ತಾಪಂ ಇಒಗಳಿಂದ ಗ್ರಾಮ ವಾಸ್ತವ್ಯ
Team Udayavani, Mar 13, 2020, 5:26 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಮುಖ್ಯಮಂತ್ರಿಯವರ ಗ್ರಾಮ ವಾಸ್ತವ್ಯ, ಸಚಿವರ ಗ್ರಾಮ ವಾಸ್ತವ್ಯ ಮುಂದುವರಿದು ಕೆಲವು ಕಡೆಗಳಲ್ಲಿ ಜಿಲ್ಲಾಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾಡಿ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಿದ್ದನ್ನು ನಾವು ಕೇಳಿದ್ದೇವೆ. ಈಗ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳೇ ಗ್ರಾಮ ವಾಸ್ತವ್ಯ ಮಾಡಿ ಜನರ ಸಮಸ್ಯೆಗೆ ಸ್ಪಂದಿಸಲು ಮುಂದಾಗಿದ್ದಾರೆ!
ಹೌದು, ಇಂಥದೊಂದು ನೂತನ ಕಾರ್ಯಕ್ರಮಕ್ಕೆ ಇಲ್ಲಿಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಮುಂದಾಗಿದ್ದಾರೆ. ತಾಲೂಕು ಮಟ್ಟದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿ ಜನರಿಗೆ ಸೌಲಭ್ಯ ಕಲ್ಪಿಸಲು ಜಿಪಂ ಸಿಇಒ ರಮೇಶ ದೇಸಾಯಿ ಈ ಹೊಸ ಹೆಜ್ಜೆ ಇಟ್ಟಿದ್ದಾರೆ. ಪ್ರತಿ ತಿಂಗಳಿಗೊಮ್ಮೆ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸ್ವಚ್ಛ ಭಾರತ ಮಿಷನ್, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಜನರ ಸಹಕಾರ ಹಾಗೂ ಅವರ ಪಾಲುದಾರಿಕೆ ಹೆಚ್ಚಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಂಗಳಿಗೆ ಕನಿಷ್ಟ ಒಂದು ದಿನ ಗ್ರಾಮ ವಾಸ್ತವ್ಯ ಏರ್ಪಡಿಸಲು ಸೂಚಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಂಬಂಧಿಸಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲು ಸೂಚಿಸಲಾಗಿದೆ. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರತಿ ತಿಂಗಳಿನ ಗ್ರಾಮ ವಾಸ್ತವ್ಯದ ಬಗ್ಗೆ ದಿನಚರಿ ಪುಸ್ತಕದಲ್ಲಿ ನಮೂದಿಸಿಕೊಳ್ಳಬೇಕು. ಆ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸ್ವಚ್ಛ ಭಾರತ ಮಿಷನ್ ಹಾಗೂ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿ ಸಿದ ಕಾರ್ಯಕ್ರಮಗಳಾದ ಮನೆ ಭೇಟಿ, ಗುಂಪು ಚರ್ಚೆ, ಪರಿಣಿತರಿಂದ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಗ್ರಾಮ ವಾಸ್ತವ್ಯದ ಕುರಿತು ಸೂಕ್ತ ಛಾಯಾಚಿತ್ರದೊಂದಿಗೆ ಜಿಪಂ ಕಚೇರಿಗೆ ವರದಿ ಕಳುಹಿಸಬೇಕಾಗಿದೆ. ಒಟ್ಟಾರೆ ಜಿಪಂ ಸಿಇಒ ಅವರು ತಾಲೂಕು ಮಟ್ಟದ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಮಾಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಎಷ್ಟರ ಮಟ್ಟಿಗೆ ಫಲಪ್ರದವಾಗುತ್ತದೆ ಎಂಬುದನ್ನು ಕಾಯ್ದು ನೋಡಬೇಕು.
ಸ್ವಚ್ಛ ಭಾರತ ಮಿಷನ್, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಹಾಗೂ ಯೋಜನೆಗಳಲ್ಲಿ ಜನರ ಪಾಲುದಾರಿಕೆ ಹೆಚ್ಚಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ತಿಂಗಳಿಗೊಮ್ಮೆ ಗ್ರಾಮವಾಸ್ತವ್ಯ ಮಾಡಲು ಸೂಚಿಸಲಾಗಿದೆ. ಇದರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ. –ರಮೇಶ ದೇಸಾಯಿ, ಸಿಇಒ, ಹಾವೇರಿ.
-ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.