ಆತ್ಮವಿಶ್ವಾಸದಿಂದ ಜನಗಣತಿ ಕಾರ್ಯನಿರ್ವಹಿಸಿ
Team Udayavani, Mar 12, 2020, 3:00 AM IST
ಚಾಮರಾಜನಗರ: ಜನಗಣತಿ ದೇಶದ ಅಭಿವೃದ್ಧಿಯ ನೀಲನಕ್ಷೆಯಾಗಿದೆ. ಇದರ ಕಾರ್ಯವನ್ನು ನಿಖರ, ಆತ್ಮವಿಶ್ವಾಸ ಹಾಗೂ ಸಮರ್ಥವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯದಿಂದ ಭಾರತದ ಜನಗಣತಿ – 2021ರ ಕುರಿತು ಕ್ಷೇತ್ರ ತರಬೇತುದಾರರಿಗೆ ಆಯೋಜಿಸಲಾಗಿರುವ 5 ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಹಿತಿ ನಿಖರವಾಗಿರಲಿ: ಜನಗಣತಿಯನ್ನು ರಾಷ್ಟ್ರದ ಪ್ರಗತಿಯ ಸೂಚಕವಾಗಿ ಪರಿಗಣಿಸಲಾಗುತ್ತದೆ. ಈ ಅಂಕಿ ಅಂಶದ ಆಧಾರದಲ್ಲೇ ಯೋಜನೆಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಈ ಮಾಹಿತಿಯು ನಿಖರವಾಗಿರಬೇಕು. ಇದಕ್ಕಾಗಿ ಈ ಪ್ರಕ್ರಿಯೆಯ ಮಹತ್ವ ಅರಿತು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ತರಬೇತುದಾರರು ಮುಂದೆ ಗಣತಿದಾರರಿಗೆ ಜನಗಣತಿ ಪ್ರಕ್ರಿಯೆ ಕುರಿತು ತರಬೇತಿ ನೀಡುವುದರಿಂದ, ಈ ಕಾರ್ಯಾಗಾರದಲ್ಲಿ ಎಲ್ಲಾ ಪ್ರಶ್ನೆ ಹಾಗೂ ಸಮಸ್ಯೆಗಳಿಗೆ ಉತ್ತರ ಪಡೆದುಕೊಳ್ಳಬೇಕು. ಜನಗಣತಿಯ ಬಗ್ಗೆ ಸಂಪೂರ್ಣ ಮಾಹಿತಿ ಅರಿಯಬೇಕು. ಗಣತಿಯ ಬಗೆಗೆ ಜ್ಞಾನ ಮತ್ತು ಪರಿಜ್ಞಾನ ಎರಡನ್ನೂ ಹೊಂದಿರಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯ ಎಂದರು.
ಆಲೋಚನಾ ಶಕ್ತಿ, ತಾಳ್ಮೆ ಇರಲಿ: ಕ್ಷೇತ್ರ ತರಬೇತುದಾರರು ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸೂಪರೆಸರ್, ಗಣತಿದಾರರಿಗೆ ತರಬೇತಿ ನೀಡುವುದರಿಂದ, ಅವರ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುವಂತ ಆಲೋಚನಾ ಶಕ್ತಿ ಹಾಗೂ ತಾಳ್ಮೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಕ್ಷೇತ್ರ ತರಬೇತಿದಾರರು ತರಬೇತಿ ಅವಧಿಯಲ್ಲಿ ಜನಗಣತಿ ಕಾರ್ಯ ಕುರಿತು ಮನವರಿಕೆ ಮಾಡಿಕೊಂಡು ಆತ್ಮವಿಶ್ವಾಸ ಪಡೆದುಕೊಂಡರೆ ಗಣತಿದಾರರನ್ನು ಸಹ ಜನಗಣತಿ ಕಾರ್ಯಕ್ಕೆ ಸಜ್ಜುಗೊಳಿಸಬಹುದು ಎಂದು ಸಲಹೆ ಮಾಡಿದರು.
ಗಣತಿ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣ: ಗಣತಿ ಪ್ರಕ್ರಿಯೆ ಈಗ ಸಂಪೂರ್ಣ ಡಿಜಿಟಲೀಕರಣಗೊಂಡಿದ್ದು, ಗಣತಿ ಕಾರ್ಯವನ್ನು ಸುಲಭಗೊಳಿಸಿದೆ. ಮೊಬೈಲ್ ಆ್ಯಪ್ ಮೂಲಕ ಗಣತಿ ಕಾರ್ಯವನ್ನು ನಿರ್ವಹಿಸಬೇಕಿದೆ. ಎಲ್ಲವನ್ನೂ ಅರ್ಥೈಸಿಕೊಂಡು, ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ದೋಷ ರಹಿತವಾಗಿ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಬೇಕು. ಗುಣಮಟ್ಟದ ಗಣತಿಯನ್ನು ಸಾಧಿಸುವಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ತಿಳಿಸಿದರು.
ರೇಷ್ಮೆ ಇಲಾಖೆಯ ಉಪನಿರ್ದೇಶಕ ಹಾಗೂ ಮಾಸ್ಟರ್ ಟ್ರೆçನರ್ ವೃಷಬೇಂದ್ರ ಕುಮಾರ್ ಮತ್ತು ಉಪನ್ಯಾಸಕರು ಹಾಗೂ ಮಾಸ್ಟರ್ ಟ್ರೆçನರ್ ಪೊ›.ಗಣೇಶ್ ಕ್ಷೇತ್ರ ತರಬೇತುದಾರರಿಗೆ ಜನಗಣತಿ ಕುರಿತು ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಜನಗಣತಿಯ ಜಿಲ್ಲಾ ನೋಡಲ್ ಅಧಿಕಾರಿ ಜಗದೀಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.