15ರಿಂದ ಆರೆಸ್ಸೆಸ್‌ನ ಉನ್ನತ ಮಟ್ಟದ ಸಭೆ
Team Udayavani, Mar 11, 2020, 3:03 AM IST
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ-ನಿರ್ಧಾರಗಳನ್ನು ರೂಪಿಸುವ ಮಹತ್ವದ ವಾರ್ಷಿಕ ಅಧಿವೇಶನವಾದ ಅಖೀಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಮಾರ್ಚ್ 15, 16, 17ರಂದು ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಈವರೆಗೆ ಆರು ಎಬಿಪಿಎಸ್ ಜರುಗಿದ್ದು, ಈ ಸಭೆ ಏಳನೇಯದ್ದಾಗಿದೆ.
ಆರೆಸ್ಸೆಸ್‌ನ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಮತ್ತು ಸರಕಾರ್ಯವಾಹರಾದ ಸುರೇಶ್ (ಭಯ್ನಾಜೀ) ಜೋಷಿಯವರು ಸಭೆಯ ಕಲಾಪಗಳನ್ನು ನಡೆಸುತ್ತಾರೆ. ಅಧಿವೇಶನದಲ್ಲಿ ಆರೆಸ್ಸೆಸ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ 35ಕ್ಕೂ ಹೆಚ್ಚು ಸಂಘಟನೆಗಳ 1,400 ಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದು ಆರೆಸ್ಸೆಸ್ ಪ್ರಕಟಣೆ ತಿಳಿಸಿದೆ. ಆರೆಸ್ಸೆಸ್ ಹಾಗೂ ವಿವಿಧ ಸಂಘಟನೆಗಳ ವಾರ್ಷಿಕ ವರದಿ, ಸಂಘಟನೆಯ ವಿಸ್ತಾರ, ಹೊಸ ಆಯಾಮಗಳು, ಕಾರ್ಯಕ್ರಮಗಳು, ಮುಂಬರುವ ವರ್ಷದ ಯೋಜನೆ ಇತ್ಯಾದಿ ವಿಷಯಗಳು ಈ ಸಭೆಯಲ್ಲಿ ಚರ್ಚೆಯಾಗಲಿವೆ.
ಜತೆಗೆ, ಈ ಸಭೆಯಲ್ಲಿ ರಾಷ್ಟ್ರೀಯ ಮಹತ್ವವುಳ್ಳ ಕೆಲವು ವಿಷಯಗಳ ಕುರಿತಾಗಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಸಹಿತವಾಗಿ ಬಿಜೆಪಿಯ ರಾಷ್ಟ್ರೀಯ ಪ್ರಮುಖರಲ್ಲಿ ಕೆಲವರು, ವಿಶ್ವ ಹಿಂದೂಪರಿಷತ್, ವನವಾಸಿ ಕಲ್ಯಾಣ, ಸೇವಾ ಭಾರತಿ, ವಿದ್ಯಾಭಾರತಿ ಹೀಗೆ ಆರೆಸ್ಸೆಸ್‌ನ ಪರಿವಾರ ಸಂಘಟನೆಗಳ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಪ್ರಮುಖರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.