ಮರಳು ದಂಧೆಗೆ ಕಡಿವಾಣ ಹಾಕಿ

ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಅಧಿಕಾರಿಗಳ ಮೌನ: ಆರೋಪ

Team Udayavani, Mar 13, 2020, 3:10 PM IST

13-March-17

ಕಂಪ್ಲಿ: ರಾಜಾರೋಷವಾಗಿ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳು ಅಗೆತದಿಂದ ಯುವಕನೊಬ್ಬ ನೀರಿನ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ ಹಿನ್ನೆಲೆ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವ ಜತೆಗೆ ಅಕ್ರಮ ಮರಳು ಅಗೆಯುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಯುವಕರು ಪಟ್ಟಣದಲ್ಲಿ ದಿಢೀರ್‌ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಎಂ. ರೇಣುಕಾಗೆ ಮನವಿ ಸಲ್ಲಿಸಿದರು.

ಇಲ್ಲಿನ ಕಂಪ್ಲಿ-ಕೋಟೆಯ ತುಂಗಭದ್ರಾ ನದಿಯದಲ್ಲಿ ಅಕ್ರಮ ಮರಳು ದಂಧೆಯು ರಾಜಾರೋಷವಾಗಿ ನಡೆಯುತ್ತಿದ್ದು, ನದಿ ಎಲ್ಲೆಂದರಲ್ಲಿ ಗುಂಡಿಗಳನ್ನು ಅಗೆದು ಬಂಡಿಗಳಲ್ಲಿ ಅಧಿಕಾರಿಗಳ ಭಯ ಇಲ್ಲದೇ ರಾಜಾರೋಷವಾಗಿ ಸಾಗಾಟ ಮಾಡಲಾಗುತ್ತಿದೆ. ಹಗಲು ರಾತ್ರಿಯನ್ನದೇ ದಂಧೆಕೋರರಿಂದ ಅಕ್ರಮ ಮರಳು ಧಂದೆ ನಡೆಯುತ್ತಿದೆ.

ಇಲ್ಲಿನ ನದಿಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದರೂ, ಅಧಿಕಾರಿಗಳು ಮೌನವಹಿಸಿರುವುದು ವಿಪರ್ಯಾಸವಾಗಿದೆ. ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ಸೇತುವೆ ಮಾರ್ಗದಲ್ಲಿ ಅಧಿಕಾರಿಗಳು ಓಡಾಡುತ್ತಾರೆ. ಆದರೆ, ಅಕ್ರಮ ಮರಳು ಧಂದೆ ನಡೆಸುತ್ತಿದ್ದರೂ, ಅಧಿಕಾರಿಗಳ ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ. ಬೇಕಾಬಿಟ್ಟಿ ಎಂಬಂತೆ ಅಕ್ರಮ ಮರಳು ಧಂದೆಯನ್ನು ನಿಲ್ಲಿಸಿ, ನಂತರ ಮತ್ತೇ ಅಕ್ರಮ ಧಂದೆ ನಡೆಯುವುದು ಸಾಮಾನ್ಯವಾಗಿದೆ.

ಅಧಿಕಾರಿಗಳ ನಿರ್ಲಕ್ಷéವೇ ಮುಖ್ಯ ಕಾರಣವಾಗಿದೆ. ಇಲ್ಲಿನ ನದಿಯಲ್ಲಿ ಮರಳು ಅಗೆತದಿಂದ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಕಳೆದ ದಿನ(ಮಂಗಳವಾರ)ದಂದು ಹೋಳಿ ಹಬ್ಬದ ನಿಮಿತ್ತ ಯುವಕರು ಬಣ್ಣ ಎರಚಿಕೊಂಡ ನಂತರ ನದಿ ಸ್ನಾನಕ್ಕೆ ತೆರಳಿದ್ದಾರೆ. ಆದರೆ ನದಿಯಲ್ಲಿ ಮರಳು ಅಗೆತದಿಂದ ಬಿದ್ದಿರುವ ಗುಂಡಿಗಳ ಮಧ್ಯದಲ್ಲಿ ನಂ. 10 ಮುದ್ದಾಪುರ ಗ್ರಾಪಂ ವ್ಯಾಪ್ತಿಯ ಯಲ್ಲಮ್ಮಕ್ಯಾಂಪಿನ ಯುವಕ ಕೆ. ಕಿರಣ್‌ ಮೃತಪಟ್ಟಿದ್ದಾನೆ. ಹೋಳಿ  ಬ್ಬದ ಸಂದರ್ಭದಲ್ಲಿ ಯುವಕರು ನದಿ ನೀರಿನ ಗುಂಡಿಯಲ್ಲಿ ಸಾವನ್ನಪ್ಪುತ್ತಿದ್ದರೂ ಅಧಿಕಾರಿಗಳ ಮಾತ್ರ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಈಗಲಾದರೂ ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲಾಧಿ ಕಾರಿಗಳು ಎಚ್ಚರವಹಿಸಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವ ಜತೆಗೆ ಅಕ್ರಮ ಮರಳು ಅಗೆಯುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು.

ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ನದಿ ನೀರಿನ ಗುಂಡಿಯಲ್ಲಿ ಇನ್ನಷ್ಟು ಜನರ ಸಾವಿಗೆ ಕಾರಣವಾಗಬಹುದು. ಈ ಅನಾಹುತ ನಡೆಯುವ ಮೊದಲು ಎರಡು ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸಿ, ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ಬಂದ್‌ ಮಾಡಬೇಕು. ಮತ್ತು ಮರಳು ದಂಧೆಕೋರರ ವಿರುದ್ಧ ಸೂಕ್ತಕ್ರಮವಹಿಸುವ ಮೂಲಕ ಮೃತ ಯುವಕನ ಆತ್ಮಕ್ಕೆ ಶಾಂತಿ ದೊರಕಿಸಿಕೊಡಬೇಕೆಂದು ಯುವಕರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮೌನೇಶ್‌, ಪ್ರಹ್ಲಾದ್‌, ಉಮೇಶ್‌, ರಾಕೇಶ್‌, ಓಬಳೇಶ್‌, ಜನಾರ್ಧನ, ಲಕ್ಷ್ಮಣ, ಕಾರ್ತಿಕ, ವಿಜಯ ಸೇರಿದಂತೆ ಯುವಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.