ಪಶುಭಾಗ್ಯ ಯೋಜನೆ ಆಟಕ್ಕುಂಟು ಲೆಕ್ಕಕ್ಕಿಲ್ಲ!


Team Udayavani, Mar 10, 2020, 3:00 AM IST

pashubhagya

ಚಿಕ್ಕಬಳ್ಳಾಪುರ: ಮಳೆ ಬೆಳೆ ಇಲ್ಲದೇ ತೀವ್ರ ಬರಗಾಲದಿಂದ ತತ್ತರಿಸಿ ಕಂಗಾಲಾಗಿರುವ ಬಯಲು ಸೀಮೆಯ ಬರ ಪೀಡಿತ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಪಾಲಿಗೆ ಹೈನೋದ್ಯಮ ಉಸಿರಾದರೂ ರಾಜ್ಯ ಸರ್ಕಾರ ಪಶುಭಾಗ್ಯ ಯೋಜನೆಯಡಿ ನೀಡಿರುವ ಗುರಿ ಮಾತ್ರ ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಾಗಿದೆ.

ಹೌದು, ಪಶುಭಾಗ್ಯ ಯೋಜನೆಯಡಿ 2019-20ನೇ ಸಾಲಿಗೆ ಜಿಲ್ಲೆಗೆ 220 ಜನರನ್ನು ಆಯ್ಕೆ ಗುರಿ ನೀಡಿದ್ದು, ಜಿಲ್ಲೆಯ ಆರು ತಾಲೂಕುಗಳಿಂದ ಯೋಜನೆಯಡಿ ಪಶುಭಾಗ್ಯಕ್ಕಾಗಿ 3,349 ಅರ್ಜಿ ಬಂದಿದ್ದು, ಬೇಡಿಕೆಗೆ ತಕ್ಕಂತೆ ಜಿಲ್ಲೆಗೆ ಭೌತಿಕ ಗುರಿ ನಿಗದಿಯಾಗದಿರುವುದು ಹೈನೋದ್ಯಮದಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವವರ ಆಸೆಗೆ ತಣ್ಣೀರು ಎರಚಿದಂತಾಗಿದೆ.

ಉಪಕಸುಬು: ಕೃಷಿ ಪ್ರಧಾನವಾದ ಜಿಲ್ಲೆಯಲ್ಲಿ ಸಮಗ್ರ ನೀರಾವರಿ ಸೌಕರ್ಯ ಇಲ್ಲದೇ ರೈತರು ಉಪ ಕಸಬುಗಳಲ್ಲಿ ತೊಡಗಿಸಿಕೊಂಡಿದ್ದು, ಆ ಪೈಕಿ ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳು ಹೈನೋದ್ಯಮದಲ್ಲಿ ದಶಕಗಳಿಂದಲೂ ಮುಂಚೂಣಿಯಲ್ಲಿವೆ.

ಪ್ರಯೋಜನವಿಲ್ಲ: ಪ್ರತಿ ತಾಲೂಕಿನಲ್ಲಿ 200 ರಿಂದ 250 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಜಿಲ್ಲೆಯಲ್ಲಿ ಒಟ್ಟು 1500 ಕ್ಕೂ ಹೆಚ್ಚು ಹಾಲು ಉತ್ಪಾದನೆ ಮಾಡುವ ಸಹಕಾರ ಸಂಘಗಳು ಇವೆ. ನಿತ್ಯ 7 ರಿಂದ 8 ಲಕ್ಷ ಲೀ. ಹಾಲು ಉತ್ಪಾದನೆ ಆಗುತ್ತಿದೆ. ಆದರೆ ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಹಾಲು ಉತ್ಪಾದನೆಯಲ್ಲಿ ತೊಡುಗುವ ರೈತರಿಗೆ ಆಸರೆಯಾಗಿ ಸರ್ಕಾರ ಪಶುಭಾಗ್ಯ ಯೋಜನೆ ರೂಪಿಸಿದೆ.

ಆದರೆ ಯೋಜನೆಯಡಿ ಜಿಲ್ಲೆಯ ಬೇಡಿಕೆಗೆ ತಕ್ಕಂತೆ ಭೌತಿಕ ಗುರಿ ನಿಗದಿಪಡಿಸದೇ ಬೆರಳಣಿಕೆಯಷ್ಟು ಗುರಿ ನೀಡುತ್ತಿರುವುದರಿಂದ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಪಶುಭಾಗ್ಯದಡಿ ಅರ್ಜಿಗಳು ಹಾಕುತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಗೆ ಭೌತಿಕ ಗುರಿ ಹೆಚ್ಚು ನೀಡದ ಪರಿಣಾಮ ಜಿಲ್ಲೆಯಲ್ಲಿ ಸರ್ಕಾರದ ಮಹತ್ವಕಾಂಕ್ಷಿ ಪಶುಭಾಗ್ಯ ಯೋಜನೆ ಜಿಲ್ಲೆಯ ಜನರ ಪಾಲಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಇದಕ್ಕೆ ತಾಜಾ ಉದಾಹರಣೆ 220 ಭೌತಿಕ ಗುರಿಗೆ ಸಲ್ಲಿಕೆಯಾಗಿರುವ ಬರೋಬ್ಬರಿ 3,349 ಅರ್ಜಿಗಳು ನಿರ್ದಶನ ಎನ್ನಬಹುದು.

