ವೈದ್ಯರ ಕೊರತೆಗೆ ನೇರ ನೇಮಕ ಮದ್ದು
Team Udayavani, Mar 13, 2020, 7:00 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರು ಮತ್ತು ದಾದಿಯರ ಹುದ್ದೆ ಗಳಿಗೆ ನೇರ ನೇಮಕ ಮಾಡಿ ಆದಷ್ಟು ಶೀಘ್ರ ಭರ್ತಿ ಮಾಡ ಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ವಿಧಾನಸಭೆ ಕಲಾಪ ಸಂದರ್ಭ ಜೆಡಿಎಸ್‌ನ ಎ.ಟಿ. ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಎಲ್ಲ ಭಾಗಗಳಲ್ಲಿ ವೈದ್ಯರ ಸಮಸ್ಯೆ ಇದೆ. ಸರಕಾರಿ ಆಸ್ಪತ್ರೆಗಳಲ್ಲಿ ಇರುವ ವೈದ್ಯರ ಕೊರತೆಯಿಂದ ಜನಪ್ರತಿನಿಧಿಗಳು ಮುಜುಗರ ಅನುಭವಿಸುವ ಸ್ಥಿತಿ ಇದೆ. ಈ ಸಮಸ್ಯೆಯನ್ನು ಶೀಘ್ರ ಗತಿಯಲ್ಲಿ ಪರಿಹರಿಸ ಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಹೇಳಿದ್ದೇನೆ. ನಾನೂ ಜಿಲ್ಲೆಗಳಿಗೆ ಭೇಟಿ ನೀಡಿದಾಗ ಸರಕಾರಿ ಆಸ್ಪತ್ರೆಗಳಲ್ಲಿಯೇ ವಾಸ್ತವ್ಯ ಹೂಡಿ ಅಲ್ಲಿನ ಸಮಸ್ಯೆ ಮತ್ತು ವೈದ್ಯರ ಸಮಸ್ಯೆ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇನೆ ಎಂದರು.
ಸರಕಾರಿ ಆಸ್ಪತ್ರೆಗಳಲ್ಲಿ ಇರುವ ವೈದ್ಯರ ಕೊರತೆ ನೀಗಿಸುವ ಮತ್ತು ಹೊಸ ನೇಮಕಾತಿ ಸಂಬಂಧ ವಿವರವಾದ ವರದಿ ನೀಡುತ್ತೇವೆ ಎಂದು ಹೇಳಿದ್ದಾರೆ. ವರದಿಗೆ ಸಾರ್ವಜನಿಕರ ಆಕ್ಷೇಪಣೆ ಸ್ವೀಕರಿಸಿ ಎಪ್ರಿಲ್ ಅಂತ್ಯದೊಳಗೆ ವೈದ್ಯರ ಕೊರತೆಯನ್ನು ಬಗೆಹರಿಸುತ್ತೇವೆ ಎಂದರು.
ಸದನದಲ್ಲಿ ವ್ಯಕ್ತವಾದ ಅಭಿಪ್ರಾಯದಂತೆ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೇರಿದ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೂ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೂ ವೇತನ ಮತ್ತಿತರ ಸವಲತ್ತುಗಳಲ್ಲಿ ತಾರತಮ್ಯ ಇದೆ. ಹೀಗಾಗಿ ಆರೋಗ್ಯ ಇಲಾಖೆಯಲ್ಲಿ ವೈದ್ಯರು ಕಾರ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.