ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳ ಪತ್ತೆ: ಅಸಮಾಧಾನ
Team Udayavani, Mar 11, 2020, 3:05 AM IST
ವಿಧಾನಸಭೆ: ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳ ಬಳಕೆಯಾಗಿರುವ ಬಗ್ಗೆ ಅಥವಾ ಬಳಕೆ ಯಾಗದಿರುವ ಬಗ್ಗೆ ಕೇಂದ್ರ ಕಚೇರಿಗೆ ದೃಢೀಕರಣ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಶಿಫಾರಸು ಮಾಡಿದೆ. ಸದನದಲ್ಲಿ ಮಂಗಳವಾರ ಸಮಿತಿಯ ಅಧ್ಯಕ್ಷ ಎಚ್.ಕೆ.ಪಾಟೀಲ್ ಅವರು, 2019-20ನೇ ಸಾಲಿನ ವರದಿ ಮಂಡಿಸಿದರು.
ಸಮಿತಿಯ ಶಿಫಾರಸುಗಳು: ನಿಷೇಧಿತ ವಸ್ತುಗಳಾದ ಮೊಬೈಲ್ ಫೋನ್, ಸಿಮ್ ಕಾರ್ಡ್, ಮಾದಕ ವಸ್ತುಗಳು ಕಾರಾಗೃಹದಲ್ಲಿ ಅಪಾರ ಪ್ರಮಾಣದಲ್ಲಿ ಪತ್ತೆಯಾಗಿರುವುದಕ್ಕೆ ಸಮಿತಿ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ. ನಿಷೇಧಿತ ವಸ್ತುಗಳು ಕಾರಾಗೃಹಗಳನ್ನು ಪ್ರವೇಶಿಸದಂತೆ ತಡೆಯಲು ನಿಗದಿಪಡಿಸಿರುವ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಿದೆ.
ಕಾರಾಗೃಹ ಪ್ರವೇಶಿಸುವ ವ್ಯಕ್ತಿಗಳ ದೈಹಿಕ ತಪಾಸಣೆ ಹಾಗೂ ವಾಹನಗಳ ತಪಾಸಣೆಗೆ ಸಂಬಂಧಿಸಿದಂತೆ ಹಾಲಿ ಇರುವ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ವಿವರವಾದ ಮಾರ್ಗ ದರ್ಶಿ ಸೂತ್ರ ಜಾರಿಗೊಳಿಸುವಂತೆ ಸಮಿತಿ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ -9, ಮೈಸೂರಿನಲ್ಲಿ-4, ಕಲಬುರಗಿಯಲ್ಲಿ -10 ಮೊಬೈಲ್ ಜಾಮರ್‌ಗಳು ಕಾರ್ಯ ನಿರ್ವಹಿಸದಿರುವುದು ಸಮಿತಿಯ ತಪಾಸಣೆ ವೇಳೆ ಪತ್ತೆಯಾಗಿದೆ. ಮೊಬೈಲ್ ಜಾಮರ್ ಉಪಕರಣಗಳ ವಾರ್ಷಿಕ ನಿರ್ವಹಣೆಯ ತಾಂತ್ರಿಕ ನೈಪುಣ್ಯತೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಕಾರಾಗೃಹಗಳಿಂದ ಪರಾರಿಯಾಗಿದ್ದ 31 ಬಂಧಿಗಳನ್ನು ಮರು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.