ಉಪವಿದ್ಯುತ್ ಕೇಂದ್ರ: ಸಾಮರ್ಥ್ಯ ಹೆಚ್ಚಳ
ಪುತ್ತೂರು: 20 ಮೆಗಾವ್ಯಾಟ್ ಸಾಮರ್ಥ್ಯದ ಹೆಚ್ಚುವರಿ ಪರಿವರ್ತಕ ಅಳವಡಿಕೆ
Team Udayavani, Mar 14, 2020, 4:36 AM IST
ಪುತ್ತೂರು ವಿದ್ಯುತ್ ಉಪಕೇಂದ್ರಕ್ಕೆ ಹೊಸ ಪರಿವರ್ತಕ ಆಗಮಿಸಿದೆ.
ಪುತ್ತೂರು: ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳ ವಿದ್ಯುತ್ ಸರಬರಾಜು ವ್ಯವಸ್ಥೆಯ ಪ್ರಮುಖ ಕೇಂದ್ರವಾಗಿರುವ ಪುತ್ತೂರಿನ 110 ಕೆ.ವಿ. ವಿದ್ಯುತ್ ಉಪಕೇಂದ್ರದ ವಿದ್ಯುತ್ ಪ್ರಸರಣ ಸಾಮರ್ಥ್ಯ ಹೆಚ್ಚಳಗೊಳಿಸಲು ಹೆಚ್ಚುವರಿ 20 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಪರಿವರ್ತಕ ಅಳವಡಿಸಲಾ ಗುತ್ತಿದ್ದು, ಮಾರ್ಚ್ ಅಂತ್ಯಕ್ಕೆ ಕಾರ್ಯಾರಂಭಿಸಲಿದೆ. ಪುತ್ತೂರು 110 ಕೆ.ವಿ. ವಿದ್ಯುತ್ ಉಪಕೇಂದ್ರವು ಹಾಲಿ 40 ಮೆ.ವ್ಯಾ. ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಹೆಚ್ಚುವರಿಯಾಗಿ 20 ಮೆ.ವ್ಯಾ. ಸಾಮರ್ಥ್ಯದ ವಿದ್ಯುತ್ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ನಡೆಸಲಾಗುತ್ತಿದೆ. ಕೆಪಿಟಿಸಿಎಲ್ ವತಿಯಿಂದ ಈ ಕಾಮಗಾರಿಗಳು ನಡೆಯುತ್ತಿದ್ದು, ಟ್ರಾನ್ಸ್ ಫಾರ್ಮರ್ ಅಳವಡಿಸುವ ಕಾಮಗಾರಿ ಮಾತ್ರ ಬಾಕಿಯಿದೆ.
ಕ್ರೇನ್ ಮೂಲಕ ಅಳವಡಿಕೆ
ವಿದ್ಯುತ್ ಪರಿವರ್ತಕಕ್ಕೆ 1.75 ಕೋಟಿ ರೂ. ಹಾಗೂ ಅಳವಡಿಕೆ ಮತ್ತು ಸಾಗಾಟ ವೆಚ್ಚವಾಗಿ 75 ಲಕ್ಷ ರೂ. ಸೇರಿ ಒಟ್ಟು 2.50 ಕೋಟಿ ರೂ. ವಿನಿಯೋಗವಾಗಲಿದೆ. 20 ಮೆಗಾವ್ಯಾಟ್ ವಿದ್ಯುತ್ ಪರಿವರ್ತಕ ಪುತ್ತೂರು ವಿದ್ಯುತ್ ಉಪಕೇಂದ್ರಕ್ಕೆ ಆಗಮಿಸಿದ್ದು ಕ್ರೇನ್ ಮೂಲಕ ಅಳವಡಿಸಲಾಗುತ್ತದೆ.
ಪೂರೈಕೆ ಬಹೂಪಯೋಗಿ
ಹೆಚ್ಚುವರಿ ಯೋಜನೆಯ ಮೂಲಕ ಪುತ್ತೂರು 110 ಕೆ.ವಿ. ವಿದ್ಯುತ್ ಉಪಕೇಂದ್ರವು 60 ಮೆ.ವ್ಯಾ. ಸಾಮರ್ಥ್ಯದ ವಿದ್ಯುತ್ ಉಪಕೇಂದ್ರವಾಗಿ ಮೇಲ್ದರ್ಜೆಗೇರಲಿದೆ. ಆ ಮೂಲಕ ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಪ್ರಗತಿ ಕಾಣಲಿದೆ. 10 ವರ್ಷಗಳ ಹಿಂದೆ ಪುತ್ತೂರು 110 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿತ್ತು. ಅನಂತರದಲ್ಲಿ ಈಗ ಕಾಮಗಾರಿ ನಡೆಯುತ್ತಿರುವುದರಿಂದ ವಿದ್ಯುತ್ ಬಳಕೆದಾರರಲ್ಲಿ ಆಶಾಭಾವನೆ ಮೂಡಿಸಿದೆ.
ಕಡಿಮೆಯಾಗಲಿದೆ ಒತ್ತಡ
ಹಾಲಿ ತಾಲೂಕಿನ ಮಾಡಾವಿನಲ್ಲಿ 110 ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಈ ಉಪಕೇಂದ್ರವು ಕಾರ್ಯಾರಂಭಗೊಂಡಲ್ಲಿ ಸುಳ್ಯ, ಕಡಬ ಭಾಗದ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಇನ್ನಷ್ಟು ಪ್ರಗತಿ ಕಾಣುವ ಜತೆಗೆ ಪುತ್ತೂರು ಉಪಕೇಂದ್ರದ ಒತ್ತಡವನ್ನೂ ಕಡಿಮೆ ಮಾಡಲಿದೆ. ಇದರ ಜತೆಗೆ ಮಾಡಾವು, ಕೈಕಾರ, ಉಪ್ಪಿನಂಗಡಿ ಸಬ್ಸ್ಟೇಷನ್ ವಿಚಾರಗಳು ಪ್ರಗತಿಯಲ್ಲಿರುವುದು ಕಾರ್ಯರೂಪಕ್ಕೆ ಬಂದರೆ ಬಹುತೇಕ ಸಮಸ್ಯೆಗಳು ಬಗೆಹರಿಯುವ ವಿಶ್ವಾಸದಲ್ಲಿ ಮೆಸ್ಕಾಂ ಇದೆ.
ಪ್ರಸರಣ ವ್ಯವಸ್ಥೆ ಉತ್ತಮ
ಮೂರು ತಾಲೂಕುಗಳ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಹಂತ ಹಂತವಾಗಿ ಯೋಜನೆ ಹಾಕಿಕೊಳ್ಳಲಾಗಿದೆ. ಆ ಮೂಲಕ ವಿದ್ಯುತ್ ಪ್ರಸರಣ ವ್ಯವಸ್ಥೆಯನ್ನು ಉತ್ತಮಪಡಿಸಲಿದೆ. ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಲು ಕ್ರಮಗಳನ್ನು ಕೈಗೊಳ್ಳಲಿದೆ.
– ಗಂಗಾಧರ್, ಕಾರ್ಯಪಾಲಕ ಎಂಜಿನಿಯರ್, ಕೆಪಿಟಿಸಿಎಲ್, ಮಂಗಳೂರು
ರಾಜೇಶ್ ಪಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.