ಹಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರ
Team Udayavani, Mar 11, 2020, 3:00 AM IST
ಹಾಸನ: ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಪರೀಕ್ಷೆಯ ಪ್ರಯೋಗಾಲಯ ತೆರೆಯಲಾಗಿದೆ. ಕೊರೊನಾ ಶಂಕಿತರು, ಸೋಂಕಿತರಿಗೆ ಚಿಕಿತ್ಸೆ ನೀಡಲು ವಿಶೇಷ ವಾರ್ಡ್‌ನ ವ್ಯವಸ್ಥೆಯನ್ನೂ ಮಾಡಲಾಗಿದೆ. ಯಾರಾದರೂ ದೇಶದಿಂದ ವಾಪಸ್ ಬಂದಿರುವ ಬಗ್ಗೆ ಮಾಹಿತಿ ಇದ್ದರೆ ಹೆಲ್ಪ್ ಲೈನ್ ಸಂ. 08172-246575 ಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಫ್ರಾ°ಸ್‌ನಿಂದ ವಾಪಸಾಗಿ ದಾಖಲಾಗಿದ್ದ ನಗರ ನಿವಾಸಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ ಯಾವ ರೋಗದ ಲಕ್ಷಣಗಳು ಇಲ್ಲ ಎಂಬುದು ದೃಢಪಟ್ಟಿದೆ ಎಂದು ಸ್ಪಷ್ಟಪಡಿಸಿದರು. ವಿದೇಶಿಗರು, ವಿದೇಶಗಳಿಂದ ವಾಪಸ್ ಬಂದಿರುವವರ ಬಗ್ಗೆ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಹಿಮ್ಸ್ ಆಸ್ಪತ್ರೆ ಹಾಗೂ ಆರೋಗ್ಯ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಅದಕ್ಕಾಗಿಯೇ ದಿನದ 24 ಗಂಟೆಯ ಸೇವೆಯಲ್ಲಿರುವ ಹೆಲ್ಪ್ ಲೈನ್ ಸಂಖ್ಯೆ 08172 – 246575 ಸಿದ್ಧವಾಗಿದೆ ಎಂದರು.
ವಿದೇಶಿ ಪ್ರವಾಸಿಗಳ ಮಾಹಿತಿ ನೀಡಿ: ಹಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಪತ್ತೆ ಪ್ರಯೋಗಾಲಯ ತೆರೆಯಲಾಗಿದೆ. ಹೋಟೆಲ್, ರೆಸಾರ್ಟ್ ಹೋಂ ಸ್ಟೇಗಳಿಗೆ ಆಗಮಿಸುವ ವಿದೇಶಿ ಪ್ರವಾಸಿಗರ ಬಗ್ಗೆ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಕ್ಷಿಪ್ರಕಾರ್ಯಾಚರಣೆ ತಂಡವನ್ನು ರಚಿಸಲಾಗಿದೆ. ತಾಲೂಕು ಮಟ್ಟದಲ್ಲಿ ಆಯಾ ತಾಲೂಕು ಆರೋಗಗಳ ಹಾಗೂ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಜವಾಬ್ದಾರಿಯುತ ಅಧಿಕಾರಿಗಳಾಗಿರುತ್ತಾರೆ ಎಂದು ಸೂಚಿಸಿದರು.
10ಸಾವಿರ ಮಾಸ್ಕ್ ದಾಸ್ತಾನು: ಜಿಲ್ಲಾದ್ಯಂತ ಆರೋಗ್ಯ ಸಂಸ್ಥೆಗಳಿಗೆ ಬೇಡಿಕೆಯ ಅನುಗುವಾಗಿ ಮಾಸ್ಕ್ಗಳನ್ನು ವಿತರಿಸಲಾಗಿದೆ. ಪ್ರಸ್ತುತ 10 ಸಾವಿರ ಮಾಸ್ಕ್ಗಳ ದಾಸ್ತಾನು ಇರಿಸಲಾಗಿದೆ. ಹೆಚ್ಚುವರಿ ಬೇಡಿಕೆ ಬಂದಲ್ಲಿ ಅಗತ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದ್ದು, ಕರಪತ್ರ, ಭಿತ್ತಿಪತ್ರ ಸೇರಿದಂತೆ ವಿವಿಧ ಆರೋಗ್ಯ ಶಿಕ್ಷಣದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಕೊರೋನಾದಿಂದ ಸುರಕ್ಷತೆ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಆರ್.ಕೃಷ್ಣಮೂರ್ತಿ, ಡಾ.ಹಿರಣ್ಣಯ್ಯ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.