ಶೃಂಗೇರಿ ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ
Team Udayavani, Mar 13, 2020, 5:11 PM IST
ಶೃಂಗೇರಿ: ಪಟ್ಟಣ ಪಂಚಾಯಿತಿ ಚುನಾವಣೆ ನಡೆದು 10 ತಿಂಗಳ ನಂತರ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ.
11 ಸದಸ್ಯರನ್ನು ಹೊಂದಿದ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ 7, ಕಾಂಗ್ರೆಸ್ 3 ಹಾಗೂ ಪಕ್ಷೇತರ 1 ಸ್ಥಾನ ಜಯ ಗಳಿಸಿವೆ. ಬಿಜೆಪಿ ಬಹುಮತ ಪಡೆದಿದ್ದು, ಅಧಿಕಾರಕ್ಕೆ ಏರಲಿದೆ. ಪಟ್ಟಣ ಪಂಚಾಯಿತಿಯ ಕಳೆದ ಮೂರು ಅವಧಿಗೆ ಬಿಜೆಪಿ ಹಿಡಿತ ಸಾಧಿಸಿ ಅಧಿಕಾರ ನಡೆಸಿದ್ದು, ಈಗ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದೆ.
ಅಧ್ಯಕ್ಷ ಸ್ಥಾನ ಮೀಸಲಾತಿ ಗೊಂದಲ ಹಿಂದಿನ ಆಡಳಿತ ಮಂಡಳಿ ಚುನಾವಣೆಯಲ್ಲೂ 9 ತಿಂಗಳು ತಡವಾಗಿದ್ದು, ಈ ಬಾರಿ ಮತ್ತೆ ಪುನಾರಾವರ್ತನೆಯಾಗಿದೆ. ಮೀಸಲಾತಿ ಘೋಷಿಸಿರುವ ಎರಡೂ ಸ್ಥಾನಗಳು ಬಿಜೆಪಿಯಲ್ಲಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಹರೀಶ್ ಶೆಟ್ಟಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಶ್ರೀವಿದ್ಯಾ ಶ್ರೀಧರ್ ಮತ್ತು ರಾಧಿಕಾ ಜಯಕುಮಾರ್ ಸ್ಪರ್ಧೆಯಲ್ಲಿದ್ದಾರೆ. ಆದರೂ, ಬಲ್ಲ ಮೂಲಗಳ ಪ್ರಕಾರ ಶ್ರೀವಿದ್ಯಾ ಶ್ರೀಧರ್ ಉಪಾಧ್ಯಕ್ಷರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.