ಕುಟ್ರಾಪ್ಪಾಡಿ: ಸರಕಾರಿ ಕೆರೆಗಳ ಅಭಿವೃದ್ಧಿಗೆ ತಯಾರಿ
ಹಳೆಸ್ಟೇಶನ್‌ನ ಪೊಟ್ಟುಕೆರೆ, ಹೊಸಕೆರೆ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧ
Team Udayavani, Mar 11, 2020, 5:43 AM IST
ಕಡಬ: ಅಂತರ್ಜಲ ಮಟ್ಟ ಕುಸಿತದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ನೀರಿಗಾಗಿ ತತ್ವಾರ ಎದುರಾಗಿರುವುದು ಆತಂಕಕಾರಿ ವಿಚಾರ. ಇಂತಹ ಸಂದರ್ಭದಲ್ಲಿ ಜಲ ಸಂರಕ್ಷಣೆಯ ಉದ್ದೇಶದಿಂದ ಗ್ರಾಮದಲ್ಲಿನ ಕೆರೆಗಳ ಹೂಳೆತ್ತಿ ಅವುಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಡಬ ತಾಲೂಕಿನ ಕುಟ್ರಾಪಾಡಿ ಗ್ರಾ.ಪಂ.ಆಡಳಿತವು ಅನುಕರಣೀಯ ಕ್ರಮಗಳನ್ನು ಕೈಗೊಂಡಿದೆ.
ಗ್ರಾ.ಪಂ. ವ್ಯಾಪ್ತಿಯ ಕಡಬ- ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯ ಪಕ್ಕ ದಲ್ಲಿರುವ ಹಳೆಸ್ಟೇಶನ್‌ನ ಸುಮಾರು 5 ಎಕರೆ ವಿಸ್ತೀರ್ಣದ ಪೊಟ್ಟುಕೆರೆ ಹಾಗೂ ಅದರ ಹತ್ತಿರದಲ್ಲಿರುವ ಸುಮಾರು 7 ಎಕರೆ ವಿಸ್ತೀರ್ಣದ ಹೊಸಕೆರೆಯನ್ನು ಹೂಳೆತ್ತಲು ತೀರ್ಮಾನಿಸಲಾಗಿದ್ದು, ಗ್ರಾ.ಪಂ. ವ್ಯಾಪ್ತಿಯ ಪ್ರಮುಖರನ್ನು ಒಳಗೊಂಡ ಕೆರೆ ಅಭಿವೃದ್ಧಿ ಸಮಿತಿ ರಚಿಸಿ ಕೆರೆಗಳ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗಿದೆ. ಕೆರೆಗಳ ಹೂಳೆತ್ತಿದ ಬಳಿಕ ಗ್ರಾ.ಪಂ.ನ ಆದಾಯ ಹೆಚ್ಚಿಸುವ ಸಲುವಾಗಿ ಆ ಕೆರೆಗಳಲ್ಲಿ ಮೀನು ಸಾಕಣೆ ಮಾಡುವ ಉದ್ದೇಶವೂ ಇದೆ.
ಕೆರೆಯ ಸುತ್ತ ಒತ್ತುವರಿ ತೆರವುಗೊಳಿಸಿ ಬೇಲಿ ನಿರ್ಮಿಸಿ ಭದ್ರಪಡಿಸುವುದರೊಂದಿಗೆ ಪಾರ್ಕ್ ನಿರ್ಮಾಣ ಮಾಡಲು ಸಮಗ್ರ ಅಭಿವೃದ್ಧಿಗಾಗಿ ತಲಾ ಅಂದಾಜು 1 ಕೋಟಿ ರೂ. ವೆಚ್ಚದ ಯೋಜನಾ ವರದಿ ತಯಾರಿಸಿ, ಅನುದಾನಕ್ಕಾಗಿ ಸರಕಾರಕ್ಕೆ ಬರೆದುಕೊಳ್ಳುವ ಸಿದ್ಧತೆ ನಡೆದಿದೆ.
