ಶುದ್ಧ ನೀರು ಸಿಗಲು ಇನ್ನೆಷ್ಟು ವರ್ಷ ಕಾಯಬೇಕು?


Team Udayavani, Mar 11, 2020, 3:00 AM IST

shudda-neeru

ನಂಜನಗೂಡು: ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತವಾಗಿ ವರ್ಷವಾದರೂ ಕ್ರಮ ಕೈಗೊಂಡಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಈ ಘಟಕವು ದುರಸ್ತಿ ಆಗುವ ಲಕ್ಷಣಗಳೂ ಕಂಡು ಬರುತ್ತಿಲ್ಲ. ಒಂದು ವರ್ಷದಿಂದ ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿರುವ ಗ್ರಾಮಸ್ಥರು, ಇನ್ನೆಷ್ಟು ವರ್ಷ ಕಾಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ತಾಲೂಕಿನ ವರುಣಾ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಹೆಜ್ಜಿಗೆ ಗ್ರಾಮದಲ್ಲಿ ಶುದ್ಧ ನೀರಿನ ಘಟಕದ ದುಸ್ಥಿತಿ ಆಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಅಧಿಕಾರದ ಅವಧಿಯಲ್ಲಿ ಈ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕಕ್ಕೆ 10 ಲಕ್ಷ ರೂ. ಮಂಜೂರು ಮಾಡಿದ್ದರು. ಘಟಕದ ಕಾಮಗಾರಿ ವಹಿಸಿಕೊಂಡಿದ್ದ ಕೆಆರ್‌ಡಿಸಿಎಲ್‌ ಸಂಸ್ಥೆ 2018ರ ಡಿಸೆಂಬರ್‌ನಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಈ ಘಟಕವನ್ನು ಲೋಕಾರ್ಪಣೆ ಮಾಡಿತ್ತು. ಇನ್ನೇನು ನಮ್ಮ ಮನೆಗಳಿಗೆ ಶುದ್ಧ ನೀರು ಬಂತು ಎಂದು ನಿಟ್ಟುಸಿರು ಬಿಟ್ಟಿದ್ದ ಗ್ರಾಮದ ಜನತೆಗೆ ಎರಡೇ ತಿಂಗಳಲ್ಲಿ ಅವರ ನಿರೀಕ್ಷೆ ಹುಸಿಯಾಗಿದೆ.

2 ತಿಂಗಳು ಮಾತ್ರ ನೀರು: 2018ರ ಡಿಸೆಂಬರ್‌ನಲ್ಲಿ ಘಟಕವನ್ನು ಲೋಕಾರ್ಪಣೆ ಮಾಡಲಾಗಿತ್ತು. 2019ರ ಫೆಬ್ರವರಿಯಲ್ಲಿ ಈ ಶುದ್ಧ ನೀರಿನ ಘಟಕ ಸ್ಥಗಿತಗೊಂಡಿದೆ. ಕೇವಲ ಎರಡು ತಿಂಗಳು ಮಾತ್ರ ಕಾರ್ಯನಿರ್ವಹಿಸಿದೆ. ದುರಸ್ತಿಪಡಿಸಲು ಯಾವ ಕ್ರಮವನ್ನೂ ಕೈಗೊಂಡಿಲ್ಲ. ಘಟಕ ಸ್ಥಗಿತವಾಗಿ ಒಂದು ವರ್ಷ ಕಳೆದರೂ ಯಾವ ಪ್ರಕ್ರಿಯೆಗಳೂ ಶುರುವಾಗಿಲ್ಲ.

ಇಂತಹ ದುಸ್ಥಿತಿಯನ್ನು ನೋಡಲು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿಬೇಕಿತ್ತೇ?, ಈ ರೀತಿ ಬೇಕಾಬಿಟ್ಟಿ ಕಾರ್ಯನಿರ್ವಹಣೆಗೆ 10 ಲಕ್ಷ ರೂ. ವ್ಯಯಿಸಬೇಕಿತ್ತಾ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಸ್ಥಗಿತವಾಗಿರುವ ಈ ಘಟಕವನ್ನು ದುರಸ್ತಿ ಮಾಡಬೇಕಿದ್ದ ಕೆಆರ್‌ಡಿಸಿಎಲ್‌ ತನ್ನ ಕರ್ತವ್ಯ, ಜವಾಬ್ದಾರಿ ಮರೆತು ಮೌನವಹಿಸಿದೆ. ಯಾರೊಬ್ಬರೂ ಕೂಡ ಘಟಕ ದುರಸ್ತಿಗೆ ಕ್ರಮ ಕೈಗೊಂಡಿಲ್ಲ.

