ಕ್ಷೇತ್ರದ ಜನರದ್ದು ಪ್ರಬುದ್ಧ ರಾಜಕೀಯ


Team Udayavani, Mar 9, 2020, 5:50 PM IST

mandya-tdy-1

ಮಂಡ್ಯ: ಜಿಲ್ಲೆಯ ಜನರು ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳುವಲ್ಲಿ ಪ್ರಬುದ್ಧರಾಗಿದ್ದಾರೆ. ರಾಜಕಾರಣದಲ್ಲಿ ದೇಶವೇ ತಿರುಗಿನೋಡುವಷ್ಟರ ಮಟ್ಟಿಗೆ ಹಿಡಿತ ಸಾಧಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಗರದ ಸುಭಾಷ್‌ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಹಾಗೂ ಉಪ ಚುನಾವಣೆಗಳಲ್ಲಿ ರಾಜಕಾರಣದ ಹಿಡಿತ ಸಾಬೀತುಪಡಿಸಿದ್ದಾರೆ. ಇದು ಹಿಂದೆಯೂ ನಡೆದಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬಿಜೆಪಿ ಪ್ರಬುದ್ಧವಾಗಿ ಬೆಳೆಯುವಂತಹ ಕಾಲ ಪಕ್ವವಾಗಿದೆ. ಈ ಅವಕಾಶವನ್ನು ಮುಖಂಡರು, ಕಾರ್ಯಕರ್ತರು ಸದ್ಬಳಕೆ ಮಾಡಿಕೊಂಡು ಪಕ್ಷ ಸಂಘಟನೆ ಮಾಡಬೇಕು. ಅದಕ್ಕೆ ನಾನು ಸಹಕಾರ ನೀಡಲು ಸಿದ್ಧ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಕಮಲ ಅರಳುವುದಿಲ್ಲ ಎಂದು ವಿರೋಧಿಗಳು ಸಾರಿ ಹೇಳಿದ್ದರು. ಆದರೆ, ಬಿಜೆಪಿ ಗೆದ್ದು ತೋರಿಸಲಿಲ್ಲವೇ?. ಮತದಾರರು ಪ್ರಬುದ್ಧರಾಗಿದ್ದಾರೆ. ಸರಿಯಾದ ಆಯ್ಕೆ ಮಾಡುತ್ತಾರೆ ಎನ್ನುವುದಕ್ಕೆ ಚುನಾವಣಾ ಫಲಿತಾಂಶಗಳೇ ಸಾಕ್ಷಿ ಎಂದು ಹೇಳಿದರು.

ಎಸ್‌.ಎಂ.ಕೃಷ್ಣ ಗರಡಿಯಲ್ಲಿ ಬೆಳೆದವನು: ನನಗೂ ಮಂಡ್ಯಕ್ಕೂ ಅವಿನಾಭಾವ ಸಂಬಂಧವಿದೆ. ಎಸ್‌. ಎಂ.ಕೃಷ್ಣ ಅವರು ನನ್ನ ರಾಜಕೀಯ ಗುರು. ಅವರೊಬ್ಬ ಪ್ರಬುದ್ಧ ಮತ್ತು ಮೌಲ್ಯಯುತ ರಾಜಕಾರಣಿ. ಅಂತಹವರ ಗರಡಿಯಲ್ಲಿ ಬೆಳೆದವನು ನಾನು. ಇದರ ಜೊತೆಗೆ ಈ ಜಿಲ್ಲೆಯ ಅನ್ನದಾತ ಸರ್‌ ಎಂ ವಿಶ್ವೇಶ್ವರಯ್ಯನವರ ತವರೂರಿನವನು. ಇದೊಂದು ಹೆಮ್ಮೆ ನನಗಿದೆ. ಮಂಡ್ಯ ಜಿಲ್ಲೆ ಸಮೃದ್ಧಿಗೆ ನಾಲ್ವಡಿ ಕೃಷ್ಣ ರಾಜ ಒಡೆಯರ್‌ ಹಾಗೂ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರವಾಗಿದೆ. ಹೀಗಾಗಿ ಮಂಡ್ಯ ಎಂದರೆ ಬಲು ಪ್ರೀತಿ. ಈ ಜಿಲ್ಲೆಯ ಋಣದಲ್ಲಿ ನಾನೂ ಇದ್ದೇನೆ ಎಂದು ಹೇಳಿದರು. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ.

