ನಾಳೆಯಿಂದ ಆರೆಸ್ಸೆಸ್‌ ಅಖಿಲ ಭಾರತೀಯ ಪ್ರತಿನಿಧಿ ಸಭಾ

Team Udayavani, Mar 14, 2020, 3:05 AM IST

naleinda

ಬೆಂಗಳೂರು: ನಗರದ ಹೊರವಲಯದ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ಮಾ.15ರಿಂದ 17ರವರೆಗೆ ನಡೆಯಲಿರುವ ಆರ್‌ಎಸ್‌ಎಸ್‌ “ಅಖಿಲ ಭಾರತೀಯ ಪ್ರತಿನಿಧಿ ಸಭಾ’ದಲ್ಲಿ 15 ಲಕ್ಷ ಸ್ವಯಂಸೇವಕರನ್ನು ಸಮಾಜ ಪರಿವರ್ತನೆಯ ಚಟುವಟಿಕೆಗಳಲ್ಲಿ ತೊಡಗಿಸುವ ಸಂಬಂಧ ಸುದೀರ್ಘ‌ ಚರ್ಚೆ ನಡೆಯಲಿದೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ ಅರುಣ್‌ ಕುಮಾರ್‌ ತಿಳಿಸಿದ್ದಾರೆ.

ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಆರ್‌ಎಸ್‌ಎಸ್‌ ನಡೆಸಿದ ಸರ್ವೇಕ್ಷಣೆಯಲ್ಲಿ 15 ಲಕ್ಷ ಸ್ವಯಂಸೇವಕರ ಮಾಹಿತಿ ಲಭ್ಯವಾಗಿದ್ದು, ಅವರು ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಸರ್ವೇಯಲ್ಲಿ ತಿಳಿಯಲಾಗಿದೆ. ಮುಂಬರುವ ದಿನಗಳಲ್ಲಿ ಅವರನ್ನು ಸಮಾಜ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಲು ರಾಷ್ಟ್ರೀಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಕರ್ನಾಟಕದಲ್ಲಿ 7 ಬಾರಿ ಸಭೆ ನಡೆದಿದ್ದು, ಅದರಲ್ಲಿ 5 ಬಾರಿ ಬೆಂಗಳೂರಿನಲ್ಲಿ ಸಭೆ ನಡೆದಿರುವುದು ವಿಶೇಷ. ಸಭಾದಲ್ಲಿ ಕಳೆದ ವರ್ಷ ಆರ್‌ಎಸ್‌ಎಸ್‌ನಲ್ಲಿ ನಡೆದ ವಿದ್ಯಮಾನಗಳು, ಕಾರ್ಯಗಳ ಅವಲೋಕನ, ವಾರ್ಷಿಕ ವರದಿ, ಸಂಘಟನೆಯ ವಿಸ್ತಾರ, ಹೊಸ ಆಯಾಮಗಳು, ಬರುವ ವರ್ಷದ ಯೋಜನೆ ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳ ಪ್ರವಾಸ ಯೋಜನೆ ಬಗ್ಗೆ ಚರ್ಚಿಸಲಾಗುವುದು. ಇದು ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವ ಪ್ರತಿನಿಧಿಗಳ ಸಭೆಯಾಗಿದ್ದು, 370 ವಿಧಿ ರದ್ದು, ಸಿಎಎ, ಎನ್‌ಆರ್‌ಸಿ ಸೇರಿದಂತೆ ಸಮಕಾಲೀನ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಮಾ.14ರಂದು ಕಾರ್ಯಕಾರಿಣಿ: ಮಾ.14ರಂದು ಅಖಿಲ ಭಾರತೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಆರ್‌ಎಸ್‌ಎಸ್‌ನ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಸಂಘದ ಪ್ರಮುಖರು ಕಾರ್ಯಸೂಚಿಯನ್ನು ಸಿದ್ಧಪಡಿಸಲಿದ್ದಾರೆ. ಮಾ. 