ಅಪಾಯಕಾರಿ ಎಲ್‌ಟಿಡಿ ಬಾಕ್ಸ್‌ಗೆ ಮುಕ್ತಿ; ಮೆಸ್ಕಾಂ ಎದುರಿನ ಡಿವೈಡರ್‌ನಲ್ಲಿ ಹೊಸ ಪೆಟ್ಟಿಗೆ


Team Udayavani, Mar 9, 2020, 5:31 AM IST

ಅಪಾಯಕಾರಿ ಎಲ್‌ಟಿಡಿ ಬಾಕ್ಸ್‌ಗೆ ಮುಕ್ತಿ; ಮೆಸ್ಕಾಂ ಎದುರಿನ ಡಿವೈಡರ್‌ನಲ್ಲಿ ಹೊಸ ಪೆಟ್ಟಿಗೆ

ಮಹಾನಗರ: ಅನೇಕ ತಿಂಗಳುಗಳಿಂದ ಡೇಂಜರ್‌ ಝೋನ್‌ ಎನಿಸಿಕೊಂಡಿದ್ದ ನಗರದ ಮೆಸ್ಕಾಂ ಎದುರುಗಡೆ ಇರುವಂತಹ ಬಾಯ್ದೆರೆದ ವಿದ್ಯುತ್‌ ಸರಬರಾಜು (ಎಲ್‌ಟಿಡಿ) ಪೆಟ್ಟಿಗೆಯನ್ನು ಇದೀಗ ಸಂಬಂಧಪಟ್ಟ ಇಲಾಖೆ ಸರಿಪಡಿಸಿ, ಅಲ್ಲೇ ಹೊಸ ಪೆಟ್ಟಿಗೆ ಅಳವಡಿಸಿದೆ.

ಮೆಸ್ಕಾಂ ಎದುರುಗಡೆ ಇರುವಂತಹ ಡಿವೈಡರ್‌ನಲ್ಲಿ ಬಾಯ್ದೆರೆದುಕೊಂಡ ಸ್ಥಿತಿಯಲ್ಲಿ ಎಲ್‌ಟಿಡಿ ಬಾಕ್ಸ್‌ ಇತ್ತು. ನಡೆದಾಡುವವರಿಗೆ, ವಾಹನ ಸವಾರರಿಗೆ ಇದು ಅಪಾಯ ಸೂಚಿಸುತ್ತಿತ್ತು. ಇದೀಗ ಸರಿಪಡಿಸಲಾಗಿದ್ದು, ಹೊಸ ಪೆಟ್ಟಿಗೆ ಅಳವಡಿಸಲಾಗಿದೆ. ಅದೇ ರೀತಿ ಇದೇ ರಸ್ತೆಯ ಕಾಪಿಕಾಡ್‌ ಬಳಿ ಡಿವೈಡರ್‌ನಲ್ಲಿ ಇದ್ದಂತಹ ಎರಡು ಅಪಾಯಕಾರಿ ವಿದ್ಯುತ್‌ ಸರಬರಾಜು ಪೆಟ್ಟಿಗೆಯನ್ನು ಕೂಡ ಬದಲಾವಣೆ ಮಾಡಲಾಗಿದೆ.
ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುತ್‌ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ನಿರ್ವಹಣೆ ಆಗದಿರುವ ಕಾರಣ ಸಾರ್ವಜನಿಕರಿಗೆ ಎದುರಾಗಿರುವ ಅಪಾಯದ ಕುರಿತಂತೆ “ಸುದಿನ’ವು “ವಿದ್ಯುತ್‌-ಆಪತ್ತು ಇರಲಿ ಎಚ್ಚರ’ ಎಂಬ ಶೀರ್ಷಿಕೆಯಡಿಯಲ್ಲಿ ಅಭಿಯಾನ ಕೈಗೊಂಡಿತ್ತು. ಅಭಿಯಾನದ ಪರಿಣಾಮವಾಗಿ ಮೆಸ್ಕಾಂ, ಮಹಾನಗರ ಪಾಲಿಕೆ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಸಭೆ ನಡೆಸಿ, ನಗರದಲ್ಲಿ ವಿದ್ಯುತ್‌ನಿಂದ ಶಾಕ್‌ ಹೊಡೆಯಬಹುದಾದ ಅಪಾಯಕಾರಿ ಸ್ಥಳಗಳಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ್ದರು.

ನಗರ ವ್ಯಾಪ್ತಿಯಲ್ಲಿ ಅಪಾಯ ಸೂಚಿಸುತ್ತಿರುವ ಪ್ಯಾನಲ್‌ ಬಾಕ್ಸ್‌ಗಳ ನಿರ್ವಹಣೆಯನ್ನು ಈಗಾಗಲೇ ನಿರ್ವಹಿಸಿದ್ದು, ಬಲ್ಮಠ, ಜ್ಯೋತಿ, ಪಿವಿಎಸ್‌, ಬಲ್ಲಾಳ್‌ಬಾಗ್‌ ಸಹಿತ ವಿವಿಧ ಕಡೆಗಳಲ್ಲಿ ರಸ್ತೆಗಳ ಡಿವೈಡರ್‌ಗಳಲ್ಲಿ ಅಳವಡಿಸಿದ್ದ ಬೀದಿ ದೀಪಗಳ ಪ್ಯಾನಲ್‌ ಬೋರ್ಡ್‌ಗಳನ್ನು ಬದಲಾವಣೆ ಮಾಡಲಾಗಿದೆ.

ನಗರದಲ್ಲಿರುವ ಟ್ರಾನ್ಸ್‌ಫಾಮರ್‌ಗಳಲ್ಲಿ ಬಾಯ್ದೆರೆದುಕೊಂಡಿರುವ ಎಲ್‌ಟಿಡಿ ಬಾಕ್ಸ್‌ಗಳನ್ನು ಮೆಸ್ಕಾಂ ಈಗಾಗಲೇ ಗುರುತಿಸಿದ್ದು, ಮಂಗಳೂರು ನಗರ ಮತ್ತು ಉಳ್ಳಾಲ ಪ್ರದೇಶಗಳಲ್ಲಿ ಒಟ್ಟಾರೆ 270 ಹೊಸ ಎಲ್‌ಟಿಡಿ ಬಾಕ್ಸ್‌ಗಳನ್ನು ಅಳವಡಿಸಿದೆ. ನಗರದ ಇನ್ನೂ ಎಲ್ಲೆಲ್ಲಿ ಕೆಟ್ಟು ಹೋಗಿರುವ ಬಾಕ್ಸ್‌ ಗಳಿವೆ ಸಹಿತ ವಿದ್ಯುತ್‌ ಶಾಕಿಂಗ್‌ ಸ್ಪಾಟ್‌ಗಳ ಬಗ್ಗೆ ಇಲಾಖೆ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.