ಕೆರೆ ಕಬಳಿಕೆ ಸಂಚು ವಿಫಲ
ಹಳೆಸ್ಟೇಶನ್‌ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ನಡೆದಿದ್ದ ಹುನ್ನಾರವನ್ನು ಗ್ರಾ.ಪಂ.ನ ನಿರಂತರ ಪ್ರಯತ್ನದಿಂದಾಗಿ ವಿಫಲಗೊಳಿಸಲಾಗಿದೆ. ಎರಡು ವರ್ಷಗಳ ಹಿಂದೆ ಕುಟ್ರಾಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆಸ್ಟೇಶನ್‌ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಈ ಹಿಂದೆ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಸರಕಾರಿ ಜಾಗ ಎಂದು ದಾಖಲಿಸಿ, ಕೆರೆಯನ್ನು ಖಾಸಗಿ ಉದ್ದೇಶಕ್ಕೆ ಬಳಸುವ ಸಂಚು ಬೆಳಕಿಗೆ ಬಂದಿತ್ತು. ಹಳೆಯ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ನಮೂದಾಗಿರುವುದನ್ನು ಅಕ್ರಮವಾಗಿ ತಿದ್ದಿ ಸರಕಾರಿ ಜಮೀನು ಎಂದು ತಿದ್ದುಪಡಿ ಮಾಡಲಾಗಿತ್ತು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದ ಗ್ರಾ.ಪಂ. ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಅಧಿಕಾರಿಯ ಸತತ ಎರಡು ವರ್ಷಗಳ ಪ್ರಯತ್ನದ ಬಳಿಕ ಪಹಣಿ ಪತ್ರ ಸರಿಪಡಿಸಿಕೊಳ್ಳುವಲ್ಲಿ ಸಫಲರಾಗಿದ್ದರು.
ಕಾರ್ಯ ಯೋಜನೆ ರೂಪಿಸಿದ್ದೇವೆ
ಗ್ರಾಮದ ವ್ಯಾಪ್ತಿಯ ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸಿ ಅಂತರ್ಜಲಮಟ್ಟ ಏರಿಕೆಯಾಗಲು ಪ್ರಯತ್ನಿಸಬೇಕೆನ್ನುವ ಸೂಚನೆ ಸರಕಾರದಿಂದ ಇದೆ. ಹೈಕೋರ್ಟ್ ಕೂಡ ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಆದೇಶಿಸಿದೆ. ನೀರಿನ ಬರ ಹೋಗಲಾಡಿಸಲು ಕೆರೆಗಳ ಪುನರುಜ್ಜೀವನ ಅತ್ಯಗತ್ಯ. ನಮ್ಮ ಗ್ರಾಮದ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಸಂರಕ್ಷಣೆ ಮಾಡಬೇಕೆನ್ನುವ ಉದ್ದೇಶದಿಂದ ಕಾರ್ಯಯೋಜನೆ ರೂಪಿಸಿ ದ್ದೇವೆ. ಸರಕಾರ, ಸಂಘ ಸಂಸ್ಥೆಗಳು ಹಾಗೂ ಸಮುದಾಯದ ಸಹಕಾರ ಯಾಚಿಸುತ್ತಿದ್ದೇವೆ.
-ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ಕುಟ್ರಾಪ್ಪಾಡಿ ಪಿಡಿಒ
ಕೆರೆ ಉಳಿಸುವ ಪ್ರಯತ್ನ
ಕೆರೆಗಳೆಂದರೆ ಪ್ರಕೃತಿಯ ಹಸುರು ಸಿರಿಗೆ ಬಲುದೊಡ್ಡ ಕೊಡುಗೆಗಳು. ನಮ್ಮ ಜೀವ ವೈವಿಧ್ಯ ಮತ್ತು ಕೃಷಿ ಸಂಸ್ಕೃತಿಯ ಭಾಗಗಳಾಗಿದ್ದ ಸಾಕಷ್ಟು ಕೆರೆಗಳು ಇಂದು ಕಾಲಗರ್ಭದಲ್ಲಿ ಕಣ್ಮರೆಯಾಗಿವೆ. ಇರುವ ಕೆರೆಗಳನ್ನಾದರೂ ಉಳಿಸಿಕೊಳ್ಳಬೇಕೆಂಬ ಪ್ರಯತ್ನ ನಮ್ಮದು. ಎಲ್ಲರ ಸಕಾರಾತ್ಮಕ ಸ್ಪಂದನೆ ಲಭಿಸಿದರೆ ಇದೇನು ಕಷ್ಟದ ಕೆಲಸವಲ್ಲ.
-ವಿದ್ಯಾ ಕಿರಣ್ ಗೋಗಟೆ , ಅಧ್ಯಕ್ಷೆ, ಕುಟ್ರಾಪ್ಪಾಡಿ ಗ್ರಾ.ಪಂ.
ನಾಗರಾಜ್ ಎನ್.ಕೆ. ಕಡಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.