ಮಧ್ಯಪ್ರದೇಶದಲ್ಲಿ ಮುಂದೇನಾಗಲಿದೆ? ಸಿಂಧಿಯಾ – ಚೌಹಾಣ್ ಇಬ್ಬರಲ್ಲಿ ಯಾರಾಗಲಿದ್ದಾರೆ ಸಿಎಂ?
Team Udayavani, Mar 10, 2020, 1:28 PM IST
ಭೋಪಾಲ್: ಮಾಜೀ ಕೇಂದ್ರ ಸಚಿವ ಮತ್ತು ಪ್ರಭಾವಿ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಧ್ಯಪ್ರದೇಶ ರಾಜ್ಯ ರಾಜಕಾರಣದಲ್ಲಿ ಎಬ್ಬಿಸಿರುವ ಬಿರುಗಾಳಿ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಪತನದ ಅಂಚಿಗೆ ತಂದು ನಿಲ್ಲಿಸಿದೆ.
ಸತತ ಮೂರು ಬಾರಿ ಆಡಳಿತ ನಡೆಸಿದ್ದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಭಾರತೀಯ ಜನತಾ ಪಕ್ಷದ ಸರಕಾರ ನಾಲ್ಕನೇ ಬಾರಿಗೆ ಅಧಿಕಾರಕ್ಕೇರುವಲ್ಲಿ ಬಹುಮತ ಕೊರತೆ ಎದುರಾಗಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಗಳಿಸಲು ಸಾಧ್ಯವಾಗಿದ್ದು 100 ಸ್ಥಾನಗಳನ್ನು ಮಾತ್ರ.
ಇನ್ನೊಂದೆಡೆ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಅಗತ್ಯವಾಗಿದ್ದ 115 ಸ್ಥಾನಗಳು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಗೂ ಲಭಿಸಿರಲಿಲ್ಲ. ಆದರೆ 4 ಪಕ್ಷೇತರ ಶಾಸಕರು ಹಾಗೂ ಬಿ.ಎಸ್.ಪಿ.ಯ 3 ಮತ್ತು ಸಮಾಜವಾದಿ ಪಕ್ಷದ ಓರ್ವ ಶಾಸಕರ ಬೆಂಬಲದೊಂದಿಗೆ ಒಟ್ಟು 114 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಒಟ್ಟಾರೆ 122 ಶಾಸಕರ ಬೆಂಬಲವನ್ನು ಹೊಂದಿ ಮಧ್ಯಪ್ರದೇಶದಲ್ಲಿ ಅದಿಕಾರದ ಗದ್ದುಗೆಯನ್ನೇರಿತ್ತು.
ಇದೀಗ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಮಲನಾಥ್ ಸಚಿವ ಸಂಪುಟದಲ್ಲಿನ ಕೆಲ ಸಚಿವರೂ ಸೇರಿದಂತೆ ಒಟ್ಟು 20 ಮಂದಿ ಕಾಂಗ್ರೆಸ್ ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠೆಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕಮಲನಾಥ್ ಸರಕಾರ ಅಲ್ಪಮತಕ್ಕೆ ಕುಸಿಯುವ ಭೀತಿ ವ್ಯಕ್ತವಾಗಿದೆ.
ಸಿಂಧಿಯಾ ಅವರು ಈಗಾಗಲೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ. ಇನ್ನು ಇವರ ಜೊತೆ ಎಷ್ಟು ಜನ ಕಾಂಗ್ರೆಸ್ ಶಾಸಕರು ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದಾರೆ ಎನ್ನುವುದು ಇನ್ನೂ ಗೊತ್ತಾಗಿಲ್ಲ. ಒಂದುವೇಳೆ ಕನಿಷ್ಟ 16-20 ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದರೂ ಕಮಲನಾಥ್ ಸರಕಾರ ಪತನಗೊಳ್ಳಲಿದೆ ಮತ್ತು ಸದನದ ಸಂಖ್ಯಾಬಲ 230 ಇದ್ದಿದ್ದು 210ಕ್ಕೆ ಇಳಿಯಲಿದೆ.
ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 114 ಸ್ಥಾನಗಳನ್ನು ಹೊಂದಿತ್ತು, ಪ್ರಮುಖ ಪ್ರತಿಪಕ್ಷ ಬಿಜೆಪಿ 107 ಸ್ಥಾನಗಳನ್ನು, ಬಹುಜನ ಸಮಾಜವಾದಿ ಪಕ್ಷ 2 ಸ್ಥಾನಗಳನ್ನು, ಸಮಾಜವಾದಿ ಪಕ್ಷ 1 ಸ್ಥಾನ ಮತ್ತು ಪಕ್ಷೇತರ ಶಾಸಕರು 4 ಸ್ಥಾನಗಳನ್ನು ಹೊಂದಿದ್ದರು. 2 ಸ್ಥಾನಗಳು ತೆರವಾಗಿವೆ. ಇದೀಗ ಸಿಂಧಿಯಾ ಅವರೊಂದಿಗೆ 19 ಕಾಂಗ್ರೆಸ್ ಶಾಸಕರ ರಾಜೀನಾಮೆಯೊಂದಿಗೆ ಕಾಂಗ್ರೆಸ್ ಬಲ 95ಕ್ಕೆ ಕುಸಿದಿದ್ದರೆ ಒಟ್ಟಾರೆ ಸದನದ ಸದಸ್ಯ ಬಲ 209ಕ್ಕೆ ಕುಸಿದಂತಾಗಿದೆ (230-19-2 = 209).
