ಮಹಿಳಾ ಅಂಚೆ ಕಚೇರಿ ಉದ್ಘಾಟನೆ
Team Udayavani, Mar 10, 2020, 12:09 PM IST
ಬೀದರ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭ ಸಂದರ್ಭದಲ್ಲಿ ಮಹಿಳೆಯರ ಸೌಕರ್ಯಕ್ಕಾಗಿ ಪ್ರಥಮ ಮಹಿಳಾ ಅಂಚೆ ಕಚೇರಿಯನ್ನು ಲೋಕಾರ್ಪಣೆ ಮಾಡಲಾಯಿತು.
ವೈದ್ಯಾಧಿಕಾರಿ ಡಾ| ಉಮಾ ದೇಶಮುಖ ಕಚೇರಿ ಉದ್ಘಾಟಿಸಿ ಮಾತನಾಡಿ, ಮಹಿಳಾ ಅಂಚೆ ಕಚೇರಿ ತೆರೆದು ಅಂಚೆ ಇಲಾಖೆ ಮಹಿಳೆಯರ ಪರ ತನ್ನ ಗೌರವವನ್ನು ವ್ಯಕ್ತಪಡಿಸಿದೆ. ಪರಿಪೂರ್ಣವಾಗಿ ಜನ್ಮ ತಳೆದ ಮಹಿಳೆ, ಏನನ್ನಾದರೂ ಸಾಧಿಸಬಲ್ಲಳು. ಅದೇ ಮಹಿಳೆಯರು ಜೊತೆಗೂಡಿದಲ್ಲಿ ಜಗತ್ತನ್ನೇ ಗೆಲ್ಲಬಲ್ಲರು ಎಂದರು.
ಡಾ| ವಿಜಯಕುಮಾರ ಅಂತಪ್ಪನವರ ಮಾತನಾಡಿ, ಅಂಚೆ ಇಲಾಖೆಯ ಈ ಪ್ರಗತಿಪರ ಸಂವೇದನೆಯನ್ನು ಶ್ಲಾಘಿಸಿದರು. ಅಂಚೆ ಅಧಿಧೀಕ್ಷಕ ವಿ.ಎಸ್.ಎಲ್. ನರಸಿಂಹರಾವ್ ಮಾತನಾಡಿ, ಜಿಲ್ಲೆಯ ಪ್ರಪ್ರಥಮ ಮಹಿಳಾ ಅಂಚೆ ಕಚೇರಿ ಇದಾಗಿದೆ. ಇಲ್ಲಿ ಕೇವಲ ಮಹಿಳಾ ಸಿಬ್ಬಂದಿಗಳೇ ಕೆಲಸ ನಿರ್ವಹಿಸುಹಿಸುತ್ತಾರೆ. ಮಹಿಳಾ ಗ್ರಾಹಕರು ಸಂಕೋಚವಿಲ್ಲದೇ ಇಲ್ಲಿ ತಮ್ಮ ವ್ಯವಹಾರಗಳನ್ನು ಮಾಡಿಕೊಳ್ಳಬಹುದು ಎಂದು ಹೇಳಿದರು.
ಅಂಚೆ ಇಲಾಖೆಯ ಎಲ್ಲ ಮಹಿಳಾ ಸಿಬ್ಬಂದಿಗಳ ಪ್ರತಿನಿಧಿಯಾಗಿ ಮಂಗಲಾ ಭಾಗವತ ಅವರನ್ನು ಸನ್ಮಾನಿಸಲಾಯಿತು. ಕಲ್ಲಪ್ಪ ಕೋಣಿ ಸ್ವಾಗತಿಸಿದರು. ಮಂಗಲಾ ಭಾಗವತ ವಂದಿಸಿದರು. ಉಪ ಅಂಚೆ ಅ ಧೀಕ್ಷಕರಾದ ರಾಜೀವಕುಮಾರ, ರವೀಂದ್ರ ಕುಮಾರ, ಗುಂಡಪ್ಪ ಕನಕ, ಮಿರ್ಜಾ ಬೇಗ್ ಸೇರಿದಂತೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.