ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸಚಿವರ ಭೇಟಿ: ಸಿಎಂ
Team Udayavani, Mar 10, 2020, 3:05 AM IST
ವಿಧಾನ ಪರಿಷತ್: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಂಬಂಧಪಟ್ಟ ಸಚಿವರೊಂದಿಗೆ ಹಾಗೂ ಅಧಿಕಾರಿಗಳ ಜತೆ ಖುದ್ದು ಮಾತುಕತೆ ನಡೆಸಲಿದ್ದೇನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.
ಸದನದಲ್ಲಿ ಉತ್ತರ ನೀಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ, ಕುಮಾರಸ್ವಾಮಿ ನೇತೃತ್ವದಲ್ಲಿ ಒಂದೂವರೆ ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗೆ ಅನುದಾನ ಮೀಸಲಿರಿಸಿರಲಿಲ್ಲ.
ಆದರೆ, ಇದೀಗ ಅನುದಾನ ನೀಡುವಂತೆ ಸಲಹೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಯೋಜನೆ ಅಭಿವೃದ್ಧಿಗೆ ಸಲಹೆಗಳನ್ನು ನೀಡಲಾಗುತ್ತಿದೆ. ಹೀಗಾದಲ್ಲಿ ಯೋಜನೆ ಜಾರಿ ಮಾಡುವುದಾದರೂ ಹೇಗೆ ಎಂಬ ಯಕ್ಷ ಪ್ರಶ್ನೆ ನನ್ನನ್ನು ಕಾಡುತ್ತಿದೆ. ನಮ್ಮ ಆರ್ಥಿಕ ಪರಿಸ್ಥಿತಿಯ ಇತಿಮಿತಿಯೊಳಗೆ ಕಾರ್ಯಾನುಷ್ಠಾನ ಮಾಡಲಿದ್ದೇವೆ ಎಂದರು.
ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಕಾಮಗಾರಿಗೆ ಪ್ರಸಕ್ತ ಬಜೆಟ್ನಲ್ಲಿ ಹಣ ಮೀಸಲಿಟ್ಟಿರಲಿಲ್ಲ. ಆದರೂ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ 10 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ. ಅಲ್ಲದೆ, ಹಂತ ಹಂತವಾಗಿ ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.