ಆಯ್ಕೆ ಮಾಡಲು ಶಾಸಕರಿಗೆ ಪ್ರಾಣಸಂಕಟ: ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಒಂದೆರೆಡು ತಾಲೂಕು ಹೊರತುಪಡಿಸಿ 50ಕ್ಕಿಂತ ಕಡಿಮೆ ಗುರಿ ನೀಡಿರುವುದರಿಂದ ಫ‌ಲಾನುಭವಿಗಳ ಆಯ್ಕೆ ಮಾಡುವುದು ಆಯಾ ಕ್ಷೇತ್ರಗಳ ಶಾಸಕರಿಗೆ ಪ್ರಾಣ ಸಂಕಟವಾಗಿದೆ. ಗ್ರಾಮೀಣ ಭಾಗದ ರೈತಾಪಿ ಕೂಲಿ ಕಾರ್ಮಿಕರಿಂದ ಪಶುಭಾಗ್ಯ ಯೋಜನೆಯಡಿ ಸಾಕಷ್ಟು ಬೇಡಿಕೆ ಇದ್ದು ಸರ್ಕಾರ ಯೋಜನೆಯಡಿ ನಿಗದಿಪಡಿಸುವ ಗುರಿ ಅರ್ಹರನ್ನು ಗುರುತಿಸಲಾಗದೇ ಯೋಜನೆಗೆ ಪಟ್ಟಿಯಿಂದ ಯಾರನ್ನು ಕೈ ಬಿಡಲಾಗದೇ ಪ್ರಾಣ ಸಂಕಟ ಎದುರಿಸುವಂತಾಗಿದೆ. ತಾಲೂಕಿಗೆ ನೀಡಿರುವ 30, 40 ಗುರಿಗೆ ಕೆಲ ತಾಲೂಕುಗಳಲ್ಲಿ 300 ರಿಂದ 500, 600 ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿರುವುದು ಫ‌ಲಾನುಭವಿಗಳ ಆಯ್ಕೆ ಸಮಿತಿ ಅಧ್ಯಕ್ಷರಾಗಿರುವ ಶಾಸಕರಿಗೆ ತಲೆ ನೋವಾಗಿದೆ.

ಘಟಕಕ್ಕೆ 60 ಸಾವಿರ: ಈ ಹಿಂದೆ ಪಶುಭಾಗ್ಯ ಯೋಜನೆಯಡಿ ಎರಡು ಹಸು ಖರೀದಿಗೆ ಪ್ರತಿ ಫ‌ಲಾನುಭವಿಗೆ 1.20 ಲಕ್ಷ ರೂ. ನೀಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಘಟಕ ವೆಚ್ಚವನ್ನು 60 ಸಾವಿರಕ್ಕೆ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಶೇ.90 ರಷ್ಟು ಸಬ್ಸಿಡಿ ಸಿಗಲಿದೆ. ಹಿಂದುಳಿದ ವರ್ಗಕ್ಕೆ ಶೇ.50 ರಷ್ಟು ಸಬ್ಸಿಡಿ ಸಿಗಲಿದೆ.

ಸಾಮಾನ್ಯ ವರ್ಗಕ್ಕೂ ಪಶು ಭಾಗ್ಯ ಯೋಜನೆ ಕಲ್ಪಿಸಲಾಗಿದ್ದು, ಸಬ್ಸಿಡಿ ದರ ಕಡಿಮೆ ಇದೆ. ಜೊತೆಗೆ ಪಶುಭಾಗ್ಯ ಯೋಜನೆಯಡಿ ಹಸುಗಳ ಜೊತೆಗೆ ಕುರಿ, ಮೇಲೆ ಹಾಗೂ ಹಂದಿ ಖರೀದಿಗೂ ಅವಕಾಶ ನೀಡಲಾಗಿದೆ. ಆದರೆ ಭೌತಿಕ ಗುರಿ ಜಿಲ್ಲೆಗೆ ತೀರಾ ಕಡಿಮೆ ಇರುವುದರಿಂದ ಪಶು ಸಂಗೋಪನೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಆಸಕ್ತಿ ಇರುವ ರೈತರ ಕನಸಿಗೆ ಭಂಗವಾಗಿದೆ. ಜಿಲ್ಲೆಗೆ ಹೆಚ್ಚಿನ ಭೌತಿಕ ಗುರಿ ತರುವಲ್ಲಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ವಿಫ‌ಲರಾಗಿರುವುದು ಎದ್ದು ಕಾಣುತ್ತಿದೆ.

