ಕಲಬುರಗಿ: ಪಿಎಚ್.ಡಿ ಪ್ರಶ್ನೆ ಪತ್ರಿಕೆ ಬಹಿರಂಗ ಆರೋಪ; ನಾಲ್ಕನೇ ಬಾರಿ ಪರೀಕ್ಷೆ ಮುಂದೂಡಿಕೆ
Team Udayavani, Mar 12, 2020, 2:40 PM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಮತ್ತೊಂದು ವಿವಾದವನ್ನು ಎಳೆದುಕೊಂಡಿದ್ದು, ಪಿಎಚ್.ಡಿ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗಗೊಳಿಸಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಪರೀಕ್ಷೆಯನ್ನೇ ಮುಂದೂಡಿದೆ.
ಗುರುವಾರ ನಡೆದ ರಾಜ್ಯಶಾಸ್ತ್ರ ವಿಭಾಗದ 9 ಪಿಎಚ್.ಡಿ. ಸೀಟುಗಳಿಗೆ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಲಕೋಟೆಯಿಂದ ಬಿಚ್ಚದೆ ಹಾಗೆ ನೀಡಲಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಮೌಲ್ಯಮಾಪನ ಕುಲಸಚಿವರ ಕಚೇರಿ ಮುಂದೆ ದಿಢೀರನೆ ಪ್ರತಿಭಟನೆ ನಡೆಸಿ, ಕುಲ ಸಚಿವ ಪ್ರೊ.ಸಂಜೀವ ಕುಮಾರ್ ಗೆ ಮುತ್ತಿಗೆ ಹಾಕಿ, ಪರೀಕ್ಷಾ ಕೇಂದ್ರದಲ್ಲಿ ಲಕೋಟೆಯನ್ನು ಅಭ್ಯರ್ಥಿಗಳು ಮುಂದೆ ಬಿಚ್ಚಲ್ಲ. ಹೀಗಾಗಿ ಪರೀಕ್ಷೆಗೆ ಮುನ್ನವೇ ತಮಗೆ ಬೇಕಾದವರಿಗೆ ಪ್ರಶ್ನೆಪತ್ರಿಕೆ ನೀಡಿರುವ ಅನುಮಾನ ಇದೆ. ಪಾರದರ್ಶಕ ಪರೀಕ್ಷೆ ನಡೆಸುವಲ್ಲಿ ವಿವಿ ವಿಫಲವಾಗಿದೆ ಎಂದು ಪ್ರತಿಭಟನಾ ನಿರತ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.
2 ಬಾರಿ ಮುಂದೂಡಿಕೆ ಆಗಿತ್ತು: ಪಿಎಚ್.ಡಿ. ಪರೀಕ್ಷೆ ಈ ಹಿಂದೆ ಎರಡು ಬಾರಿ ಮುಂದೂಡಿಕೆಯಾಗಿ ಗುರುವಾರ ಮೂರನೆಯ ಬಾರಿಗೆ ಪರೀಕ್ಷೆ ನಡೆಯುತ್ತಿತ್ತು. ಮೊದಲ ಬಾರಿ ಪ್ರವೇಶ ಪರೀಕ್ಷೆ ನಡೆದಾಗ ಪ್ರಶ್ನೆಪತ್ರಿಕೆಯನ್ನು ಕೇವಲ ಇಂಗ್ಲಿಷ್ ನಲ್ಲಿ ಕೊಡಲಾಗಿತ್ತು. ಕನ್ನಡದಲ್ಲಿ ಪ್ರಶ್ನೆ ಪತ್ರಿಕೆ ಇಲ್ಲದಿರುವ ಕಾರಣ ಟೀಕೆಗೆ ಗುರಿಯಾಗಿ ಮುಂದೂಡಲಾಗಿತ್ತು.
ಎರಡನೇ ಬಾರಿ ಪರೀಕ್ಷೆ ನಡೆಸಿದರೂ, ಕೀ ಉತ್ತರದಲ್ಲಿ ಸಾಕಷ್ಟು ತಪ್ಪಿದ್ದವು. ಆಗ ಕೀ ಉತ್ತರವನ್ನು ಸರಿಪಡಿಸುವ ಬದಲಿಗೆ ಪರೀಕ್ಷೆಯನ್ನು ರದ್ದು ಮಾಡಿತ್ತು. ಇದೀಗ ಮೂರನೇ ಬಾರಿಗೆ ಪ್ರಶ್ನೆ ಪತ್ರಿಕೆಯನ್ನು ಬಹಿರಂಗಗೊಳಿಸಿದ ಆರೋಪ ಕೇಳಿ ಬಂದಿದೆ.
ಈಗ ಮತ್ತೆ ಮುಂದೂಡಿಕೆ: ಪ್ರಶ್ನೆ ಪರೀಕ್ಷೆ ಬಹಿರಂಗವಾದ ಆರೋಪ ಹಿನ್ನೆಲೆಯಲ್ಲಿ ಯಾವ ಅಭ್ಯರ್ಥಿಗಳು ಪರೀಕ್ಷೆಗೆ ಕೂಡಲಿಲ್ಲ. ಕುಲಸಚಿವ ಪ್ರೊ.ಸಂಜೀವಕುಮಾರ್ ಅಭ್ಯರ್ಥಿಗಳ ಮನವೊಲಿಸಲು ಪ್ರಯತ್ನ ಪಟ್ಟರೂ ಪಟ್ಟ ಸಡಿಸಲಿಲ್ಲ. ಆದ್ದರಿಂದ ಗುರುವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗುತ್ತದೆ ಎಂದು ಕುಲಸಚಿವರು ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.