ಜೈ ಜವಾನ್‌, ಜೈ ಅನ್ವೇಷಕ

Team Udayavani, Mar 11, 2020, 3:09 AM IST

jai-jawan

ಬೆಂಗಳೂರು: ಭವಿಷ್ಯದಲ್ಲಿ ಭಾರತ ವಿಶ್ವ ಮಟ್ಟದಲ್ಲಿಯೇ ಮಾದರಿ ದೇಶವಾಗಲಿದ್ದು, ಇದರಲ್ಲಿ ಉದ್ಯಮಿಗಳ ಪಾತ್ರ ಮಹತ್ವದ್ದಾಗಿದೆ. ಮುಂದಿನ ದಿನಗಳಲ್ಲಿ ಜೈ ಜವಾನ್‌, ಜೈ ಕಿಸಾನ್‌ ಜತೆ “ಜೈ ಅನ್ವೇಷಕ’ವೂ ಸೇರಬೇಕು ಎಂದು ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥ ನಾರಾಯಣ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಇಲಾಖೆ ಮಂಗಳ ವಾರ ನಗರದಲ್ಲಿ ಆಯೋಜಿಸಿದ್ದ ಎಲಿವೇಟ್‌ ಕಾಲ್‌ -2, ಉನ್ನತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅನ್ವೇಷಕರು ಭರವಸೆ ಮೂಡಿಸುತ್ತಿದ್ದು, ಪ್ರತಿಭಾನ್ವಿತರು ಹೊರಹೊಮ್ಮುತ್ತಿದ್ದಾರೆ. ಪ್ರತಿಭಾನ್ವಿತರ ಪ್ರಯ ತ್ನಕ್ಕೆ ಸರ್ಕಾರದ ಬೆಂಬಲ ಇದೆ ಎಂದು ತಿಳಿಸಿದರು. ನಾಡಿನಲ್ಲಿರುವ ಪ್ರತಿಭಾನ್ವಿತರನ್ನು ಗುರು ತಿಸಿ ಬೆಂಬಲಿಸಲು “ಗ್ರಾಂಟ್‌ ಇನ್‌ ನೀಡ್‌’ ಕಾರ್ಯಕ್ರಮ ರೂಪಿಸಲಾಗಿದೆ. ಅದ ಕ್ಕಾ  ಗಿಯೇ ಬಜೆಟ್‌ನಲ್ಲಿ ಇನ್ನೋವೇಷನ್‌ ಹಬ್‌ ಸ್ಥಾಪನೆ ಪ್ರಸ್ತಾಪ ಮಾಡಲಾಗಿದೆ ಎಂದರು.

ಈಸ್‌ ಆಫ್ ಡೂಯಿಂಗ್‌ ಬಿಸಿನೆಸ್‌ (ಸುಲಲಿತ ವ್ಯವಹಾರ) ಪರಿಣಾಮಕಾರಿ ಜಾರಿ ಮೂಲಕ ನಂ. 1 ಸ್ಥಾನದಲ್ಲಿರುವುದು ಕರ್ನಾಟಕದ ಉದ್ದೇಶವಾಗಿದೆ. ಉದ್ದಿಮೆಗೆ ಯಾವುದೇ ರೀತಿಯ ಅಡಚಣೆ ಇಲ್ಲದೇ ಸಂತೋಷದಿಂದ ಕೆಲಸ ಮಾಡುವ ವ್ಯವಸ್ಥೆ ನಿರ್ಮಾಣ ಮಾಡಿ, ವಿಶ್ವದಲ್ಲೇ ಕರ್ನಾಟಕ ಉದ್ಯಮಿ ಮತ್ತು ಉದ್ಯಮ ಸ್ನೇಹಿ ಸ್ಥಳ ಆಗಿರಬೇಕು ಎಂದು ಪಣ ತೊಟ್ಟು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಉತ್ತರ ಅಮೆರಿಕ, ಯೂರೋಪ್‌ಗಳ ಗಮನ ಸೆಳೆಯುವಲ್ಲಿ ಬೆಂಗಳೂರು ಯಶಸ್ವಿಯಾಗಿದೆ. ಆದರೆ, ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ನಮ್ಮ ಬೆಂಗಳೂರಿನ ಸಾಮರ್ಥ್ಯ ಗೊತ್ತಿಲ್ಲ. ಏಷ್ಯಾದ ಇತರೆ ರಾಷ್ಟ್ರಗಳಿಗೆ ಬೆಂಗಳೂರಿನ ಸಾಮರ್ಥ್ಯ ತಿಳಿಸಿಕೊಡುವ ಪ್ರಯತ್ನಗಳು ಆಗ ಬೇಕು. ಹೊರಗಿನಿಂದ ಬಂದವರೂ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ತೋರುವುದನ್ನು ಕಂಡಾಗ ಬಹಳ ಸಂತೋಷವಾಗುತ್ತದೆ.

ಬೆಂಗಳೂರಿನ ಅಭಿವೃದ್ಧಿಗೆ ಅವರ ನಿಸ್ವಾರ್ಥ ಸೇವೆ ದೊಡ್ಡದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಎಲಿವೇಟ್‌ ಕರ್ನಾಟಕದ ನಿರ್ದೇಶಕ ಪ್ರಶಾಂತ್‌ ಮಿಶ್ರಾ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಕುಮಾರ್‌ ನಾಯಕ್‌ ಸೇರಿ ದಂತೆ ಹಲವರು ಉಪಸ್ಥಿತರಿದ್ದರು.

113 ಸ್ಟಾರ್ಟ್‌ಅಪ್‌ಗಳ ವಿಜೇತರ ಘೋಷಣೆ: ನಾವೀನ್ಯತೆಯುಳ್ಳ ವಾಣಿಜ್ಯೋದ್ಯಮಿಗಳಿಗೆ 50 ಲಕ್ಷ ರೂ. ವರೆಗೆ ಅನುದಾನ ನೀಡುವುದೇ ಎಲಿವೇಟ್‌, ಉನ್ನತಿ ಕಾರ್ಯಕ್ರಮವಾಗಿದ್ದು, 113 ಸ್ಟಾರ್ಟ್‌ಅಪ್‌ಗ್ಳ ವಿಜೇತರನ್ನು ಘೋಷಿಸಲಾಯಿತು. ಬೆಂಗಳೂರಿನ 78, ಧಾರವಾಡದ 13, ಬೆಳಗಾವಿ 4, ಕಲಬುರಗಿ ಮತ್ತು ತುಮಕೂರಿನಿಂದ ತಲಾ 3, ಬೀದರ್‌, ಬೆಂಗಳೂರು ಗ್ರಾಮೀಣ, ಬಳ್ಳಾರಿಯ ತಲಾ 2, ರಾಮನಗರ, ಚಿಕ್ಕಮಗಳೂರು, ಮೈಸೂರು, ರಾಯಚೂರು, ಹಾವೇರಿ ಹಾಗೂ ಉಡುಪಿಯ ತಲಾ 1 ಸ್ಟಾರ್ಟ್‌ಅಪ್‌ ಸ್ಪರ್ಧೆಯಲ್ಲಿ ಗೆದ್ದಿವೆ.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.