ಕಾಶ್ಮೀರದಲ್ಲಿ 370ನೇ ವಿಧಿ ತೆಗೆದುಹಾಕಿರುವುದು. ತ್ರಿವಳಿ ತಲಾಖ್‌ ರದ್ದು ಮಾಡಿರುವುದು ಸೇರಿದಂತೆ ಪ್ರಧಾನಿ ದಿಟ್ಟ ಕ್ರಮಗಳನ್ನು ಅಲ್ಪ ಸಂಖ್ಯಾತರೂ ಕೂಡ ಒಪ್ಪಿದ್ದಾರೆ. ಆದರೆ 70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಲಾಗದ ಕೆಲಸವನ್ನು ಪ್ರಧಾನಿ ಮೋದಿ 7 ವರ್ಷದಲ್ಲಿ ಮಾಡಿ ತೋರಿಸಿದ್ದಾರೆ. ಈಗ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಅಂಬೇಡ್ಕರ್‌ ನಿಧನರಾದಾಗ ಇದೇ ಕಾಂಗ್ರೆಸ್‌ನವರು ದೆಹಲಿಯಲ್ಲಿ ಅಂತ್ಯ ಸಂಸ್ಕಾರ ಮಾಡಲು ಒಂದು ಅಡಿ ಜಾಗ ಕೊಡಲಿಲ್ಲ. ಗಾಂಧೀಜಿ ಅವರ ಬಗ್ಗೆ ಕಾಂಗ್ರೆಸ್‌ಗೆ ಯಾವತ್ತೂ ಒಲವೇ ಇರಲಿಲ್ಲ. ಈಗ ಡಾ.ಅಂಬೇಡ್ಕರ್‌ ಮತ್ತು ಗಾಂಧೀಜಿ ಅವರನ್ನು ಮುಂದೆ ಇಟ್ಟು ಮತ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.

ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ನಡೆಸುವ ಅವಕಾಶ ಸಿಕ್ಕಿದೆ. ಜನಪರ ಕೆಲಸಗಳನ್ನು ಒಗ್ಗಟ್ಟಿನಿಂದ ಮಾಡೋಣ, ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಇದ್ದರೂ ನನ್ನ ಬಳಿ ಹೇಳಿಕೊಂಡು ಒಳ್ಳೆಯ ಕೆಲಸಗಳನ್ನು ಮಾಡಿಸಿಕೊಳ್ಳಿ. ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ನಾನು ಸದಾ ಸಿದ್ದ. ಸರ್ಕಾರ ಇರುವುದೇ ಜನರಿಗೆ ಒಳ್ಳೆಯದನ್ನು ಮಾಡಬೇಕು ಎನ್ನುವ ಆಶಯದೊಂದಿಗೆ ಆಡಳಿತ ನಡೆಸುತ್ತದೆ ಎಂದು ಹೇಳಿದರು.

ಸಚಿವರನ್ನು ಸ್ವಾಗತಿಸಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶ ಮಾತನಾಡುವ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ವಿಜಯಕುಮಾರ್‌ ಮಾಜಿ ಅಧ್ಯಕ್ಷ ನಾಗಣ್ಣಗೌಡ, ರಾಜ್ಯ ಬಿಜೆಪಿ ಪರಿಷತ್‌ ಸದಸ್ಯ ಡಾ.ಸಿದ್ದ ರಾಮಯ್ಯ, ಜಿಪಂ ಸದಸ್ಯ ಚಂದಗಾಲು ಶಿವಣ್ಣ , ಕೆ.ಎಸ್‌. ನಂಜುಂಡೇಗೌಡ, ಎಸ್‌.ಆರ್‌.ಅರವಿಂದ್‌ ಇತರರಿದ್ದರು.

ಟಾಪ್ ನ್ಯೂಸ್

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.