ಕುಲದೀಪ್ ಸಿಂಗ್ ಸೆಂಗಾರ್ಗೆ 10 ವರ್ಷ ಜೈಲು
Team Udayavani, Mar 14, 2020, 12:55 AM IST
ಹೊಸದಿಲ್ಲಿ: ಅಪ್ರಾಪ್ತ ವಯಸ್ಕಳನ್ನು ಅತ್ಯಾಚಾರಕ್ಕೊಳಪಡಿಸಿದ ಆರೋಪದಲ್ಲಿ ಈಗಾಗಲೇ ಅಜೀವ ಜೈಲುಶಿಕ್ಷೆಗೊಳಗಾಗಿರುವ ಉತ್ತರಪ್ರದೇಶದ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಪರಿಸ್ಥಿತಿ ಈಗ ಇನ್ನೂ ಬಿಗಡಾಯಿಸಿದೆ.
ಸಂತ್ರಸ್ತೆಯ ತಂದೆಯ ಸಾವಿನ ಪ್ರಕರಣದಲ್ಲಿ ಸೆಂಗಾರ್ಗೆ 10 ವರ್ಷ ಕಠಿನ ಜೈಲು ಶಿಕ್ಷೆ ಜತೆಗೆ, 10 ಲಕ್ಷ ರೂ. ದಂಡ ವಿಧಿಸಿ, ದಿಲ್ಲಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಸೆಂಗಾರ್ ಸಹೋದರ ಅತುಲ್ ಸಿಂಗ್ಗೂ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ ವಿಧಿಸಲಾಗಿದೆ.
ದಂಡದ 20 ಲಕ್ಷ ರೂ. ಮೊತ್ತವನ್ನು ಮೃತ ವ್ಯಕ್ತಿಯ ಕುಟುಂಬಕ್ಕೆ ನೀಡಲು ಆದೇಶಿಸಲಾಗಿದೆ. 2017ರಲ್ಲಿ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಸೆಂಗಾರ್ ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಸಿಲುಕಿಸಿದ್ದಲ್ಲದೆ, ಪೊಲೀಸ್ ವಶದಲ್ಲಿದ್ದಾಗಲೇ ಆ ವ್ಯಕ್ತಿಯ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಲೆಗೈಯ್ಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್ಫರ್ಡ್ನಲ್ಲಿ ಭಾರತೀಯರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.