ಜೆಡಿಎಸ್‌ಗೆ ಡಿಕೆಶಿ ಎಫೆಕ್ಟ್

Team Udayavani, Mar 12, 2020, 3:07 AM IST

jds logo

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಗಾದಿ ಯಾರ ಪಾಲಾಗುವುದೋ ಎಂದು ಎದುರು ನೋಡುತ್ತಿದ್ದ ಜೆಡಿಎಸ್‌ಗೆ, ಡಿ.ಕೆ.ಶಿವಕುಮಾರ್‌ಗೆ ಪಟ್ಟ ದೊರೆತಿ ರುವುದು ಸ್ವಲ್ಪ ಮಟ್ಟಿಗೆ ಆತಂಕ ಮೂಡಿಸುವುದರ ಜತೆಗೆ ಪಕ್ಷ ಸಂಘಟನೆಗೆ ಬದಲಿ ಕಾರ್ಯತಂತ್ರ ರೂಪಿಸಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್‌ ಅವರಿಗೆ ಕೆಪಿಸಿಸಿ ಪಟ್ಟ ಸಿಕ್ಕಿರುವುದರಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಭದ್ರಕೋಟೆ ಕಾಯ್ದುಕೊಳ್ಳುವ ಸವಾಲು ಎದುರಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿದ್ದವರ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆಗೆ ಹೋಗಿ ಬಹುಮತ ಬಂದರೆ ಸಹಜವಾಗಿ ಮುಖ್ಯಮಂತ್ರಿ ರೇಸ್‌ನಲ್ಲಿ ಅವರೂ ಸ್ಪರ್ಧಿಯಾಗುವುದರಿಂದ ಜೆಡಿಎಸ್‌ಗೆ ಇದೀಗ ಸಮುದಾಯದ ಮತ “ಶಿಫ್ಟ್’ ಆಗುತ್ತಾ ಎಂಬ ಆತಂಕ ಕಾಡುವಂತಾಗಿದೆ. ಹಳೇ ಮೈಸೂರು ಭಾಗದಲ್ಲಿ ಅದರಲ್ಲೂ, ಪ್ರಬಲ ಒಕ್ಕಲಿಗ ಸಮುದಾಯದ ಇಡಗಂಟು ಬೆಂಬಲ ದಿಂದ ಕಿಂಗ್‌ ಮೇಕರ್‌ ಆಗುತ್ತಿದ್ದ ಜೆಡಿಎಸ್‌ಗೆ, ಒಕ್ಕಲಿಗ ಸಮುದಾಯದವರೇ ಆದ ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹೊಸ ತಂತ್ರಗಾರಿಕೆಗೆ ಮೊರೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗ ಳೂರು ನಗರ , ಗ್ರಾಮಾಂತರ, ಬಿಬಿಎಂಪಿ, ತುಮ ಕೂರು, ಮಂಡ್ಯ, ಮೈಸೂರು, ಚಾಮರಾಜನಗರ , ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಕ್ಕಲಿಗರ ಪ್ರಭಾವ ಇರುವುದರಿಂದ ಆ ಭಾಗಗಳಲ್ಲಿ ಜೆಡಿಎಸ್‌ಗೆ ಸವಾಲು ಎದುರಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪೈಕಿ ಯಾವ ಕಡೆಗೆ ಹೋಗಬೇಕು ಎಂದು ಮುಖ ಮಾಡಿದ್ದ ಜೆಡಿಎಸ್‌ ಶಾಸಕರು, ಇದೀಗ ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಕಾಂಗ್ರೆಸ್‌ನ್ನು ಆಯ್ಕೆ ಮಾಡಿಕೊಂಡರೆ, ಜೆಡಿಎಸ್‌ಗೆ ತಮ್ಮವರನ್ನು ಹಿಡಿದಿಟ್ಟುಕೊಳ್ಳಬೇಕಾಗುತ್ತದೆ.

ಹೀಗಾಗಿ, ಪಕ್ಷ ಸಂಘಟನೆಗಾಗಿ ಜೆಡಿಎಸ್‌ ಕಾರ್ಯತಂತ್ರ ಬದಲಿಸಿಕೊಳ್ಳಲು ಇತರ ಸಮುದಾಯಗಳತ್ತ ಚಿತ್ತ ಹರಿಸಬೇಕಾಗಿದೆ. ಹೊಣೆಗಾರಿಕೆ ವಿಚಾರದಲ್ಲೂ ನಿಲುವು ಬದಲಾಯಿಸಿಕೊಳ್ಳಬೇಕಿದೆ. ಈಗಾಗಲೇ ಶಾಸಕ ಜಿ.ಟಿ.ದೇವೇಗೌಡ ಪಕ್ಷ ದಿಂದ ಮಾನಸಿಕವಾಗಿ ದೂರವೇ ಸಾಗಿದ್ದಾರೆ. ಮಧು ಬಂಗಾರಪ್ಪ ಪಕ್ಷ ಬಿಡುವ ಯೋಚನೆಯಲ್ಲಿ ದ್ದಾರೆ. ಇಂತಹ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿವ ಹಿನ್ನೆಲೆಯಲ್ಲಿ ಪಕ್ಷದ ಒಕ್ಕಲಿಗ ಮುಖಂಡರು ಕಾಂಗ್ರೆಸ್‌ನತ್ತ ಕಣ್ಣು ಹಾಯಿಸಿದರೆ ಕಷ್ಟವಾಗಬಹುದು.

ಜೋಡೆತ್ತು ಜಿದ್ದಾಜಿದ್ದಾ?: ಕಳೆದ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್‌-ಜೆಡಿಎಸ್‌ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚಿಸಿ ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ನಂತರ ಅವರ ಸಂಪುಟದಲ್ಲಿ ಡಿ.ಕೆ.ಶಿವಕುಮಾರ್‌ ಸಚಿವ ರಾಗಿ ಕೆಲಸ ಮಾಡಿದರು. ನಂತರ ಎದುರಾದ ಉಪ ಚುನಾವಣೆ, ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ಜೋಡೆತ್ತುಗಳ ರೀತಿ ಬಿಜೆಪಿ ವಿರುದ್ಧ ಹೋರಾಟ ಮಾಡಿದ್ದರು. ಸಮ್ಮಿಶ್ರ ಸರ್ಕಾರ ಪತನದ ನಂತರವೂ ಇಬ್ಬರ ಬಾಂಧವ್ಯ ಮುಂದುವರಿ ದಿತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ಪಟ್ಟ ಶಿವಕುಮಾರ್‌ಗೆ ಒಲಿದಿರುವುದರಿಂದ ಮುಂದೆ ಇಬ್ಬರ ರಾಜಕೀಯ ಹೋರಾಟ ಜಿದ್ದಾಜಿದ್ದಿನ ಸ್ವರೂಪ ಪಡೆಯುತ್ತಾ ಅಥವಾ ಮುಂದುವರಿ ಯುತ್ತಾ ಎಂದು ನೋಡಬೇಕಾಗಿದೆ.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.