಕೆ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಇಂಥ ವಿಚಾರದಲ್ಲಿ ಕೋರ್ಟ್ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದರು. ಕೊನೆಗೆ ನ್ಯಾಯಾಲಯವು, ಈ ಕುರಿತು ಸೋಮವಾರ ಮಧ್ಯಾಹ್ನ ಆದೇಶ ಪ್ರಕಟಿಸುವುದಾಗಿ ಹೇಳಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.