ಗೋಡ್ಸೆ ದೇಶದ್ರೋಹಿ ಎಂದು ಹೇಳಿ ನೋಡೋಣ
Team Udayavani, Mar 10, 2020, 3:05 AM IST
ವಿಧಾನಸಭೆ: “ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದೀರಿ. ಅದಕ್ಕೆ ನಾನು ಬೇಸರಪಟ್ಟುಕೊಳ್ಳುವುದಿಲ್ಲ. ಮಹಾತ್ಮ ಗಾಂಧೀಜಿ ಅವರನ್ನು ಕೊಂದ ನಾಥೂರಾಮ್ ಗೋಡ್ಸೆ ದೇಶದ್ರೋಹಿ ಎಂದು ನಿಮಗೆ ತಾಕತ್ತಿದ್ದರೆ ಹೇಳಿಬಿಡಿ ಸಾಕು. ನಾನು ನಿಮ್ಮನ್ನು ಒಪ್ಪಿಕೊಳ್ಳುತ್ತೇನೆ’ ಎಂದು ಕಾಂಗ್ರೆಸ್‌ನ ಯು.ಟಿ.ಖಾದರ್ ಬಿಜೆಪಿಯ ಶಾಸಕ ಹರೀಶ್ ಪೂಂಜಾಗೆ ಸವಾಲು ಹಾಕಿದರು.
ಸಂವಿಧಾನದ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಯು.ಟಿ.ಖಾದರ್ ಮಾತನಾಡುವಾಗ ಮಧ್ಯಪ್ರವೇಶಿಸಿದ ಹರೀಶ್ ಪೂಂಜಾ, ನೀವು ಬೆಂಕಿ ಹಚ್ಚುವ ಹೇಳಿಕೆ ಕೊಟ್ಟವರು ಎಂದು ದೂರಿದರು. ಅದಕ್ಕೆ ಖಾದರ್, ನೀವು ಏನೇನೋ ಮಾತನಾಡಬೇಡ, ನಿಮ್ಮ ಸಂಸದರೇ ಆ ಮಾತು ಹೇಳಿದ್ದು, ನಾನಲ್ಲ. ನನ್ನನ್ನು ದೇಶದ್ರೋಹಿ ಎಂದು ಹೇಳಿದ್ದೀರಿ, ನನಗೇನೂ ಬೇಸರವಿಲ್ಲ.
ಆದರೆ, ಗಾಂಧೀಜಿ ಕೊಂದ ನಾಥೂರಾಮ್ ಗೋಡ್ಸೆ ದೇಶದ್ರೋಹಿ ಎಂದು ಹೇಳು, ನಾನು ಒಪ್ಪುತ್ತೇನೆ ಎಂದರು. ಆಗ, ಬಿಜೆಪಿಯ ಅರಗ ಜ್ಞಾನೇಂದ್ರ ಸದಸ್ಯರನ್ನು ಏಕ ವಚನದಲ್ಲಿ ಮಾತನಾಡುವುದು ಸರಿಯಲ್ಲ ಎಂದರು. ಆಗ, ಖಾದರ್, ಅವನು ನನ್ನ ಸೋದರ ಇದ್ದಂತೆ. ಹೀಗಾಗಿ, ನಾನು ಏಕವಚನದಲ್ಲಿ ಮಾತನಾಡಿದರೆ ತಪ್ಪಿಲ್ಲ ಎಂದು ಹೇಳಿದರು.
ಮಾತು ಮುಂದುವರಿಸಿದ ಖಾದರ್, ಸಂವಿಧಾನದ ಆಶಯಗಳ ಪ್ರಕಾರ ನಾವು ಎಲ್ಲ ವರ್ಗದವರಿಗೆ ಸಮಾನತೆ, ಸಾಮಾಜಿಕ ನ್ಯಾಯ ಕೊಡಬೇಕಾಗಿದೆ. ಆದರೆ, ಅದನ್ನು ಕೊಟ್ಟಿದ್ದೀವಾ ಎಂದು ಪ್ರಶ್ನಿಸಿಕೊಳ್ಳಬೇಕಿದೆ. ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಸಿಎಎ, ಎನ್‌ಪಿಆರ್ ಚರ್ಚೆ ನಡೆಯುತ್ತಿದೆ. ಸಿಎಎಯಿಂದ ಏನೂ ಆಗುವುದಿಲ್ಲ, ಎನ್‌ಪಿಆರ್ ಸಮಸ್ಯೆಯೊಡ್ಡುತ್ತದೆ. ಆದರೆ, ಜನರಿಗೆ ಜಾಗೃತಿ ಮೂಡಿಸುವ ಕೆಲಸ ಆಗುತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.