ಗುಡಿಬಂಡೆ, ಬಾಗೇಪಲ್ಲಿಯಲ್ಲಿ ಪಶುಭಾಗ್ಯ ಆಯ್ಕೆ ಪಟ್ಟಿಗೆ ಗ್ರಹಣ: ಜಿಲ್ಲೆಯಲ್ಲಿ ಪಶುಭಾಗ್ಯ ಯೋಜನೆಯಡಿ ಜಿಲ್ಲೆಯ ಚಿಂತಾಮಣಿ, ಗೌರಿಬಿದನೂರು, ಚಿಕ್ಕಬಳ್ಳಾಪುರ ಹಾಗೂ ಶಿಡ್ಲಘಟ್ಟ ತಾಲೂಕುಗಳಲ್ಲಿ ಪಶುಭಾಗ್ಯ ಯೋಜನೆಯಡಿ ಆಯಾ ಕ್ಷೇತ್ರಗಳ ಶಾಸಕರು ಫ‌ಲಾನುಭವಿಗಳ ಪಟ್ಟಿಯನ್ನು ಆಯ್ಕೆ ಮಾಡಿ ಪಶು ಸಂಗೋಪಾನ ಇಲಾಖೆಗೆ ಸಲ್ಲಿಸಿದ್ದು, ಫ‌ಲಾನುಭವಿಗಳಿಗೆ ಹಣಕಾಸಿನ ಲಭ್ಯತೆ ನೋಡಿಕೊಂಡು ಹಸುಗಳ ಖರೀದಿ ಪ್ರಗತಿಯಲ್ಲಿದೆ.

ಆದರೆ ಗುಡಿಬಂಡೆ ಹಾಗೂ ಬಾಗೇಪಲ್ಲಿ ತಾಲೂಕಿಗೆ ನೀಡಿರುವ ಭೌತಿಕ ಗುರಿ ಅತ್ಯಂತ ಕಡಿಮೆ ಎಂದು ಹೇಳಿ ಕ್ಷೇತ್ರದ ಶಾಸಕ ಸುಬ್ಟಾರೆಡ್ಡಿ, ಫ‌ಲಾನುಭವಿಗಳ ಆಯ್ಕೆ ಪಟ್ಟಿಯನ್ನು ಮಾಡದಿರುವುದು ಕಂಡು ಬಂದಿದೆ. ಗುಡಿಬಂಡೆಗೆ 9, ಬಾಗೇಪಲ್ಲಿಗೆ ಕೇವಲ 35 ಗುರಿ ನಿಗದಿಪಡಿಸಿದ್ದು, ಈ ಎರಡು ತಾಲೂಕುಗಳಲ್ಲಿ 500 ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.

ಆದರೆ ಯಾರನ್ನು ಆಯ್ಕೆ ಮಾಡಬೇಕೆಂಬ ಗೊಂದಲದಿಂದ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕ್ಷೇತ್ರಕ್ಕೆ ಮಂಜೂರಾಗಿರುವ ಗುರಿಯನ್ನು ಕೈ ಬಿಟ್ಟಿದ್ದಾರೆ. ಹೀಗಾಗಿ ಎರಡು ತಾಲೂಕುಗಳಲ್ಲಿ ಪಶು ಭಾಗ್ಯ ಯೋಜನೆ ಆಯ್ಕೆ ಪಟ್ಟಿಗೆ ಗ್ರಹಣ ಹಿಡಿದಿದ್ದು, ಭೌತಿಕ ಗುರಿ ಹೆಚ್ಚಿಸುವಂತೆ ಸªಳೀಯ ಶಾಸಕರು ಪಶು ಸಂಗೋಪನಾ ಇಲಾಖೆ ಆಯುಕ್ತರಿಗೆ ಪತ್ರ ಬರೆದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಜಿಲ್ಲೆಯಲ್ಲಿ ಕುಸಿಯುತ್ತಿದೆ ಹಾಲು ಉತ್ಪಾದನೆ: ಬರಡು ಜಿಲ್ಲೆಯಾದರೂ ಕ್ಷೀರಕ್ರಾಂತಿಗೆ ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹಾಲಿನ ಉತ್ಪಾದನೆ ಕುಸಿಯುತ್ತಿದೆ. ಒಂದೆಡೆ ಬರದಿಂದ ಹೈನೋದ್ಯಮ ತತ್ತರಿಸಿದರೆ, ಮತ್ತೂಂದೆಡೆ ಪಶು ಸಂಗೋಪಾನೆಯಲ್ಲಿ ತೊಡಗುತ್ತಿರುವ ರೈತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹಾಲಿನ ಉತ್ಪಾದನೆ ಕಡಿಮೆಯಾಗುತ್ತಿದೆ.