ಶುದ್ಧ ನೀರಿನ ಘಟಕವನ್ನು 2019ರ ಡಿಸೆಂಬರ್‌ನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ಹಸ್ತಾಂತರಿಸಿದ ಕೆಆರ್‌ಡಿಸಿಎಲ್‌, ಇದಕ್ಕೂ ತಮಗೂ ಸಂಬಂಧ ಇಲ್ಲ ಎಂದು ಕೈತೊಳೆದುಕೊಂಡಿದೆ. ಈ ಘಟಕವನ್ನು ಯಾರು ದುರಸ್ತಿಪಡಿಸಬೇಕು, ಯಾರು ಇದರ ನಿರ್ವಹಣೆ ಹೊರ ಬೇಕು ಎಂಬುದು ತಿಳಿಯದಂತಾಗಿದೆ. ಇಂದು ಇಲ್ಲವೇ ನಾಳೆ ಘಟಕ ದುರಸ್ತಿ ಆಗುತ್ತದೆ,

ಶುದ್ಧ ನೀರು ಸಿಗುತ್ತದೆ ಎಂದು ಗ್ರಾಮಸ್ಥರು ಚಾತಕಪಕ್ಷಿಗಳಂತೆ ಒಂದು ವರ್ಷ ಕಾದರೂ ಯಾವುದೇ ಪ್ರಕ್ರಿಯೆ ಶುರು ಆಗಿಲ್ಲ. ಈ ಅವ್ಯವಸ್ಥೆಯಿಂದ ಜನರು ರೋಸಿ ಹೋಗಿದ್ದು, ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಕ್ರಮ ಕೈಗೊಂಡು ಘಟಕ ದುರಸ್ತಿಪಡಿಸಿ, ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಘಟಕಕ್ಕೆ ಕಾಂಪೌಂಡ್‌ ನಿರ್ಮಾಣ: ಹೆಜ್ಜಿಗೆ ಗ್ರಾಮದಲ್ಲಿ ಕೆಟ್ಟಿರುವ ಶುದ್ಧ ನೀರಿನ ಘಟಕ ಶೀಘ್ರ ದುರಸ್ತಿ ಆಗುವ ಆಶಾ ಭಾವನೆ ಇಟ್ಟುಕೊಂಡಿದ್ದೇವೆ. ಹೀಗಾಗಿ ಘಟಕಕ್ಕೆ ಒಂದು ಲಕ್ಷ ರೂ.ವೆಚ್ಚದಲ್ಲಿ ಕಾಂಪೌಂಡ್‌ ನಿರ್ಮಿಸಲಾಗುವುದು. ಲೋಕಾರ್ಪಣೆಗೊಂಡು 2 ತಿಂಗಳಲ್ಲೇ ಕೆಟ್ಟು ಹೋದ ಈ ಶುದ್ಧ ನೀರಿನ ಘಟಕದ ದುರಸ್ತಿಗೆ ಹಣವನ್ನು ಕೆಆರ್‌ಡಿಸಿಎಲ್‌ ಭರಿಸಬೇಕಿದೆ ಎಂದು ತಾಲೂಕು ಪಂಚಾಯ್ತಿ ಉಪಾಧ್ಯಕ್ಷ‌ ಗೋವಿಂದರಾಜು ತಿಳಿಸಿದ್ದಾರೆ.