15ರಂದು ಬೆಳಗ್ಗೆ 8.30ಕ್ಕೆ ಉದ್ಘಾಟನೆಯಾಗಲಿದೆ. ಸಭೆಯಲ್ಲಿ ಆರ್‌ಎಸ್‌ಎಸ್‌ನ ಸರಸಂಘ ಚಾಲಕ ಡಾ.ಮೋಹನ್‌ ಭಾಗವತ್‌, ಸರಕಾರ್ಯವಾಹ ಸುರೇಶ್‌ (ಭಯ್ನಾಜೀ) ಜೋಷಿ, ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ವಿಷ್ಣು ಸದಾಶಿವ ಕೊಕೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಅಧ್ಯಕ್ಷ ಸುಬ್ಬಯ್ಯ ಶಣ್ಮುಗಂ, ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ವನವಾಸಿ ಕಲ್ಯಾಣ, ವಿದ್ಯಾ ಭಾರತಿ, ಸಕ್ಷಮ ಸಂಘಟನೆ, ಭಾರತೀಯ ಮಜ್ದೂರ್‌ ಸಂಘ, ರಾಷ್ಟ್ರ ಸೇವಿಕಾ ಸಮಿತಿ, ಕಿಸಾನ್‌ ಸಂಘ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸೇರಿ ಸಂಘ ಪರಿವಾರದ 35 ಸಂಸ್ಥೆಗಳ ಪ್ರತಿನಿಧಿಗಳು, 44 ಪ್ರಾಂತಗಳನ್ನೊಳಗೊಂಡ 11 ಕ್ಷೇತ್ರದಿಂದ ಸಂಘದ ಪ್ರತಿನಿಧಿಗಳು ಸೇರಿ ದೇಶದ ಎಲ್ಲಾ ರಾಜ್ಯಗಳ 1,500ಕ್ಕೂ ಅಧಿಕ ಆರ್‌ಎಸ್‌ಎಸ್‌ನ ಕಾರ್ಯಕರ್ತರು ಹಾಗೂ ವಿಶೇಷ ಆಹ್ವಾನಿತರು ಪಾಲ್ಗೊಳ್ಳಲಿದ್ದಾರೆ. ಮಾ. 17ರಂದು ಸಂಘದ ಸರಕಾರ್ಯವಾಹ ಭಯ್ನಾಜೀ ಜೋಶಿ ಅವರು ಸಭೆ ತೆಗೆದುಕೊಂಡ ನಿರ್ಣಯಗಳನ್ನು ತಿಳಿಸಲಿದ್ದಾರೆ ಎಂದರು. ಗೋಷ್ಠಿ ಯಲ್ಲಿ ಆರ್‌ಎಸ್‌ಎಸ್‌ನ ಸಹ ಪ್ರಚಾರಕ ನರೇಂದ್ರ ಠಾಕೂರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿನಿಧಿಗಳಿಗೂ ತಪಾಸಣೆ ಕಡ್ಡಾಯ: ಕೊರೊನಾ ಹಿನ್ನೆಲೆ “ಅಖಿಲ ಭಾರತೀಯ ಪ್ರತಿನಿಧಿ ಸಭೆ’ಗೆ ಆಗಮಿಸುವ ಎಲ್ಲ ಪ್ರತಿನಿಧಿಗಳಿಗೂ ತಪಾಸಣೆ ಕಡ್ಡಾಯವಾಗಿದೆ. ಈ ಸಂಬಂಧ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಬ್ಬರಿಗೂ ಕೊರೊನಾ ವೈರಸ್‌ ಸೋಂಕು ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಳಪಡುವ ವ್ಯಕ್ತಿಯ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸಭೆಗೆ ಪ್ರವೇಶ ನೀಡಲು ಸಂಘ ಪರಿವಾರ ತೀರ್ಮಾನಿಸಿದೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.