ಯಾವುದೇ ಶಾಶ್ವತ ನೀರಾವರಿ ಇಲ್ಲದ ಜಿಲ್ಲೆಯ ರೈತರಿಗೆ ಸ್ವಾವಲಂಬಿ ಜೀವನಕ್ಕೆ ಹೈನೋದ್ಯಮ ಸಹಕಾರಿಯಾದರೂ ಪಶು ಸಂಗೋಪನೆಗೆ ಸರ್ಕಾರದ ಪ್ರೋತ್ಸಾಹ ಅಷ್ಟಕಷ್ಟೇ ಎನ್ನುವುದಕ್ಕೆ ಪಶು ಸಂಗೋಪನೆಯಡಿ ಜಿಲ್ಲೆಗೆ ನಿಗದಿಪಡಿಸಿರುವ ಭೌತಿಕ ಗುರಿ ಸಾಕ್ಷಿ ಎನ್ನಬಹುದು.

ತಾಲೂಕು ಪಶುಭಾಗ್ಯ ಗುರಿ ಅರ್ಜಿ ಸಲ್ಲಿಕೆ
ಗೌರಿಬಿದನೂರು 52 650
ಚಿಕ್ಕಬಳ್ಳಾಪುರ 40 1380
ಗುಡಿಬಂಡೆ 9 137
ಬಾಗೇಪಲ್ಲಿ 35 382
ಶಿಡ್ಲಘಟ್ಟ 33 150
ಚಿಂತಾಮಣಿ 51 650

ಸರ್ಕಾರ ಹಿಂದುಳಿದ ತಾಲೂಕುಗಳಾದ ಗುಡಿಬಂಡೆ ಹಾಗೂ ಬಾಗೇಪಲ್ಲಿಗೆ ಪಶು ಭಾಗ್ಯ ಯೋಜನೆಯಡಿ ಕಡಿಮೆ ಗುರಿ ನೀಡಿದ್ದು, ನೂರಾರು ಮಂದಿ ಅರ್ಜಿ ಹಾಕಿದ್ದಾರೆ. ಬೆರಣಿಕೆಯಷ್ಟು ಗುರಿ ಕೊಟ್ಟರೆ ನಾವು ಯಾರಿಗೆ ಹಸು ಕೊಡಲು ಸಾಧ್ಯ? ಸರ್ಕಾರಕ್ಕೂ ಈ ಬಗ್ಗೆ ಪತ್ರ ಬರೆದು ಅಧಿವೇಶನದಲ್ಲಿಯು ಪ್ರಶ್ನೆ ಮಾಡಿದೆ. ಆದರೆ ಸರ್ಕಾರ ಅನುದಾನದ ಲಭ್ಯತೆ ನೋಡಿಕೊಂಡು ಕ್ರಮ ವಹಿಸುವ ಭರವಸೆ ನೀಡಿದೆ.
-ಎಸ್‌.ಎನ್‌.ಸುಬ್ಬಾರೆಡ್ಡಿ, ಶಾಸಕರು, ಬಾಗೇಪಲ್ಲಿ ಕ್ಷೇತ್ರ

ಜಿಲ್ಲೆಯಲ್ಲಿ ಪಶುಭಾಗ್ಯ ಯೋಜನೆಯಡಿ ಗುರಿಗಿಂತ ಹೆಚ್ಚಾಗಿ ಬೇಡಿಕೆ ಇದ್ದು, 2019-20ನೇ ಸಾಲಿಗೆ ಒಟ್ಟು 220 ಗುರಿಗೆ ಒಟ್ಟು 3,349 ಅರ್ಜಿಗಳು ಬಂದಿವೆ. ಬಾಗೇಪಲ್ಲಿ, ಗುಡಿಬಂಡೆ ತಾಲೂಕುಗಳಲ್ಲಿ ಫ‌ಲಾನುಭವಿಗಳ ಆಯ್ಕೆ ಇನ್ನೂ ಆಗಿಲ್ಲ. ಉಳಿದಂತೆ ಎಲ್ಲಾ ತಾಲೂಕುಗಳಲ್ಲಿ ಆಯ್ಕೆ ಪ್ರಕ್ರಿಯೆ ಹಾಗೂ ಸೌಲಭ್ಯ ವಿತರಣೆ ಪ್ರಗತಿಯಲ್ಲಿದೆ ಇದೆ.
-ಡಾ.ಮಧುರನಾಥರೆಡ್ಡಿ, ಸಹಾಯಕ ನಿರ್ದೇಶಕರು, ಪಶು ಸಂಗೋಪನಾ ಇಲಾಖೆ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.