ಘಟಕ ದುರಸ್ತಿಗೆ 4 ಲಕ್ಷ ರೂ.ಬೇಕು: ಹೆಜ್ಜಿಗೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು, ಈ ಘಟಕದ ದುರಸ್ತಿ ಕಾರ್ಯ ಪ್ರಾರಂಭಿಸಿದರೆ ಸುಮಾರು ನಾಲ್ಕು ಲಕ್ಷ ರೂ. ಬೇಕಾಗುತ್ತದೆ. ಸರ್ಕಾರದಿಂದ ಅನುದಾನ ಮಂಜೂರಾದ ಬಳಿಕ ದುರಸ್ತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ತಾಲೂಕು ಅಧಿಕಾರಿ ಚರಿತಾ ತಿಳಿಸಿದ್ದಾರೆ.

ಶಾಸಕರೇ, ಈ ಘಟಕ ದುರಸ್ತಿ ಯಾವಾಗ?: ಹೆಜ್ಜಿಗೆ ಗ್ರಾಮದಲ್ಲಿ ಶುದ್ಧ ಕುಡಿಯವ ನೀರಿನ ಘಟಕ ಸ್ಥಗಿತಗೊಂಡು ಬರೋಬ್ಬರಿ ಒಂದು ವರ್ಷ ಕಳೆದಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಈ ಘಟಕವು ಕಾರ್ಯನಿರ್ವಹಿಸಿರುವುದು ಕೇವಲ ಎರಡು ತಿಂಗಳು ಮಾತ್ರ. ಲೋಕಾರ್ಪಣೆಗೊಂಡು ಎರಡು ತಿಂಗಳ ಅವಧಿಯಲ್ಲಿ ಕೆಟ್ಟು ಹೋಗಿದೆ.

ಗ್ರಾಮದ ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡಬೇಕಾಗಿದೆ. ಈ ಹೆಜ್ಜಿಗೆ ಗ್ರಾಮವು ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಒಳಪಡಲಿದೆ. ಡಾ| ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಶಾಸಕರಾಗಿದ್ದು, ಗ್ರಾಮದಲ್ಲಿ ಅವ್ಯವಸ್ಥೆಯಿಂದ ಕೂಡಿರುವ ಶುದ್ಧ ನೀರಿನ ಘಟಕವನ್ನು ತ್ವರಿತವಾಗಿ ದುರಸ್ತಿಪಡಿಸಲು ಕ್ರಮ ಕೈಗೊಂಡು, ಶುದ್ಧ ನೀರು ಕಲ್ಪಿಸಬೇಕು ಎಂದು ಹೆಜ್ಜಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇಂತಹ ಅವ್ಯವಸ್ಥೆಗೆ ಘಟಕ ನಿರ್ಮಿಸಬೇಕಿತ್ತಾ?: ಹೆಜ್ಜಿಗೆ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ್ದ ಶುದ್ಧ ನೀರಿನ ಘಟಕ ಕೇವಲ ಎರಡು ತಿಂಗಳು ಮಾತ್ರ ಕಾರ್ಯನಿರ್ವಹಿಸಿದೆ. ಘಟಕ ಪ್ರಾರಂಭಿಸುವಾಗ ಗ್ರಾಮಕ್ಕೆ ಶುದ್ಧ ನೀರು ಸಿಗುತ್ತದೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದರೆ, ಈ ನಿರೀಕ್ಷೆ ಹುಸಿಯಾಗಿದೆ. ಘಟಕ ಕೆಟ್ಟು ವರ್ಷ ಕಳೆದರೂ ದುರಸ್ತಿಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಇಂದು ಇಲ್ಲವೇ ನಾಳೆ ಘಟಕ ದುರಸ್ತಿ ಆಗುತ್ತದೆ, ಶುದ್ಧ ನೀರು ಸಿಗುತ್ತದೆ ಎಂದು ಒಂದು ವರ್ಷ ಕಳೆದಿದ್ದೇವೆ. ಇಂತಹ ಅವ್ಯವಸ್ಥೆಗೆ ಘಟಕವನ್ನಾದರೂ ಏಕೆ ನಿರ್ಮಿಸಬೇಕಿತ್ತು?, ಹೆಸರಿಗಷ್ಟೇ ಗ್ರಾಮದಲ್ಲಿ ಘಟಕ ಇದೆ. ಅದರೆ, ಶುದ್ಧ ಕುಡಿಯುವ ನೀರು ಮಾತ್ರ ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

* ಶ್ರೀಧರ್‌ ಆರ್‌.ಭಟ್‌

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.