ಬಿಡದಿ ಕೈಗಾರಿಕಾ ಸಂಸ್ಥೆಗಳು ಸಾಮಾಜಿಕ ಕಳಕಳಿ ಹೊಂದಿವೆ
Team Udayavani, Mar 13, 2020, 4:11 PM IST
ರಾಮನಗರ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ಬಾಷ್ ಸೇರಿದಂತೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಗಳು ಸಾಮಾಜಿಕ ಕಳಕಳಿಯನ್ನು ಹೊಂದಿವೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎ.ಮಂಜುನಾಥ್ ಹೇಳಿದರು.
ಬಿಡದಿ ಹೋಬಳಿಯ ಅಬ್ಬನಕುಪ್ಪೆಯಲ್ಲಿ ಟಿಕೆಎಪಿ (ಟಯೋಟಾ ಕಿರ್ಲೋಸ್ಕ ರ್ ಆಟೋ ಪಾರ್ಟ್ಸ್) ವತಿಯಿಂದ ಸುಮಾರು 45ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ನೂತನ ಕೊಠಡಿಗಳ ಲೋಕಾರ್ಪಣೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿರುವ ಕೈಗಾರಿಕೆಗಳ ಸಾಮಾಜಿಕ ಕಾರ್ಯ ರಾಜ್ಯದ ಇತರೆ ಪ್ರದೇಶಗಳ ಕೈಗಾರಿಕೆಗಳಿಗೆ ಮಾದರಿಯಾಗಿದ್ದು, ಇಲ್ಲಿರುವ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗಾವಕಾಶ ನೀಡುವುದರ ಜೊತೆಗೆ ಶೈಕ್ಷಣಿಕ ಅಭಿವೃದ್ಧಿಗೂ ಕೊಡುಗೆ ನೀಡುತ್ತಿವೆ ಎಂದರು.
ಕೌಶಲ್ಯ ರೂಢಿಸಿಕೊಳ್ಳಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉಳಿಯಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಪದವೀಧರರು ಇಂದಿನ ಕಾಲಕ್ಕೆ ಅಗತ್ಯವಿರುವ ವೃತ್ತಿ ಕೌಶಲ್ಯ ರೂಢಿಸಿಕೊಳ್ಳಬೇಕು. ಹಾಗೂ ಶಿಕ್ಷಕರು, ಪೋಷಕರೂ ಈ ವಿಚಾರವನ್ನು ಅರಿತು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಕೊಡಬೇಕು ಎಂದರು.
ನೂತನ ಕಟ್ಟಡ ಲೋಕಾರ್ಪಣೆಗಳಿಸಿದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಮಾತನಾಡಿ, ಬಿಡದಿ ಬಳಿ ಕೈಗಾರಿಕೆಗಳು ಸ್ಥಾಪನೆಯಾದಾಗ ತಾವು ಸೇರಿದಂತೆ ಈ ಭಾಗದ ನಾಗರಿಕರು ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಬಂದು ತಮ್ಮ ವ್ಯಾಪಾರ ವಹಿವಾಟು ಮಾಡಿಕೊಂಡು ಹೋಗುತ್ತಾರೆ ಎಂಬ ಅಭಿಪ್ರಾಯವಿತ್ತು.
ಕೈಗಾರಿಕೆಗಳು ಸವಲತ್ತು ಕೊಟ್ಟಿವೆ: ಟಯೋಟಾ, ಬಾಷ್ ಹಾಗೂ ಕೋಕೋ ಕೋಲಾ ಸೇರಿದಂತೆ ಇನ್ನಿತರೆ ಕೈಗಾರಿಕೆಗಳು ಬಿಡದಿ ಸುತ್ತಲಿನ ಪ್ರದೇಶವೂ ಸೇರಿದಂತೆ ಜಿಲ್ಲೆಯ ಹಲವಾರು ಕಡೆ ತಮ್ಮ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಅನೇಕ ಸವಲತ್ತುಗಳನ್ನು ಕೊಟ್ಟಿವೆ. ಟಯೋಟಾ ಕಂಪನಿಯೊಂದೇ ಜಿಲ್ಲೆಯ ಸುಮಾರು 250ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಹಣ್ಣು ಮಕ್ಕಳಿಗಾಗಿ ಶೌಚಾಲಯವನ್ನು ನಿರ್ಮಿಸಿಕೊಟ್ಟಿದೆ. ಈ ಸವಲತ್ತುಗಳನ್ನು ಪಡೆದು ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಪಡೆಬೇಕು ಎಂದು ತಿಳಿಸಿದರು.
ಟಿಕೆಎಪಿ (ಟಯೋಟಾ ಕಿರ್ಲೋಸ್ಕರ್ ಆಟೋ ಪಾಟ್ಸì) ವ್ಯವಸ್ಥಾಪಕ ನಿರ್ದೇಶಕ ಮೋಹನ್ ಕುಮಾರ್ ಮಾತನಾಡಿ, ಟೊಯೋಟಾ ಸಂಸ್ಥೆ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ನಮ್ಮ ಸಂಸ್ಥೆ ಯಾವುದೇ ಕೆಲಸವನ್ನು ಸಿದ್ಧತೆ ಮತ್ತು ಬದ್ಧತೆ ಇಲ್ಲದೆ ಮಾಡುವುದಿಲ್ಲ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಬಿಡದಿ ಕೈಗಾರಿಕೆಗಳ ಸಂಘವು ಅವಿರತವಾಗಿ ಶ್ರಮಿಸುತ್ತಿದೆ ಎಂದರು.
ಟಿಕೆಎಪಿ ವ್ಯವಸ್ಥಾಪಕ ಪ್ರಸನ್ನ ಕುರ್ಮಾ ಮಾತನಾಡಿದರು. ಕೊಠಡಿಗಳ ಕೀಲಿ ಕೈಗಳನ್ನು ಶಾಲೆಯ ಮುಖ್ಯಸ್ಥರಿಗೆ ನೀಡಲಾಯಿತು. ಬಾಷ್ ಕಂಪನಿ ನಿರ್ದೇಶಕ ಡಾ.ಪುಂಡಲೀಕ ಕಾಮತ್, ಬಿಡದಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ನರಸಿಂಹಯ್ಯ, ಬಿಡದಿ ಪುರಸಭಾ ಸದಸ್ಯರಾದ ಸಿ.ಲೋಕೇಶ್, ವೆಂಕಟೇಶಮ್ಮ ರಾಮಕೃಷ್ಣಯ್ಯ, ರಾಕೇಶ್, ಮಹೀಪತಿ, ರಮೇಶ್ ಕುಮಾರ್, ಸಂತೋಷ್, ಸ್ಥಳೀಯ ಮುಖಂಡರಾದ ಬೆಟ್ಟಸ್ವಾಮಿ, ಸರ್ಕಾರಿ ಪ್ರಾಥಮಿಕ ಮುಖ್ಯಶಿಕ್ಷಕಿ ಹಾಗೂ ಶಿಕ್ಷಕ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.