ಆವಾಗ ಸದ್ಯದ ಪರಿಸ್ಥಿತಿಯಲ್ಲಿ ಸರಕಾರ ರಚಿಸಲು ಅಗತ್ಯವಿರುವ ಸರಳ ಬಹುಮತ ಭಾರತೀಯ ಜನತಾ ಪಕ್ಷಕ್ಕೆ ಲಭಿಸಲಿದೆ, ಬಿಜೆಪಿ ಈಗಾಗಲೇ 107 ಶಾಸಕರನ್ನು ಹೊಂದಿದೆ. ಇನ್ನು ಒಂದುವೇಳೆ 4 ಜನ ಪಕ್ಷೇತರ ಶಾಸಕರ ಬೆಂಬಲವನ್ನು ಸಂಪಾದಿಸಿದರೆ ಬಿಜೆಪಿಯ ಬಲ 111ಕ್ಕೆ ಏರಲಿದೆ ಮತ್ತು ಈ ಶಾಸಕ ಬಲದ ಮೂಲಕ ಬಿಜೆಪಿ ಸದ್ಯದ ಪರಿಸ್ಥಿತಿಯಲ್ಲಿ ಮಧ್ಯಪ್ರದೇಶದಲ್ಲಿ ಮರಳಿ ಅಧಿಕಾರಕ್ಕೇರಲು ಸಾಧ್ಯವಾಗಲಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಬಿಜೆಪಿ ಅನುಸರಿಸಿದ ತಂತ್ರವನ್ನೇ ಮಧ್ಯಪ್ರದೇಶದಲ್ಲೂ ಅನುಸರಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಇದೀಗ ರಾಜೀನಾಮೆ ನೀಡಲಿರುವ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದಲ್ಲಿ ಬಳಿಕ ಉಪಚುನಾವಣೆಗಳ ಮೂಲಕ ಅವರು ಗೆಲ್ಲುವಂತೆ ಮಾಡಿ ಮುಂಬರುವ ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರವನ್ನು ಗಟ್ಟಿ ಮಾಡುವುದು ಬಿಜೆಪಿಯ ಸದ್ಯದ ಯೋಜನೆಯಾಗಿದೆ.
ಇನ್ನು ಒಂದುವೇಳೆ ಕಮಲನಾಥ್ ಸರಕಾರ ಪತನಗೊಂಡಲ್ಲಿ ಇಲ್ಲಿ ಸರಕಾರ ರಚನೆಗೆ ಬಿಜೆಪಿ ಹಕ್ಕು ಮಂಡಿಸಬಹುದು ಆ ಸಂದರ್ಭದಲ್ಲಿ ಅದು ಮಾಜೀ ಮುಖ್ಯಮಂತ್ರಿ ಹಾಗೂ ರಾಜ್ಯದ ಜನಪ್ರಿಯ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಅವರನ್ನೇ ಮುಖ್ಯಮಂತ್ರಿ ಪದಕ್ಕೆ ಆರಿಸುವ ಸಾಧ್ಯತೆಗಳೇ ಹೆಚ್ಚಾಗಿವೆ, ಇನ್ನು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ರಾಜ್ಯ ಸಭೆಗೆ ಆಯ್ಕೆ ಮಾಡಿ ಅವರಿಗೆ ಕೇಂದ್ರದಲ್ಲಿ ಪ್ರಮುಖ ಸ್ಥಾನವನ್ನು ಕೊಡುವ ಸಾಧ್ಯತೆಗಳು ಸದ್ಯದ ಪರಿಸ್ಥಿತಿಯಲ್ಲಿ ದಟ್ಟವಾಗಿ ಗೋಚರಿಸುತ್ತಿವೆ.
ಇನ್ನೊಂದು ಸಾಧ್ಯತೆಗಳಲ್ಲಿ ಒಂದುವೇಳೆ ಕಮಲನಾಥ್ ಸರಕಾರ ಅಲ್ಪಮತಕ್ಕೆ ಕುಸಿದು ಪತನಗೊಂಡಲ್ಲಿ ಮಧ್ಯಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಕೇಂದ್ರ ಸರಕಾರ ನಿರ್ಧರಿಸಬಹುದು.
ಒಟ್ಟಿನಲ್ಲಿ ಮಧ್ಯಪ್ರದೇಶದಲ್ಲಿ ಸದ್ಯಕ್ಕೆ ಉದ್ಭವಿಸಿರುವ ರಾಜಕೀಯ ವಿಪ್ಲವಕ್ಕೆ ಇನ್ನು ಕೆಲ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.